ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಬರ್ಬರ ಹತ್ಯೆ
ಲಾಂಗ್, ಮಚ್ಚುಗಳಿಂದ ಕೊಚ್ಚಿ ಬರ್ಬರ ಕೊಲೆ | ಘಟನೆಗೆ ಪ್ರೀತಿಯೇ ಕಾರಣ?
Team Udayavani, Oct 30, 2020, 8:52 PM IST
ಮಂಡ್ಯ: ಹುಡುಗಿಯ ವಿಚಾರಕ್ಕೆ ಜೈಲಿನಿಂದ ಬಿಡುಗಡೆಯಾಗಿ ಬಂದ ದಿನವೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಲಾಂಗ್ ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗುತ್ತಲು ರಸ್ತೆಯ ಬಸವನಗುಡಿ 4ನೇ ಕ್ರಾಸ್‌ನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಸ್ವರ್ಣಸಂದ್ರದ ನಿವಾಸಿ ದುಂಡುಮಾದ ಪುತ್ರ ಸುಮಂತ್ ಆಲಿಯಾಸ್ ಕುಳ್ಳಿ (21) ಕೊಲೆಯಾದ ವ್ಯಕ್ತಿ. ಶುಕ್ರವಾರ ಸಂಜೆ ಬಸವನಗುಡಿಯಲ್ಲಿ ಹಾಲು ಹಾಕಲು ಹೋದಾಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಲಾಂಗ್, ಮಚ್ಚುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಮೃತ ಸುಮಂತ್ ಸ್ವರ್ಣಸಂದ್ರದ ಅನ್ಯ ಜಾತಿಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಕಳೆದ ಹಲವು ತಿಂಗಳ ಹಿಂದೆ ಹುಡುಗಿಯನ್ನು ಕರೆದುಕೊಂಡು ಬೆಂಗಳೂರಿಗೆ ಪರಾರಿಯಾಗಿದ್ದ. ಆದರೆ ಹುಡುಗಿ ಇನ್ನೂ ಅಪ್ರಾಪ್ತಳಾಗಿದ್ದರಿಂದ ಹುಡುಗಿಯ ಪೋಷಕರು ದೂರು ನೀಡಿದ್ದರು. ಅದರಂತೆ ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ಹುಡುಗಿಯನ್ನು ಪೋಷಕರಿಗೆ ಒಪ್ಪಿಸಿದ್ದರು. ಮೃತ ಸುಮಂತ್ ಮೇಲೆ ಈಗಾಗಲೇ ಅಪರಾಧ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಹೆಸರು ರೌಡಿ ಶೀಟರ್ ಪಟ್ಟಿಯಲ್ಲೂ ಇತ್ತು. ಹುಡುಗಿಯ ವಿಚಾರದ ಪ್ರಕರಣದಲ್ಲಿ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿ ಮನೆಗೆ ಬಂದಿದ್ದನು. ಅದೇ ದಿನ ಬರ್ಬರ ಹತ್ಯೆ ಮಾಡಲಾಗಿದೆ. ಹುಡುಗಿಯ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಕೆ.ಪರಶುರಾಮ, ಡಿವೈಎಸ್ಪಿ ನವೀನ್‌ಕುಮಾರ್, ಸಿಪಿಐ ಸಂತೋಷ್, ಎಸ್‌ಐ ಶರತ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಬಿಟ್ಟು ಹೋದ ಆರೋಪಿಗಳು: ಕೊಲೆ ನಡೆದ ಸ್ಥಳದಲ್ಲಿಯೇ ಆರೋಪಿಗಳು ತಾವು ತಂದಿದ್ದ ಬೈಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಆದರೆ ಪಕ್ಕದ ರಸ್ತೆಯಲ್ಲಿ ಹುಡುಗಿಯೊಬ್ಬಳನ್ನು ಹೆದರಿಸಿ ಆಕೆಯ ಬೈಕ್‌ನಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಬೈಕ್ ನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.