ಸಂತೆಗೆ ಷರತ್ತುಬದ್ಧ ಅನುಮತಿ
Team Udayavani, Apr 12, 2020, 3:56 PM IST
ಮಂಡ್ಯ : ತಾಲೂಕಿನ ಬಸರಾಳು ಗ್ರಾಮದಲ್ಲಿ ಶನಿವಾರ ನಡೆಯುವ ಸಂತೆಗೆ ಸ್ಥಳೀಯ ಗ್ರಾಪಂ ಅಧಿಕಾರಿಗಳು ಷರತ್ತುಬದ್ಧ ಅವಕಾಶ ಕಲ್ಪಿಸಿದ್ದರು. ಸುತ್ತಮುತ್ತಲ ಹಳ್ಳಿಗಳಿಗೆ ಬಸರಾಳು ಕೇಂದ್ರ ಸ್ಥಾನವಾಗಿದ್ದು, ಪ್ರತಿ ಶನಿವಾರ ಗ್ರಾಮದಲ್ಲಿ ಸಂತೆ ನಡೆಯುತ್ತದೆ. ಸಂತೆಗೆ ಆಗಮಿಸುವ ಜನಸಾಮಾನ್ಯರು ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಕಳೆದ ಎರಡು ವಾರಗಳಿಂದ ಸಂತೆ ನಡೆಯದೆ ಒಂದು ಕಡೆ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ಪರಿತ ಪಿಸುತ್ತಿದ್ದರೆ, ಮತ್ತೂಂದು ಕಡೆ ಜನಸಾಮಾನ್ಯರು ಅಗತ್ಯ ವಸ್ತುಗಳನ್ನು ಖರೀದಿಸಲಾಗದೇ ತೊಂದರೆಗೆ ಸಿಲುಕಿದ್ದರು. ಇದನ್ನು ಮನಗಂಡ ಬಸರಾಳು ಗ್ರಾಪಂ ಪಿಡಿಒ ಚಂದ್ರಶೇಖರ್ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಷರತ್ತುಬದ್ಧ ಸಂತೆ ನಡೆಸಲು ಅನುಮತಿ ನೀಡಿದರು.
ನಾಲ್ಕು ಗಂಟೆಗಳ ಕಾಲ ಸಂತೆಯಲ್ಲಿ ವ್ಯಾಪಾರ ವಹಿವಾಟು ನಡೆಯಿತು. ಬೆಳಗ್ಗೆ 6ರಿಂದ 10ರವರೆಗೆ ಸಂತೆಯಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿದರು. ಈ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಪಂದಿಸಿದರು. ರೈತರು ತಮ್ಮ ಉತ್ಪನ್ನಗಳನ್ನು ಸಂತೆಯಲ್ಲಿ ಮಾರಾಟ ಮಾಡಿ ಬಂದ ಹಣದಲ್ಲಿ ತಮಗೆ ಅಗತ್ಯ ವಸ್ತುಗಳನ್ನು ಖರೀದಿಸಿ ಖುಷಿಯಿಂದ ಮನೆ ಕಡೆಗೆ ಸಾಗಿದರೆ, ಜನಸಾಮಾನ್ಯರು ಸಹ ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿ ಸಂತಸದಿಂದ ಸಾಗುತ್ತಿದ್ದುದು ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.