ಸೂಕ್ತ ಬೆಲೆ ಸಿಗದ್ದಕ್ಕೆ ಟ್ರ್ಯಾಕ್ಟರ್ ಬಳಸಿ ರೇಷ್ಮೆ ಬೆಳೆ ನಾಶ
Team Udayavani, May 22, 2021, 6:07 PM IST
ಮದ್ದೂರು: ರೇಷ್ಮೆ ಬೆಳೆಗೆ ಸೂಕ್ತ ಬೆಲೆಸಿಗದ ಕಾರಣ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದು ನಿಂತಿದ್ದ ರೇಷ್ಮೆಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿರುವ ಘಟನೆ ತಾಲೂಕಿನ ಹರಳಕೆರೆ ಗ್ರಾಮದಲ್ಲಿ ಜರುಗಿದೆ.
ಹರಳಕೆರೆ ಗ್ರಾಮದ ರೈತ ಗಿರೀಶ್ ರೇಷ್ಮೆಬೆಳೆ ನಾಶ ಮಾಡಿದ್ದು, ಒಂದು ಎಕರೆ ಜಮೀನಿನಲ್ಲಿ ಬೆಳೆದುನಿಂತಿದ್ದ ರೇಷ್ಮೆ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಕಳೆದ ಹಲವಾರು ವರ್ಷಗಳಿಂದಲೂರೇಷ್ಮೆ ಬೆಳೆಯನ್ನೇ ನಂಬಿ ಜೀವನಸಾಗಿಸುತ್ತಿದ್ದ ತಮಗೆ ಲಾಕ್‌ಡೌನ್ ಸಂದರ್ಭದಲ್ಲಿ ರೇಷ್ಮೆ ಬೆಳೆಗೆ ಸೂಕ್ತಮಾರುಕಟ್ಟೆ ಬೆಲೆ ಸಿಗದೆ ಹಾಗೂ ಸರ್ಕಾರ ವಿತರಿಸುತ್ತಿದ್ದ ಪ್ರತಿ ಕೆ.ಜಿ.ಗೆ 40 ರೂ. ಪ್ರೋತ್ಸಾಹಧನವನ್ನು ಏಕಾಏಕಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಲಾಭಕ್ಕಿಂತನಷ್ಟವೇ ಉಂಟಾದ ಹಿನ್ನೆಲೆಯಲ್ಲಿ ರೇಷ್ಮೆಬೆಳೆಯನ್ನು ನಾಶಪಡಿಸುತ್ತಿರುವುದಾಗಿ ಪತ್ರಿಕೆಗೆ ತಿಳಿಸಿದರು.
ಕಳೆದ ವರ್ಷದ ಹಿಂದೆ 3ಲಕ್ಷ ರೂ. ಸಾಲ ಮಾಡಿ ರೇಷ್ಮೆ ಬೇಸಾಯದಜತೆಗೆ ರೇಷ್ಮೆ ಹುಳು ಸಾಕಾಣಿಕೆ ಮನೆ,ಕೊಳವೆಬಾವಿ ನಿರ್ಮಾಣ ಇನ್ನಿತರೆ ಅಗತ್ಯಸೌಲಭ್ಯಗಳನ್ನು ಪಡೆದಿದ್ದರೂ ರೇಷ್ಮೆ ಗೂಡಿಗೆ ಉತ್ತಮ ಬೆಲೆ ಸಿಗದೆ ಜೀವನ ನಿರ್ವಹಣೆಮಾಡುವುದೇ ಕಷ್ಟ ಸಾಧ್ಯ ಹಿನ್ನೆಲೆಯಲ್ಲಿ ಬೆಳೆ ನಾಶಗೊಳಿಸಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹಧನ ವಿತರಿಸುವ ಜತೆಗೆ ಮಾರುಕಟ್ಟೆಯಲ್ಲಿ ಉತ್ತಮ ದರ ನಿಗದಿ ಮಾಡುವಂತೆ ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.