ಅರ್ಥಪೂರ್ಣ ಕನ್ನಡ ರಾಜೋತ್ಸವಕ್ಕೆ ನಿರ್ಧಾರ

ಸಿದ್ಧತೆಗೆ ವಿವಿಧ ಸಮಿತಿಗಳ ರಚನೆ , ಪರೇಡ್‌ಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ವೆಂಕಟೇಶ್‌

Team Udayavani, Oct 20, 2020, 3:35 PM IST

mandya-tdy-2

ಮಂಡ್ಯ: ಕೋವಿಡ್ ಹಿನ್ನೆಲೆಯಲ್ಲಿ ಮುಂದಿನ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆಕುರಿತ ಪೂರ್ವಭಾವಿ ಸಭೆಯಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅಂದು ಬೆಳಗ್ಗೆ 9ಕ್ಕೆ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಿದ್ಧತೆಗೆ ಸೂಚನೆ: ಹೋಂ ಗಾರ್ಡ್‌, ಅಬಕಾರಿ, ಅರಣ್ಯ ಹಾಗೂ ಪೊಲೀಸ್‌ ಇಲಾಖೆಯಿಂದ ಪರೇಡ್‌ಗೆ ಮಾತ್ರ ಅವಕಾಶವಿದ್ದು, ಮೆರವಣಿಗೆ ಇರುವುದಿಲ್ಲ. ಧ್ವಜಾರೋಹಣ ವ್ಯವಸ್ಥೆ ಮಾಡಲು ಪೊಲೀಸ್‌ ಇಲಾಖೆ, ತಹಶೀಲ್ದಾರ್‌ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಗೆ ವಹಿಸಲಾಯಿತು. ರಾಷ್ಟ್ರಗೀತೆ,ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಗೆ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾ ಕ್ರೀಡಾಂಗಣದ ಸ್ವತ್ಛತೆ, ಶುದ್ಧ ಕುಡಿಯುವನೀರು,ವೇದಿಕೆ,ವಿದ್ಯುತ್‌,ಧ್ವನಿವರ್ಧಕ,ಜನರೇಟರ್‌, ಆಸನಗಳ ವ್ಯವಸ್ಥೆಗಳ ಜೊತೆಗೆ ಪೊಲೀಸ್‌ಬಂದೋಬಸ್ತ ವ್ಯವಸ್ಥೆ ಮಾಡುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿದರು.

ಕಡ್ಡಾಯವಾಗಿ ಅಧಿಕಾರಿಗಳು ಪಾಲ್ಗೊಳ್ಳಿ:

ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸುವ ಮೂಲಕ ಸಾಮಾಜಿಕಅಂತರ ಕಾಯ್ದುಕೊಳ್ಳಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯ ಉಪಕಾರ್ಯದರ್ಶಿ ಪ್ರಕಾಶ್‌, ಅಪರ ಜಿಲ್ಲಾಧಿಕಾರಿ ವಿ.ಆರ್‌.ಶೈಲಜಾ,ಮಂಡ್ಯ ಉಪ ವಿಭಾಗಾಧಿಕಾರಿ ನೇಹಾಜೈನ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವವನ್ನು ಯಾವುದೇ ಲೋಪವಿಲ್ಲದಂತೆಯಶಸ್ವಿಗೊಳಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿದ್ದು, ಸಮರ್ಪಕವಾಗಿಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಡಾ.ಎಂ.ವಿ.ವೆಂಕಟೇಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.