ಏಕಲವ್ಯ ವಸತಿ ಶಾಲೆಯಲ್ಲಿ ಕೋವಿಡ್ ಚಿಕಿತ್ಸೆ
ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ: ತಹಶೀಲ್ದಾರ್
Team Udayavani, Jul 16, 2020, 12:24 PM IST
ಎಚ್.ಡಿ.ಕೋಟೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಚಿಕಿತ್ಸೆಗೆ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸರ್ಕಾರ ಆದೇಶಿಸಿದೆ. ತಾಲೂಕಿನ ಸೊಳ್ಳಾಪುರ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 60 ಹಾಸಿಗೆಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಎಲ್ಲಾ ವ್ಯವಸ್ಥೆಗಳ ಸಿದ್ಧತೆ ಮಾಡಲಾಗಿದೆ.
ತಾಲೂಕು ಕೇಂದ್ರ ಸ್ಥಾನದಿಂದ ಸುಮಾರು 6-7 ಕಿ.ಮೀ. ಅಂತರದಲ್ಲಿರುವ ಮೇಟಿಕುಪ್ಪೆ ರಸ್ತೆಯ ಸೊಳ್ಳಾಪುರ ಏಕಲವ್ಯ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗಾಗಿ 60 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ ಮಾಡಲಿದೆ. ಮುಂದಿನ ದಿನಗಳಲ್ಲಿ ಅಗತ್ಯ ಎನಿಸಿದರೆ ಅದೇ ವಸತಿ ಶಾಲೆಯ ಮತ್ತೂಂದು ಭಾಗದಲ್ಲಿ ಹೆಚ್ಚುವರಿಯಾಗಿ ಮತ್ತೆ 60 ಹಾಸಿಗಳ ಕೋವಿಡ್ ಕೇರ್ ಸೆಂಟರ್‌ಗೆ ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ.
ಏಕಲವ್ಯ ಮಾದರಿ ವಸತಿ ಶಾಲೆಗೆ ತಹಶೀಲ್ದಾರ್ ಆರ್. ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಡಳಿತಾಧಿಕಾರಿ
ಡಾ.ಭಾಸ್ಕರ್, ಪುರಸಭಾ ಮುಖ್ಯಾಧಿಕಾರಿ ವಿಜಯ ಕುಮಾರ್ ಮತ್ತು ಸರಗೂರಿನ ಸ್ವಾಮಿ ವಿವೇಕಾನಂದ ಆಸ್ಪತ್ರೆಯ ವೈದ್ಯರ ತಂಡ ಏಕಲವ್ಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಕೋವಿಡ್ ಸೋಂಕಿತರನ್ನು ಇಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಆರಂಭದಲ್ಲಿ ಕೋವಿಡ್ ಕೇರ್ ಸೆಂಟರ್‌ಗೆ ಒಂದು ಮಿನಿ ಬಸ್, 2 ತುರ್ತು ವಾಹನ, ಎಚ್ .ಡಿ. ಕೋಟೆ ಸರ್ಕಾರಿ ಆಸ್ಪತ್ರೆ ಮತ್ತು ಸರಗೂರು ವಿವೇಕಾನಂದ ಆಸ್ಪತ್ರೆಯ ವೈದ್ಯರು ನಿರ್ವಹಿಸಲಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.