ಕೋವಿಡ್ ವರದಿ ಬರುವ ಮುನ್ನವೇ ಮಹಿಳೆ ಸಾವು
Team Udayavani, Apr 25, 2021, 3:04 PM IST
ಮಳವಳ್ಳಿ: ಅನಾರೋಗ್ಯದಿಂದ ಕೋವಿಡ್ ಪರೀಕ್ಷೆಗೆ ಐದು ದಿನಗಳ ಹಿಂದೆ ಒಳಗಾಗಿದ್ದ ಮಹಿಳೆ ವರದಿ ಬರುವ ಮುನ್ನವೇ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಘಟನೆ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಲಸಿಕೆ ಪಡೆದಿದ್ದ ಮಹಿಳೆಗೆ ಜ್ವರ: ಎಂ.ಶೆಟ್ಟಹಳ್ಳಿ ಗ್ರಾಮದ 55 ವರ್ಷದ ಮಹಿಳೆ ಬೆಂಗಳೂರಿನ ಮಗಳ ಮನೆಯಲ್ಲಿದ್ದರು. ಏ.16ರಂದು ಎಂ.ಶೆಟ್ಟಹಳ್ಳಿ ಗ್ರಾಮದ ತಮ್ಮ ಮನೆಗೆ ಬಂದಿದ್ದರು. 17ರಂದು ಗ್ರಾಮದಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು. 18ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿ, 19ರಂದು ಕೋವಿಡ್ ಪರೀಕ್ಷೆಗೆಒಳಪಟ್ಟಿದ್ದರು. ಆದರೆ ವರದಿ ಇನ್ನೂಬಂದಿರಲಿಲ್ಲ. ಶನಿವಾರ ಬೆಳಗ್ಗೆ ಉಸಿರಾಟದಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಚಿಕಿತ್ಸೆಕೊಡಿಸಲು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮನೆಯ ಜಗಲಿ ಮೇಲೆ ಅನಾಥವಾದ ಶವ: ಆಂಬ್ಯುಲೆನ್ಸ್ ಹಾಗೂ ಆರೋಗ್ಯ ಇಲಾಖೆಯಸಿಬ್ಬಂದಿಗಳು ಅವರ ಮನೆಯ ಜಗಲಿ ಮೇಲೆ ಶವವಿಟ್ಟು ತೆರಳಿದ್ದರು. ಕೊರೊನಾದಿಂದ ಮಹಿಳೆ ಮೃತಪಟ್ಟಿರಬಹುದು ಎಂದು ಭಾವಿಸಿದ ಗ್ರಾಮಸ್ಥರು ಭಯದಿಂದ ಶವದಬಳಿ ತೆರಳಲಿಲ್ಲ. ಇದರಿಂದ ಐದಾರು ಗಂಟೆಗಳಕಾಲ ಶವ ಅನಾಥವಾಗಿ ಜಗಲಿಯ ಮೇಲೆ ಬಿದ್ದಿತ್ತು.
ಆರೋಗ್ಯಾ ಧಿಕಾರಿಗೆ ಮಾಹಿತಿ: ಗ್ರಾಮ ಪಂಚಾಯಿತಿ ಸದಸ್ಯ ಮನೋಹರ್ ಅವರು ತಾಲೂಕು ಆಡಳಿತದ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಗ್ಯ ವೈದ್ಯಾಧಿಕಾರಿ ಡಾ. ಶಿವಸ್ವಾಮಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಮಂಡ್ಯದಿಂದ ಬಂದ ತಂಡ ಮೃತಪಟ್ಟ ಮಹಿಳೆಯ ಶವವನ್ನು ಅಂತ್ಯಕ್ರಿಯೆ ಮಾಡಿದರು.
ಆರೋಗ್ಯ ವೈದ್ಯಾ ಧಿಕಾರಿ ಡಾ.ಶಿವಸ್ವಾಮಿ ಮಾತನಾಡಿ, ಬೆಂಗಳೂರಿನಿಂದ ಕಳೆದ ವಾರ ಬಂದಿದ್ದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು. ಕೋವಿಡ್ ಲಸಿಕೆ ಪಡೆದಿದ್ದ ಅವರನ್ನು ಏ.19ರಂದು ಕೋವಿಡ್ ಪರೀಕ್ಷಗೆ ಒಳಪಡಿಸಲಾಗಿತ್ತು. ವರದಿ ಕೈಸೇರಬೇಕಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಗ್ರಾಪಂ ಸಿಬ್ಬಂದಿಗಳಿಂದ ಸ್ಯಾನಿಟೈಸ್ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದರು.
5ದಿನ ಕಳೆದರೂ ವರದಿ ಬಂದಿಲ್ಲ: ಗ್ರಾಪಂ ಸದಸ್ಯ ಮನೋಹರ್ ಮಾತನಾಡಿ, ಬೆಂಗಳೂರಿನಿಂದ ಬಂದಿದ್ದ ಮಹಿಳೆ ಒಂದು ವಾರದಿಂದ ಜ್ವರದಿಂದ ನರಳುತ್ತಿದ್ದರು. ಈ ವಿಚಾರವನ್ನು ಯಾರೊಂದಿಗೂ ಹೇಳಿಕೊಂಡಿಲ್ಲ. ಕೋವಿಡ್ ಪರೀಕ್ಷೆ ಮಾಡಿಸಿ 5 ದಿನ ಕಳೆದರೂಇನ್ನೂ ವರದಿ ಬಂದಿಲ್ಲ, ಗ್ರಾಮದಲ್ಲಿ ಭಯದವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.