ಅಧಿಕಾರಿಗಳ ವಿರುದ್ಧ ದೂರು: ಅಮಾನತಿಗೆ ಸೂಚನೆ


Team Udayavani, Feb 1, 2022, 1:04 PM IST

ಅಧಿಕಾರಿಗಳ ವಿರುದ್ಧ ದೂರು: ಅಮಾನತಿಗೆ ಸೂಚನೆ

ಮದ್ದೂರು: ಸ್ಥಳೀಯ ಪಿಡಿಒಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಜತೆಗೆ ಸರ್ಕಾರದ ಅನುದಾನಬಳಕೆ ಮಾಡಿಕೊಳ್ಳದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹಾಗೂ ಅಮಾನತು ಮಾಡಲು ಮೇಲಧಿಕಾರಿಗಳಿಗೆ ಸೂಚಿ ಸುವುದಾಗಿ ಶಾಸಕ ಸುರೇಶ್‌ಗೌಡ ತಿಳಿಸಿದರು.

ತಾಲೂಕಿನ ಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾಸಭೆ ವೇಳೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಬಳಕೆ ಮಾಡಿಕೊಳ್ಳದೆ ಕಳಪೆ ಸಾಧನೆ ಮಾಡಿರುವ ಅಧಿಕಾರಿಗಳ ವಿರುದ್ಧಕಿಡಿಕಾರಿದರು. ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಮಾದರಿ ಗ್ರಾಮವಾಗಿಸಿ: ಅಮೃತ್‌ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಲಾರ್‌ ದೀಪ ಅಳವಡಿಕೆ, ಶಾಲಾ ಕಾಂಪೌಂಡ್‌ ನಿರ್ಮಾಣ, ಶೌಚಾಲಯ, ಆಟದ ಮೈದಾನ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡು ಮಾದರಿ ಗ್ರಾಮವನ್ನಾಗಿಸಬೇಕೆಂದು ಸ್ಥಳದಲ್ಲಿದ್ದ ತಾಪಂ ಇಒ ಸಂದೀಪ್‌ಗೆ ಸೂಚಿಸಿದರು.

ಅಭಿವೃದ್ಧಿಗೆ ವೇಗ ಕಲ್ಪಿಸಿ: ಮುಖ್ಯಮಂತ್ರಿ ವಿಕಾಸ್‌ ಯೋಜನೆಯಡಿ ಅರ್ಹ ಫ‌ಲಾನುಭವಿಗಳನ್ನುಆಯ್ಕೆಗೊಳಿಸಿ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ಜತೆಗೆ ಪಿಡಿಒಗಳು ಕರ್ತವ್ಯ ನಿರತ ಸ್ಥಳದಲ್ಲಿಹಾಜರಿದ್ದು, ಗ್ರಾಮಾಭಿವೃದ್ಧಿಗೆ ಒತ್ತು ನೀಡುವಂತೆನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಕೆಮಾಡಿಕೊಂಡು ಅಭಿವೃದ್ಧಿಗೆ ವೇಗ ಕಲ್ಪಿಸಬೇಕೆಂದರು.

ಮನೆ ನಿರ್ಮಿಸಿ: ಕೋಡಿನಾಗನಹಳ್ಳಿ, ಬಳ್ಳೇಕೆರೆ, ಬಿದರಕೋಟೆ, ನಂಬಿನಾಯಕನಹಳ್ಳಿ, ಆಬಲವಾಡಿ,ಹೊಸಗಾವಿ ಇತರೆ ಗ್ರಾಮಗಳಿಗೆ ಮೂಲ ಸೌಲಭ್ಯಕಲ್ಪಿಸುವ ಜತೆಗೆ ಚರಂಡಿ, ಕಾಂಕ್ರಿಟ್‌ ರಸ್ತೆ, ನರೇಗಾ ಯೋಜನೆ, ರಾಜೀವ್‌ಗಾಂಧಿ ವಸತಿ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫ‌ಲಾನುಭವಿಗಳಿಗೆ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದರು.

ಪಿಡಿಒಗಳು ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಗಮನಹರಿಸುವಜತೆಗೆ ಸರ್ಕಾರದ ಯೋಜನೆಗಳನ್ನು ಬಳಕೆಮಾಡಿಕೊಳ್ಳಲು ಅರಿವು ಮೂಡಿಸಬೇಕು.ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳನ್ನುಕೂಡಲೇ ಪೂರ್ಣಗೊಳಿಸಬೇಕೆಂದರು.

ಪ್ರತಿ ಗ್ರಾಪಂ ಪಿಡಿಒಗಳ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರಲ್ಲದೇ, ಕಾಮಗಾರಿಗಳಿಗೆತೊಡಕು ಉಂಟಾಗದಂತೆ ಅಗತ್ಯ ಕ್ರಮ ವಹಿಸಬೇಕೆಂದು ಸೂಚಿಸಿದರು.

ಸ್ಥಳೀಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಿದರು. ಈ ವೇಳೆ ತಾಪಂ ಇಒ ಸಂದೀಪ್‌, ನರೇಗಾಯೋಜನಾಧಿಕಾರಿ ಮಂಜುನಾಥ್‌, ಜಿಪಂ ಎಂಜಿನಿಯರ್‌ ಗುರಪ್ಪಶೆಟ್ಟಿ ಹಾಗೂ ಸ್ಥಳೀಯ ಪಿಡಿಒಗಳು ಹಾಜರಿದ್ದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.