ಪುರಾತನ ಕಲ್ಯಾಣಿಗಳ ಅಭಿವೃದಿ: ಪುಟ್ಟರಾಜು


Team Udayavani, Aug 27, 2022, 1:32 PM IST

ಪುರಾತನ ಕಲ್ಯಾಣಿಗಳ ಅಭಿವೃದಿ: ಪುಟ್ಟರಾಜು

ಮೇಲುಕೋಟೆ: ಮೇಲುಕೋಟೆಯ ಎಲ್ಲ ಪುರಾತನ ಕಲ್ಯಾಣಿಗಳನ್ನು ಆಕರ್ಷಣೀಯವಾಗಿ ವಿಶೇಷ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಜತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

ಮೇಲುಕೋಟೆ ಗ್ರಾಪಂ ಕಚೇರಿ ಆವರಣದಲ್ಲಿ ಸಂಜೀವಿನಿ ಭವನದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಶೀಘ್ರ ಸಭೆ: ಸಚಿವನಾಗಿದ್ದ ವೇಳೆ ಮೇಲುಕೋಟೆಯ ಕಲ್ಯಾಣಿಗಳ ಜೀರ್ಣೋದ್ಧಾರ ಕಾಮಗಾರಿಗಳ ಮಾಸ್ಟರ್‌ ಪ್ಲಾನ್‌ ಸಿದ್ಧಮಾಡಿ 32 ಕೋಟಿ ರೂ. ಮೀಸಲಿ ರಿಸಿದ್ದೆ. ಇದೀಗ ಮೊದಲ ಕಂತಾಗಿ 16 ಕೋಟಿ ರೂ. ಬಿಡುಗಡೆ ಯಾಗಿ ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದೆ. ಶೀಘ್ರ ಕೆಲಸ ಆರಂಭಿಸಲಾಗುತ್ತದೆ. ಮೇಲುಕೋಟೆ ಸಮಗ್ರ ಅಭಿವೃದ್ಧಿಗೆ ಅಂತಿಮ ಹಂತದ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿಗಳ ಅಧ್ಯ ಕ್ಷತೆ ಯಲ್ಲೇ ಸಭೆ ನಡೆಯಲಿದೆ ಎಂದರು.

ಗ್ರಾಪಂ ಅಧ್ಯಕ್ಷ ಸೋಮಶೇಖರ್‌, ಉಪಾಧ್ಯಕ್ಷ ತಿರುಮಲೆ, ಸದಸ್ಯರಾದ ಜಯರಾಮೇಗೌಡ, ಜಿ.ಕೆ. ಕುಮಾರ್‌, ಮಣಿಮುರುಗನ್‌, ಪಂಚಾಯತ್‌ ಅಭಿ ವೃದ್ಧಿ ಅಧಿಕಾರಿ ರಾಜೇಶ್ವರ್‌, ಸ್ಥಾನಾಚಾರ್ಯ ತಿರುನಾರಾಯಣ ಅಯ್ಯಂಗಾರ್‌, ಸಂಜೀವಿನಿ ಒಕ್ಕೂಟದ ಸದಸ್ಯರು, ಎಇಇ ಕುಮಾರ್‌, ನರೇಗಾ ಅಭಿಯಂತರ ಮಧುಕುಮಾರ್‌ ಮತ್ತಿತರರಿದ್ದರು.

ಶೀಘ್ರ ಮುಖ್ಯಮಂತ್ರಿಗಳ ಸಭೆ: ಕಳೆದ ವೈರಮುಡಿಗೆ ಬಂದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಭರವಸೆ ಶೀಘ್ರ ಸಾಕಾರವಾಗಲಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು. ಮೇಲುಕೋಟೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲಾಗಿದೆ. ಮುಂದಿನ ತಿಂಗಳು ಮಲೈಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳ ಸಭೆ ನಿಗದಿಯಾಗಲಿದ್ದು, ಇದೇ ವೇಳೆ ಸಭೆ ನಡೆಸಿ ಮೇಲುಕೋಟೆ ಅಭಿವೃದ್ಧಿ ಕಾರ್ಯಗಳಿಗೂ ಅನುಮೋದನೆ ನೀಡುತ್ತೇನೆ ಎಂದು ಸಿಎಂ ವಾಗ್ಧಾನ ಮಾಡಿದ್ದಾರೆ. ಹೀಗಾಗಿ ಅಭಿವೃದ್ಧಿ ಕಾರ್ಯದಲ್ಲಿ ಜನತೆ ಒಗ್ಗಟ್ಟಾಗಿ ಕೈಜೋಡಿಸಬೇಕು ಎಂದರು.  ಸ್ವಸಹಾಯ ಸಂಘದ ಮಹಿಳೆಯರು ಒಂಡೆದೆ ಕುಳಿತು ತಮ್ಮ ಸಮಸ್ಯೆ- ಸಾಧನೆ , ಕೆಲಸಗಳನ್ನು ಪರಸ್ಪರ ಹಂಚಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಲು 24 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ಸಂಜೀ ವಿನಿ ಭವನ ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಸ್ವಸಹಾಯ ಸಂಘ ಇದರ ಸದುಪಯೋಗ ಪಡೆದುಕೊಳ್ಳ ಬೇಕು. ಒಕ್ಕಲಿಗರ ಬೀದಿಯಲ್ಲಿ ರಾಮಮಂದಿರ ಮತ್ತು ಗಣಪತಿ ದೇಗುಲದ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ್ದು ಮುಂಬರುವ ಅಕ್ಟೋಬರ್‌ನಲ್ಲಿ ಲೋಕಾರ್ಪಣೆ ಮಾಡಲಾಗುವುದೆಂದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.