ಖಾತೆ ತೆರೆಯಲು ಕೈಕಸರತ್ತು; ದಳ-ಕಮಲಕ್ಕೆ ಬಂಡಾಯದ ಬಾವುಟ
Team Udayavani, May 30, 2022, 5:45 PM IST
ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹತ್ತಿರವಾಗುತ್ತಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಹಾಗೂ ರೈತ ಸಂಘದ ಅಭ್ಯರ್ಥಿಗಳ ಚುನಾವಣೆ ಪ್ರಚಾರದ ಕಾವು ಜೋರಾಗಿದೆ.
ಈ ನಡುವೆಯೇ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಒಟ್ಟು 1.33 ಲಕ್ಷ ಮತದಾರರಿದ್ದಾರೆ. ಇದರಲ್ಲಿ ಶೇ.50ರಷ್ಟು ಸರ್ಕಾರಿ ನೌಕರರೇ ಹೆಚ್ಚಿನ ಸಂಖ್ಯೆಯ ಮತದಾರರಿದ್ದು, ಮತ ಸೆಳೆಯಲು ಮುಂದಾಗಿದ್ದಾರೆ.
ಅಭ್ಯರ್ಥಿಗಳ ಚಿತ್ತ: ನಾಲ್ಕು ಜಿಲ್ಲೆಗಳಿಂದ 1.33 ಲಕ್ಷ ಮತದಾರರ ಪೈಕಿ ಸುಮಾರು 65 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರ ಮತದಾರರಿದ್ದಾರೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಶೇ.35 ಮತದಾರರು ಪದವೀಧರ ಇತರೆ ಮತದಾರರಾಗಿದ್ದಾರೆ. ಅದರಂತೆ ಅಭ್ಯರ್ಥಿಗಳು ಈ ವರ್ಗದ ಮತಗಳ ಮೇಲೆಯೇ ಹೆಚ್ಚು ಕಣ್ಣಿಟ್ಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂಜೆಡಿಎಸ್ ಅಭ್ಯರ್ಥಿಗಳು ತಮ್ಮ ಸರ್ಕಾರದಲ್ಲಿ ಸರ್ಕಾರಿ ನೌಕರರಿಗೆ ಸೌಲಭ್ಯ ಕಲ್ಪಿಸಿದ ಬಗ್ಗೆಯೇ ಅತಿ ಹೆಚ್ಚು ಪ್ರಚಾರದಲ್ಲಿ ತೊಡಗಿದ್ದಾರೆ.
ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ: ಕಳೆದ ಬಾರಿಯಚುನಾವಣೆ ಯಲ್ಲಿ ನಾಲ್ಕು ಜಿಲ್ಲೆಗಳಿಂದ ಶೇ.43ರಷ್ಟು ಮತದಾನ ನಡೆದಿತ್ತು. ಮಂಡ್ಯ ಶೇ.50, ಚಾಮರಾಜ ನಗರ ಶೇ.55, ಹಾಸನ ಶೇ.45, ಮೈಸೂರು ಗ್ರಾಮಾಂತರ ಶೇ.39, ಮೈಸೂರು ನಗರದಲ್ಲಿ ಶೇ.32ರಷ್ಟು ಮತದಾನ ನಡೆದಿತ್ತು. ಆದರೆ ಈ ಬಾರಿ ಕಳೆದ ಬಾರಿಗಿಂತ 10 ಸಾವಿರ ಮತದಾರರು ಹೆಚ್ಚಾಗಿರುವುದರಿಂದ ಬಿರುಸಿನ ಪ್ರಚಾರ ನಡೆಯು ತ್ತಿದೆ. ಅಭ್ಯರ್ಥಿ ಗಳು ಮತದಾರರ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ.
ಕೈ-ಕಮಲ ಕೆಸರೆರಚಾಟ : ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾದರಿ ನೀತಿಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಕೆಸರೆರಚಾಟಜೋರಾಗಿದೆ. ಬಿಜೆಪಿ ಅಭ್ಯರ್ಥಿ ಪರ ಸರ್ಕಾರದಸಚಿವರು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ ಎಂದುಕಾಂಗ್ರೆಸ್ ಆರೋಪ ಮಾಡಿದರೆ, ಬಿಜೆಪಿ ಕಾಂಗ್ರೆಸ್
ನಾಯಕರೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ. ಈ ಸಂಬಂಧ ಚುನಾವಣಾಧಿಕಾರಿಗೆ ಎರಡೂ ಪಕ್ಷಗಳಿಂದ ನೀಡಿರುವ ದೂರು ದಾಖಲಾಗಿದೆ.
ಕೈ ಗೆಲುವಿಗೆ ಕಸರತ್ತು : ದಕ್ಷಿಣ ಪದವೀಧರ ಕ್ಷೇತ್ರದಿಂದ ಇದುವರೆಗೂ ಒಂದು ಬಾರಿಯೂ ಕಾಂಗ್ರೆಸ್ ಗೆದ್ದಿಲ್ಲ. ಆದರೆ, ಈ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದ್ದು, ಖಾತೆ ತೆರೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಭದ್ರಕೋಟೆ ಬೇ ಧಿಸಿ ಜಯಭೇರಿ ಬಾರಿಸಿತ್ತು. ಅದರಂತೆ ಈ ಚುನಾವಣೆಯನ್ನೂ ತನ್ನ ತೆಕ್ಕೆಗೆ ಪಡೆಯಲು ಮುಂದಾಗಿದೆ.
ಜೆಡಿಎಸ್-ಕಮಲಕ್ಕೆ ಬಂಡಾಯದ ಬಿಸಿ :
ಜೆಡಿಎಸ್ ಹಾಗೂ ಬಿಜೆಪಿ ಪಾಳೆಯಕ್ಕೆ ಬಂಡಾಯದ ಬಿಸಿ ಕಾಡುತ್ತಿದೆ. ಜೆಡಿಎಸ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಮರ ಸಾರಿದ್ದು, ಅಭ್ಯರ್ಥಿ ಎಚ್.ಕೆ.ರಾಮು ಪರ ಚುನಾವಣೆ ಮಾಡದಂತೆ ತಮ್ಮ ಬೆಂಬಲಿಗರಿಗೆ ಬಹಿರಂಗವಾಗಿಯೇ ಸಂದೇಶ ರವಾನಿಸಿದ್ದಾರೆ. ಅಲ್ಲದೆ, ಜೆಡಿಎಸ್ ವರಿಷ್ಠರ ವಿರುದ್ಧವೂ ಗುಡುಗಿದ್ದಾರೆ. ಇದು ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರುವಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅತ್ತ ಬಿಜೆಪಿಯ ಬಂಡಾಯದ ಅಭ್ಯರ್ಥಿಯಾಗಿ ಎನ್.ಎಸ್. ವಿನಯ್ ಕೂಡ ನಾಮಪತ್ರ ಸಲ್ಲಿಸಿದ್ದು, ಕೇಸರಿ ಪಡೆಗೆ ಮಗ್ಗುಲ ಮುಳ್ಳಾಗುವ ಎಲ್ಲ ಸಾಧ್ಯತೆಗಳಿವೆ. ವರಿಷ್ಠರ ಮಾತನ್ನು ಮೀರಿ ವಿನಯ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅಲ್ಲದೆ, ನಾಲ್ಕೂ ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದು ಪಕ್ಷದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಚುನಾವಣೆಯಲ್ಲಿ ಕೈ-ರೈತಸಂಘ ಹೊಂದಾಣಿಕೆ? :
ಚುನಾವಣೆ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ರೈತಸಂಘದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ರೈತಸಂಘದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆ ಹೊಂದಾಣಿಕೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹೊಂದಾಣಿಕೆ ಬಗ್ಗೆ ಮಾತುಕತೆ ನಡೆಯಲಿವೆ ಎಂದು ಹೇಳಿಕೆ ನೀಡಿದ್ದರು.
-ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.