![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 20, 2022, 3:10 PM IST
ದೆಹಲಿ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದನಾರಾಯಣಗೌಡ ಅವರು, ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತೀಕರಿಸಲು ಮನವಿ ಮಾಡಿದರು. ಸಚಿವ ಡಾ.ನಾರಾಯಣಗೌಡ ಅವರ ಮನವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸಚಿವ ಡಾ.ನಾರಾಯಣಗೌಡ ಮಾತನಾಡಿ, ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹಾಗಾಗಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ,ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂಓದಿ:ಸರಕಾರದ ಶೇ.40 ಕಮಿಷನ್ ಲಂಚ ಹಾಗೂ ಮಂಚದ ಬಗ್ಗೆ ಪ್ರಧಾನಿ ಮಾತನಾಡಲಿ: ಮಾಜಿ ಸಂಸದ ಶಿವರಾಮಗೌಡ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕದ ಹಿರಿಯ ಸಾಹಿತಿ ಎಸ್ ಎಲ್ ಬೈರಪ್ಪ ಅವರ ಪರ್ವ ಕಾದಂಬರಿ ಇಂಗ್ಲೀಷ್ ಅನುವಾದಿತ ಪ್ರತಿಯನ್ನು ನಾರಾಯಣಗೌಡ ಅವರು ಉಡುಗೊರೆಯಾಗಿ ನೀಡಿದರು. ಈ ವೇಳೆ ಕುತೂಹಲಭರಿತರಾಗಿ ಕಾದಂಬರಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸಚಿವರು, ಇದನ್ನು ಖಂಡಿತವಾಗಿ ಓದುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಅವರು ಉಪಸ್ಥಿತರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.