ದರ್ಶನ್‌ ಪುಟ್ಟಣ್ಣಯ್ಯ ಸಂಚಲನ


Team Udayavani, Feb 27, 2023, 12:37 PM IST

ದರ್ಶನ್‌ ಪುಟ್ಟಣ್ಣಯ್ಯ ಸಂಚಲನ

ಮಂಡ್ಯ: ಕಳೆದ 2018ರ ಚುನಾವಣೆಯಲ್ಲಿ ಅನುಕಂಪದ ಅಲೆಯ ನಡುವೆಯೂ ಪರಾಭವಗೊಂಡು ಅಮೇರಿಕಾ ಸೇರಿದ್ದ ರೈತನಾಯಕ ಕೆ.ಎಸ್‌.ಪುಟ್ಟಣ್ಣಯ್ಯ ಪುತ್ರ ದರ್ಶನ್‌ ಪುಟ್ಟಣ್ಣಯ್ಯ ಕ್ಷೇತ್ರಕ್ಕೆ ಆಗಮಿಸಿದ್ದು, ಪಾದಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದ್ದಾರೆ.

ಕಳೆದ 2022ರ ಡಿಸೆಂಬರ್‌ವರೆಗೂ ಇಡೀ ಕ್ಷೇತ್ರದಲ್ಲಿ ಜೆಡಿ ಎಸ್‌ಗೆ ಪ್ರಬಲ ಎದು ರಾಳಿಯೇ ಇರಲಿಲ್ಲ. ಈಗ, ದರ್ಶನ್‌ ಪುಟ್ಟಣ್ಣಯ್ಯ ಅಮೇರಿಕಾದಿಂದ ಕ್ಷೇತ್ರಕ್ಕೆ ಮರಳಿದ್ದು, ಪ್ರಬಲ ಪೈಪೋಟಿ ನೀಡುವ ಮುನ್ಸೂಚನೆ ನೀಡುತ್ತಿದ್ದಾರೆ.

ಅನುಕಂಪದ ಅಲೆಯಲ್ಲೂ ಸೋಲು: ಕಳೆದ 2018 ರ ಚುನಾ ವಣೆಯಲ್ಲಿ ತಂದೆ ಶಾಸಕ ಹಾಗೂ ರೈತ ನಾಯಕ ದಿವಂಗತ ಕೆ.ಎಸ್‌.ಪುಟ್ಟಣ್ಣಯ್ಯ ಅವರ ಅಕಾಲಿಕ ನಿಧನದ ಅನುಕಂಪದ ಅಲೆ ಇದ್ದರೂ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ವಿರುದ್ಧ 22,224 ಮತ ಗಳಿಂದ ಪರಾಭವಗೊಂಡಿದ್ದರು. ಆಗಲೂ ಗೆದ್ದೇ ಗೆಲ್ಲುತ್ತಾರೆ ಎಂಬ ನಿರೀಕ್ಷೆ ಹೆಚ್ಚಾಗಿತ್ತು. ಮೊದಲು ತಾಯಿ ಸುನೀತಾ ಪುಟ್ಟಣ್ಣಯ್ಯ ಸ್ಪರ್ಧಿಸುತ್ತಾರೆ ಎಂಬ ಕೂಗು ಕೇಳಿ ಬಂದಿತ್ತು. ಆದರೆ, ಕೊನೇ ಕ್ಷಣದಲ್ಲಿ ದರ್ಶನ್‌ ಪುಟ್ಟಣ್ಣಯ್ಯ ಅಖಾಡಕ್ಕೆ ಇಳಿದಿದ್ದರು. ಕ್ಷೇತ್ರದ ಜನ ಅನು ಕಂಪಕ್ಕೆ ಮಣೆ ಹಾಕಲಿಲ್ಲ. ಅನುಕಂಪದ ಅಲೆಯಲ್ಲಿ ಸೋತಿದ್ದು ಇದೇ ಮೊದಲು.

ವ್ಯವಹಾರ ತೊರೆದ ದರ್ಶನ್‌: ದರ್ಶನ್‌ ತನ್ನೆಲ್ಲಾ ವ್ಯವ ಹಾರಗಳು ಅಮೆರಿಕಾ ದಲ್ಲಿಯೇ ಇದ್ದರಿಂದ ಚುನಾ ವಣೆ ಸೋತ ಬಳಿಕ ಅಲ್ಲಿಯೇ ನೆಲೆಸಿದ್ದರು. ಆಗಾಗ್ಗೆ ಕ್ಷೇತ್ರಕ್ಕೆ ಬಂದು ಹೋಗುತ್ತಿದ್ದರು. ಕೆಲವು ರೈತ ಹೋರಾಟ, ಚಳ ವಳಿಯಲ್ಲಿ ಭಾಗವಹಿಸಿ ಬೆಂಬಲ ನೀಡುತ್ತಿದ್ದರು. ಇದೀಗ ಇಡೀ ವ್ಯವಹಾರವನ್ನೆಲ್ಲಾ ಮಾರಾಟ ಮಾಡಿ ಕ್ಷೇತ್ರದ ಜನರ ಸೇವೆ ಮಾಡಲು ಬಂದಿದ್ದೇನೆ. ಆದ್ದರಿಂದ ನನಗೆ ಆಶೀರ್ವಾದ ಮಾಡ ಬೇಕು ಎಂದು ಮನವಿ ಮಾಡುತ್ತಿದ್ದಾರೆ.

ಜನಮನ ದರ್ಶನ: ಕಳೆದ 2022ರ ಡಿಸೆಂಬರ್‌ನಲ್ಲಿ ಕ್ಷೇತ್ರಕ್ಕೆ ಆಗಮಿಸಿರುವ ದರ್ಶನ್‌ಪುಟ್ಟಣ್ಣಯ್ಯ, ಫೆ.25 ರಿಂದ ಪಾದಯಾತ್ರೆ ಮೂಲಕ ಜನಮನ ದರ್ಶನ ಮಾಡಲು ಹೊರಟಿದ್ದಾರೆ. ಪಾದಯಾತ್ರೆ ಮಾಡುತ್ತಾ ಪ್ರತೀ ಗ್ರಾಮದ ಜನರ ಸಮಸ್ಯೆ ಆಲಿಸುತ್ತಾ, ರಾತ್ರಿ ಗ್ರಾಮ ದಲ್ಲಿಯೇ ವಾಸ್ತವ್ಯ ಹೂಡುವ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ.

ಜನರಿಂದ ಅದ್ದೂರಿ ಸ್ವಾಗತ: ಮಂಡ್ಯ ತಾಲೂಕಿನ ಮೇಲುಕೋಟೆ ಕ್ಷೇತ್ರದ ಎಚ್‌.ಮಲ್ಲಿಗೆರೆ ಗ್ರಾಮದಿಂದ ಪಾದಯಾತ್ರೆ ಆರಂಭಿಸಿರುವ ದರ್ಶನ್‌ ರಿಗೆ ಕ್ಷೇತ್ರದ ಗ್ರಾಮಸ್ಥರು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿ ದ್ದಾರೆ. ಹೋದ ಕಡೆಯಲೆಲ್ಲಾ, ವಿವಿಧ ರೀತಿಯ ಬೃಹತ್‌ ಹಾರ ಹಾಕುತ್ತಾ ಬೆಂಬಲ ಸೂಚಿಸುತ್ತಿದ್ದಾರೆ.

ಪ್ರಬಲವಾಗಿರುವ ರೈತಸಂಘ: ಮೇಲುಕೋಟೆ ಕ್ಷೇತ್ರ ದಲ್ಲಿ ರೈತ ನಾಯಕ ಕೆ.ಎಸ್‌. ಪುಟ್ಟಣ್ಣಯ್ಯ ಅವರ ಸಂಘ ಟನೆಯಿಂದ ಇಂದಿಗೂ ರೈತಸಂಘ ಪ್ರಬಲವಾಗಿ ಬೇರೂ ರಿದೆ. 1989ರ ಚುನಾವಣೆಯಲ್ಲಿ ರೈತಸಂಘ ದಿಂದ ಕೆ. ಎಸ್‌.ಪುಟ್ಟಣ್ಣಯ್ಯ ಕಣಕ್ಕಿಳಿ ದಿದ್ದರು. ಇಂದಿಗೂ ಕ್ಷೇತ್ರದಲ್ಲಿ ರೈತಸಂಘ ತನ್ನದೇ ಆದ ಮತ ಬ್ಯಾಂಕ್‌ ಹೊಂದಿದೆ.

ಕಾಂಗ್ರೆಸ್‌ ಬೆಂಬಲ: ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘಕ್ಕೆ ಕಾಂಗ್ರೆಸ್‌ ಬೆಂಬಲವಾಗಿ ನಿಂತಿದೆ. ಕಳೆದ 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿ ಹಾಕದೆ ರೈತಸಂಘದ ಅಭ್ಯರ್ಥಿ ದರ್ಶನ್‌ಪುಟ್ಟಣ್ಣಯ್ಯಗೆ ಬೆಂಬಲ ವ್ಯಕ್ತಪಡಿಸಿತ್ತು. ಈ ಬಾರಿಯೂ ಕಾಂಗ್ರೆಸ್‌ ಬೆಂಬಲ ನೀಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಕಾಂಗ್ರೆಸ್‌ನ ಟಿಕೆಟ್‌ ಆಕಾಂಕ್ಷಿಗಳು ರೈತಸಂಘದೊಂದಿಗೆ ಹೊಂದಾಣಿಕೆ ಬೇಡ. ಅಭ್ಯರ್ಥಿ ಕಣಕ್ಕಿಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೂ, ಈ ಬಾರಿ ಹೊಂದಾಣಿಕೆ ಯಾಗುವ ಸಾಧ್ಯತೆಗಳೇ ಹೆಚ್ಚಿವೆ.

ನಟ ದರ್ಶನ್‌ ಸ್ಟಾರ್‌ ಕ್ಯಾಂಪೇನರ್‌ : ದರ್ಶನ್‌ಪುಟ್ಟಣ್ಣಯ್ಯ ಪರ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಾರಿ ಸ್ಟಾರ್‌ ಕ್ಯಾಂಪೇನರ್‌ ಆಗಲಿದ್ದಾರೆ. ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರೈತಸಂಘ ಸಂಪೂರ್ಣ ಸುಮಲತಾ ಪರ ನಿಂತಿತ್ತು. ನಗರದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ ನಲ್ಲಿ ನಡೆದ ಸಮಾವೇಶದಲ್ಲಿ ಸ್ವತಃ ನಟ ದರ್ಶನ್‌ ಮುಂದಿನ ಚುನಾವಣೆಯಲ್ಲಿ ದರ್ಶನ್‌ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಲಿದ್ದೇನೆ. ಆತ ನನ್ನ ಸಹೋದರ ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಇತ್ತೀಚೆಗೆ ನಟ ದರ್ಶನ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ದರ್ಶನ್‌ಪುಟ್ಟಣ್ಣಯ್ಯ ಖುದ್ದು ಭೇಟಿ ಮಾಡಿ ಶುಭಾಷಯ ಕೋರಿದ್ದಲ್ಲದೆ, ಕಾಟೇರ ಸಿನಿಮಾ ಪೋಸ್ಟರ್‌ ಬಿಡುಗಡೆ ಮಾಡಿ ಬಂದಿದ್ದರು. ಇದರಿಂದ ದರ್ಶನ್‌ ಪುಟ್ಟಣ್ಣಯ್ಯ ಪರ ಚುನಾವಣೆಯಲ್ಲಿ ನಟ ದರ್ಶನ್‌ ಪ್ರಚಾರ ಮಾಡಲಿದ್ದಾರೆ.

-ಎಚ್‌.ಶಿವರಾಜು

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.