ಚಾಚುತ್ತಿರುವ ಕೊರೊನಾ ಕಬಂಧಬಾಹು

Team Udayavani, Jul 31, 2022, 4:42 PM IST

tdy-13

ಮಂಡ್ಯ: ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾಗಿದ್ದ ಕೊರೊನಾ ಸೋಂಕು ಮತ್ತೆ ಜಿಲ್ಲೆಯಲ್ಲಿ ನಿಧಾನವಾಗಿ ತನ್ನ ಕಬಂಧ ಬಾಹು ಚಾಚುತ್ತಿದೆ.

ಕಳೆದ ಒಂದು ವಾರದಿಂದ ಏರುಗತಿಯಲ್ಲಿ ಸೋಂಕು ಹೆಚ್ಚಾಗುತ್ತಿದೆ. ಜು.12ರವರೆಗೂ ಯಾವುದೇ ಸೋಂಕುಕಂಡು ಬಂದಿರಲಿಲ್ಲ. ನಂತರ ನಿಧಾನವಾಗಿಯೇಒಂದೊಂದು ಪ್ರಕರಣ ದಾಖಲಾಗುತ್ತಿದೆ.

ಸೋಂಕಿತರಿಗೆ ಹೋಂ ಐಸೋಲೇಷನ್‌: ಸೋಂಕು ಕಂಡು ಬಂದವರಿಗೆ ಹೋಂ ಐಸೋಲೇಷನ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಿಗೆ ಯಾವುದೇ ಲಕ್ಷಣ ಕಂಡು ಬರದಿದ್ದರೆ ಅವರನ್ನು ಮನೆಯಲ್ಲಿಯೇ ಐಸೋಲೇಷನ್‌ ಮಾಡಿ ಔಷಧ ವಿತರಿಸಲಾಗುತ್ತಿದೆ.

101410 ಪ್ರಕರಣ: ಮೊದಲ ಹಾಗೂ ಎರಡನೇ ಅಲೆಯಲ್ಲಿ 1,01,410 ಪ್ರಕರಣ ದಾಖಲಾಗಿವೆ. ಮಂಡ್ಯ 29625, ಮದ್ದೂರು 13247, ಮಳವಳ್ಳಿ 11675,ಪಾಂಡವಪುರ 10913, ಶ್ರೀರಂಗಪಟ್ಟಣ 11496, ಕೆ. ಆರ್‌.ಪೇಟೆ 11804, ನಾಗಮಂಗಲ 11660 ಹಾಗೂಹೊರ ಜಿಲ್ಲೆಯ 990 ಪ್ರಕರಣ ದಾಖಲಾಗಿದ್ದವು.

100623 ಗುಣಮುಖ: ಮಂಡ್ಯ 29391, ಮದ್ದೂರು 13143, ಮಳವಳ್ಳಿ 11569, ಪಾಂಡವಪುರ 10857, ಶ್ರೀರಂಗಪಟ್ಟಣ 11429, ಕೆ.ಆರ್‌.ಪೇಟೆ 11703, ನಾಗಮಂಗಲ 11575 ಹಾಗೂ ಹೊರ ಜಿಲ್ಲೆಯ956 ಮಂದಿ ಸೇರಿ ಒಟ್ಟು 1,00,623 ಮಂದಿ ಗುಣಮುಖರಾಗಿದ್ದಾರೆ.

705 ಮಂದಿ ಸಾವು: ಮೊದಲ ಹಾಗೂ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ ಜಿಲ್ಲೆಯಲ್ಲಿ 705 ಮಂದಿ ಮೃತಪಟ್ಟಿದ್ದಾರೆ.ಮೊದಲ ಅಲೆಯಲ್ಲಿ 150ಮಂದಿ ಸಾವನ್ನಪ್ಪಿದ್ದರೆ, 2ನೇಅಲೆಯಲ್ಲಿ ಅತಿ ಹೆಚ್ಚು ಸೋಂಕಿಗೆ ಬಲಿಯಾದರು. ಪ್ರಸ್ತುತ ಸಂದರ್ಭದಲ್ಲಿ ಯಾವುದೇ ಸಾವು ಸಂಭವಿಸಿಲ್ಲದಿರುವುದು ಸಮಾಧಾನಕರವಾಗಿದೆ.

ಶೇ.100 ಕೊರೊನಾ ಲಸಿಕೆ: ಜಿಲ್ಲಾದ್ಯಂತ ಮೊದಲ ಹಾಗೂ ಎರಡನೇ ಕೊರೊನಾ ಲಸಿಕೆ ಶೇ.100ರಷ್ಟು ನೀಡಲಾಗಿದೆ. ಪ್ರಸ್ತುತ 18 ವರ್ಷ ಮೇಲ್ಪಟ್ಟ ಎಲ್ಲರಿಗೂಬೂಸ್ಟರ್‌ ಡೋಸ್‌ ನೀಡಲಾಗಿದೆ. ಇದು ಜಿಲ್ಲಾದ್ಯಂತ ಶೇ.6ರಷ್ಟಿದೆ. ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ ಶೇ.60ರಷ್ಟಾಗಿದೆ. ಪ್ರಸ್ತುತ 75 ದಿನ ಬೂಸ್ಟರ್‌ ಡೋಸ್‌ ನೀಡುವ ಕಾರ್ಯಕ್ರಮ ನಡೆಯುತ್ತಿದೆ.

80 ಸಕ್ರಿಯ ಪ್ರಕರಣ :

ಈವರೆಗೆ 80 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಮಂಡ್ಯ 19, ಮದ್ದೂರು, ಮಳವಳ್ಳಿ ತಲಾ 15, ಪಾಂಡವಪುರ 9, ಶ್ರೀರಂಗಪಟ್ಟಣ 17, ಕೆ.ಆರ್‌.ಪೇಟೆ 2, ನಾಗಮಂಗಲ 3 ಪ್ರಕರಣಗಳಿವೆ. ಇದರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಮೊದಲ ಹಾಗೂ ಎರಡನೇ ಅಲೆಯಲ್ಲಿ ಒಟ್ಟು 16,76,493ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ12,98,177 ಮಂದಿಗೆ ಆರ್‌ಟಿಪಿಸಿಆರ್‌ ಹಾಗೂ 3,78,316 ಮಂದಿಗೆ ರ್ಯಾಪಿಡ್‌ ಪರೀಕ್ಷೆ ನಡೆಸಲಾಗಿದೆ.

ಚಳಿ ಜ್ವರಕ್ಕೆ ನಲುಗಿದ ಸಾರ್ವಜನಿಕರು:

ಕಳೆದ ಒಂದು ತಿಂಗಳಿನಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆ ಚಳಿ, ಜ್ವರ, ಕೆಮ್ಮು, ನೆಗಡಿ ಹಾಗೂ ಮೈಕೈ ನೋವು ಹೆಚ್ಚಾಗಿದೆ. ನಗರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕ್ಲಿನಿಕ್‌ಗಳು ರೋಗಿಗಳಿಂದ ತುಂಬಿವೆ. ಪ್ರತಿದಿನ ಮೋಡ ಕವಿದ ವಾತಾವರಣವಿದ್ದು, ಸಂಜೆಯಾಗುತ್ತಲೇ ಸೋನೆ ಮಳೆಯಾಗುತ್ತಿದೆ. ಅಲ್ಲದೆ, ಒಂದು ದಿನ ಬಿಡುವು ನೀಡಿದರೆ ಮತ್ತೆ ಒಂದು ವಾರ ಸೂರ್ಯನ ಬೆಳಕೆ ಇಲ್ಲದಂತಾಗಿದೆ. ಇದರಿಂದ ಶೀತಗಾಳಿ ಬೀಸುತ್ತಿದೆ. ಇದು ಜ್ವರ, ನೆಗಡಿ, ಕೆಮ್ಮು ಬರಲು ಕಾರಣವಾಗುತ್ತಿದೆ.

ಡೆಂಗ್ಯೂ, ಚಿಕೂನ್‌ಗುನ್ಯಾಕ್ಕೆ ದಾರಿ  :

ಶೀತಗಾಳಿ ವಾತಾವರಣದಿಂದ ಸೊಳ್ಳೆಗಳ ಉತ್ಪತ್ತಿಯೂ ಹೆಚ್ಚಾಗಿದೆ. ಇದು ಡೆಂಗ್ಯೂ, ಚಿಕೂನ್‌ಗುನ್ಯಾ ಬರಲುಕಾರಣವಾಗಬಹುದು. ಆದ್ದರಿಂದ ಸಾರ್ವಜನಿಕರು ಜ್ವರ, ಶೀತ, ಕೆಮ್ಮು, ನೆಗಡಿ ಬಂದರೆ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಮೆಡಿಕಲ್‌ ಸ್ಟೋರ್‌ನಲ್ಲಿ ಮಾತ್ರೆ ಪಡೆದು ಸುಮ್ಮನಾಗಬಾರದು. ಅಲ್ಲದೆ, ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಬೂಸ್ಟರ್‌ ಡೋಸ್‌ ಪಡೆಯಬೇಕು. 75 ದಿನಗಳಅಭಿಯಾನ ನಡೆಯುತ್ತಿದೆ. ಸಾರ್ವಜನಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್‌ ಡೋಸ್‌ ಪಡೆಯಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಟಿ.ಎನ್‌.ಧನಂಜಯ ತಿಳಿಸಿದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.