ಗುರು ಅಮರ್‌ ರಹೇ : ಹುತಾತ್ಮ ಯೋಧ ಗುರುವಿಗೆ ಅಂತಿಮ ವಿದಾಯ

Team Udayavani, Feb 17, 2019, 12:30 AM IST

ban17021901medn.jpg

ಮಂಡ್ಯ: ವಂದೇಮಾತರಂ, ಬೋಲೋ ಭಾರತ್‌ ಮಾತಾ ಕೀ ಜೈ, ಗುಡಿಗೆರೆ ಗುರು ಅಮರರಾಗಲಿ, ಗುರು ಅಮರ್‌ ರಹೇ ಘೋಷಣೆಗಳು…, ಲಕ್ಷಾಂತರ ಮಂದಿಯ ಕಣ್ಣೀರಧಾರೆಯ ನಡುವೆ ದೇಶಕ್ಕಾಗಿ ಪ್ರಾಣತ್ಯಜಿಸಿದ ಹುತಾತ್ಮ ಯೋಧ, ರಾಜ್ಯದ ಹೆಮ್ಮೆಯ ಪುತ್ರ ಎಚ್‌.ಗುರು ಪಂಚಭೂತಗಳಲ್ಲಿ ಲೀನವಾದರು.

ಗುರು ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ರಾತ್ರಿ ಮದ್ದೂರು ತಾಲೂಕು ಮೆಳ್ಳಹಳ್ಳಿಯಲ್ಲಿ ಜರುಗಿತು.

ಮಳವಳ್ಳಿ-ಮದ್ದೂರು ಹೆದ್ದಾರಿ ರಸ್ತೆ ಪಕ್ಕದಲ್ಲಿರುವ 10 ಗುಂಟೆ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಗುರುವಿನ ಪಾರ್ಥಿವ ಶರೀರಕ್ಕೆ ಮಡಿವಾಳ ಸಂಪ್ರದಾಯದ ವಿಧಿ-ವಿಧಾನಗಳನ್ನು ನೆರವೇರಿಸಿದ ಬಳಿಕ ಸೇನೆ ಮತ್ತು ಸರ್ಕಾರಿ ಗೌರವ ಸಮರ್ಪಿಸಲಾಯಿತು. ತರುವಾಯ ಚಿತೆಗೆ ಗುರು ಸೋದರ ಮಧು ಅಗ್ನಿ ಸ್ಪರ್ಶ ಮಾಡಿದರು.

ಗ್ರಾಮದಲ್ಲಿ ಮೆರವಣಿಗೆ: ಬೆಂಗಳೂರಿನಿಂದ ಸೇನೆಯ ವಾಹನದಲ್ಲಿ ವೀರ ಯೋಧ ಗುರು ಅವರ ಪಾರ್ಥಿವ ಶರೀರವನ್ನು ಹುಟ್ಟೂರು ಗುಡಿಗೆರೆ ಕಾಲೋನಿಗೆ ಸಂಜೆ 7ರ ವೇಳೆಗೆ ತರಲಾಯಿತು. ಹತ್ತು ನಿಮಿಷಗಳ ಕಾಲ ಮನೆಯ ಬಳಿ ಇಟ್ಟು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ ಮೆಳ್ಳಹಳ್ಳಿವರೆಗೆ ಮೆರವಣಿಗೆ ಯಲ್ಲಿ ಕೊಂಡೊಯ್ಯಲಾಯಿತು.

ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ವೀರ ಯೋಧನಿಗೆ ಗೌರವ ಸಲ್ಲಿಸಿದರೆ, ಪೊಲೀಸ್‌ ಬ್ಯಾಂಡ್‌ ತಂಡವು ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಿತು.

ಸಿಎಂ ಕುಮಾರಸ್ವಾಮಿ ಗುರು ಪತ್ನಿ ಕಲಾವತಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿ, ಸ್ಥಳದಲ್ಲೇ 25 ಲಕ್ಷ ರೂ.ಗಳ ಚೆಕ್‌ ಅನ್ನು ವಿತರಣೆ ಮಾಡಿದರು.

ಅಂತ್ಯಸಂಸ್ಕಾರದಲ್ಲಿ ಗಣ್ಯರ ಭಾಗಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಚಿವರಾದ ಸಾ.ರಾ.ಮಹೇಶ್‌, ಸಿ.ಎಸ್‌. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಸಚಿವ ಎಸ್‌.ಎಂ. ಕೃಷ್ಣ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪಸಿಂಹ ಹಾಗೂ ಶಾಸಕರು ಸೇರಿ ಗಣ್ಯರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.