ಶಾಲಾ ಮಕ್ಕಳಿಗೆ ಕೋವಿಡ್ : ಪೋಷಕರು, ಗ್ರಾಮಸ್ಥರಲ್ಲಿ ಆತಂಕ
Team Udayavani, Dec 30, 2021, 3:44 PM IST
ಮದ್ದೂರು: ತಾಲೂಕಿನ ಹಳ್ಳಿಕೆರೆ ಕಿರಿಯ ಪ್ರಾಥಮಿಕ ಶಾಲೆಯ ಐದು ಮಕ್ಕಳಲ್ಲಿ ಕೋವಿಡ್-19 ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಪೋಷಕರೂ ಹಾಗೂ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮ ವಹಿಸಿದ್ದಾರೆ.
ಗ್ರಾಪಂವಾರು ಆರೋಗ್ಯ ಇಲಾಖೆಯ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆ ಯರು ಶಾಲೆಯಲ್ಲಿ ಸಾಮೂಹಿಕ ಕೋವಿಡ್ ತಪಾಸಣೆ ಸಂದರ್ಭ ವೇಳೆ ಶಾಲೆಯ 60 ಮಕ್ಕಳ ಪೈಕಿ 5 ಮಕ್ಕಳಿಗೆ
ಸೋಂಕು ಕಂಡುಬಂದ ಹಿನ್ನಲೆಯಲ್ಲಿ ಸದರಿ ಮಕ್ಕಳನ್ನು ಸದ್ಯಕ್ಕೆ ಚಿಕಿತ್ಸೆ ನೀಡಿ ಹೋಂ ಐಸೋಲೇಷನ್‌ಗೆ ಒಳಪಡಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಹಾಗೂ ಪ್ರಭಾರ ತಾಲೂಕು ಆರೋಗ್ಯಾ ಧಿಕಾರಿ ಡಾ. ನಾಗೇಂದ್ರರಾವ್ ಮತ್ತು ಸಿಬ್ಬಂದಿ, ಸ್ಥಳಕ್ಕಾಗಮಿಸಿ ಸ್ಥಳೀಯ ಆರೋಗ್ಯ ಕಾರ್ಯಕರ್ತರಿಂದ ಮಾಹಿತಿ
ಸಂಗ್ರಹಿಸಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಧೈರ್ಯ ತುಂಬಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಲಹೆ ನೀಡಿದ್ದಾರೆ.
ಸೋಂಕಿತ ಮಕ್ಕಳ ಕುಟುಂಬ ಸದಸ್ಯರು ಮತ್ತು ಸಂಪರ್ಕಿತರಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ ನಡೆಸಿದ್ದು, ಇದರ ಮಾಹಿತಿ ಲಭ್ಯವಾಗಬೇಕಾಗಿದ್ದು ಸಂಜೆ ಅಥವಾ ನಾಳೆ ಫಲಿತಾಂಶ ಬರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಶಾಲೆಗೆ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಿದ್ದು, ಒಂದು ವಾರಗಳ ಸೀಲ್‌ಡೌನ್‌ಗೆ ಕ್ರಮ ವಹಿಸಿರುವುದಾಗಿ ಬಿಇಒ ಮಹದೇವ ಪತ್ರಿಕೆಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ…ನಾಗಾಲ್ಯಾಂಡ್‌ನಲ್ಲಿ ಆಫ್ಸಪಾ ಇನ್ನೂ 6 ತಿಂಗಳು ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.