ವಿವಿಧ ಇಲಾಖೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ
Team Udayavani, Dec 25, 2020, 3:23 PM IST
ಮಳವಳ್ಳಿ: ವಿವಿಧ ಇಲಾಖೆಗಳು ನೀಡಿರುವ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು.
ಪಟ್ಟಣದಲ್ಲಿ ಅಧ್ಯಕ್ಷೆ ರಾಧಾ ನಾಗರಾಜು ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯ ಆರಂಭದಲ್ಲಿ ಕಾಂಗ್ರೆಸ್ ಸದಸ್ಯರಾದ ಶಿವಸ್ವಾಮಿ, ರಾಜಶೇಖರ್ ಮತ್ತು ಮಹೇಶ್ವರಿ ಅವರು 14ನೇ ಹಣಕಾಸುಯೋಜನೆಯ ಹಣಕಾಸು ನಿಧಿಯನ್ನು ಪಟ್ಟಣದ 18 ವಾರ್ಡ್‌ಗಳಿಗೆ ಮಾತ್ರ ಹಂಚಿಕೆ ಮಾಡಿದ್ದು, ಉಳಿದ 5 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಸದಸ್ಯರು ಇರುವುದರಿಂದ ಅನುದಾನ ನೀಡದೆ ಮುಖ್ಯಾಧಿಕಾರಿ ಕೆ.ಎಸ್. ಗಂಗಾಧರ್ ಅವರು, ಶಾಸಕ ಡಾ.ಕೆ.ಅನ್ನದಾನಿ ಅವರ ಕೈಗೊಂಬೆಯಂತೆ ವರ್ತಿಸಿ ತಾರತಮ್ಯ ಮಾಡುತ್ತಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ವಾರ್ಡ್ ಅಭಿವೃದ್ಧಿ: ಉಪಾಧ್ಯಕ್ಷ ಟಿ.ನಂದಕುಮಾರ್ ಮಾತನಾಡಿ, ಹಿಂದೆಶಾಸಕರಾಗಿದ್ದ ಪಿ.ಎಂ.ನರೇಂದ್ರ ಸ್ವಾಮಿ ಅವರ ಕಾಲದಲ್ಲೂ ಸಾಕಷ್ಟು ತಾರತಮ್ಯ ಮಾಡಿದ್ದು, ಈಗಿನ ಶಾಸಕರು ಎಲ್ಲ ವಾರ್ಡ್ ಗಳ ಅಭಿವೃದ್ಧಿಗೆಮುಂದಾಗಿದ್ದಾರೆ ಎಂದರು.
ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಉಪಾಧ್ಯಕ್ಷ ಟಿ.ನಂದಕುಮಾರ್, ಜೆಡಿಎಸ್ ಸದಸ್ಯರಾದಪ್ರಶಾಂತ್ ಕುಮಾರ್, ಸಿದ್ದರಾಜು ಅವರು ಮುಂದಿನ ದಿನಗಳಲ್ಲಿ ಅನುದಾನ ನೀಡುವ ಭರವಸೆ ನೀಡಿದರು.
ಕಾಮಗಾರಿಯಲ್ಲಿ ಗುಣಮಟ್ಟವಿಲ್ಲ: ಪುರಸಭೆ ವ್ಯಾಪ್ತಿಯಲ್ಲಿ ಕಳೆದ 2 ವರ್ಷ ನಡೆದಿರುವ ಅಭಿವೃದ್ಧಿಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಈ ಸಂಬಂಧ ಗುತ್ತಿಗೆದಾರರ ವಿರುದ್ಧ ಕ್ರಮತೆಗೆದುಕೊಂಡು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸುಮಾಡಬೇಕು ಎಂದು ಎಲ್ಲ ಸದಸ್ಯರು ಆಗ್ರಹಿಸಿದರು. 9ನೇ ವಾರ್ಡ್‌ನ ಸದಸ್ಯೆ ಸವಿತಾ ಮಾತನಾಡಿ,ತಮ್ಮ ವಾರ್ಡ್‌ನಲ್ಲಿ ಶುದ್ಧ ನೀರಿನ ಘಟಕ ಸ್ಥಾಪಿಸಿ, ಎರಡು ವರ್ಷ ಕಳೆದರೂ ಉದ್ಘಾಟನೆ ಮಾಡಿಲ್ಲ.ಇದರಿಂದ ಜನರಿಗೆ ತೊಂದರೆಯಾಗಿದೆ ಎಂದು ಆರೋಪಿಸಿದರು.
ಕೊಳವೆ ಬಾವಿಯಿಂದ ನೀರು ಪೂರೈಕೆ: ಇದಕ್ಕೆಉತ್ತರಿಸಿದ ಮುಖ್ಯಾಧಿಕಾರಿ ಕೆ.ಎಸ್.ಗಂಗಾಧರ್,ಕಾವೇರಿ ನೀರನ್ನು ನೇರವಾಗಿ ಶುದ್ಧ ನೀರಿನ ಘಟಕಕ್ಕೆಸಂಕರ್ಪ ಕಲ್ಪಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸದ್ಯದಲ್ಲಿಯೇ ಕೊಳವೆ ಬಾವಿಯಿಂದ ನೀರುಪೂರೈಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಸದಸ್ಯ ಪ್ರಶಾಂತ್‌ಕುಮಾರ್ ಮಾತನಾಡಿ, ಪುರಸಭೆ ಯಲ್ಲಿ ಇ-ಸ್ವತ್ತು ಮಾಡಿಸಲು ಜನರುಪರದಾಡುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ ಸುತ್ತೋಲೆಯ ಬಗ್ಗೆ ಮಾಹಿತಿ ನೀಡಿ ಎಂದರು.
ಪ್ರಮಾಣ ವಚನ: ಸಭೆ ಆರಂಭದಲ್ಲಿ ಸದಸ್ಯರುಪ್ರಮಾಣ ವಚನ ಸ್ವೀಕರಿಸಿದರು. ಬಹುತೇಕ ಸದಸ್ಯರುದೇವರ ಹೆಸರಿನಲ್ಲಿ ಸ್ವೀಕರಿಸಿದರೆ, ಉಪಾಧ್ಯಕ್ಷಟಿ.ನಂದಕುಮಾರ್ ಅವರು ಡಾ.ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೆಸರಿನಲ್ಲಿಹಾಗೂ ಇನ್ನು ಕೆಲ ಸದಸ್ಯರು ಡಾ. ಅಂಬೇಡ್ಕರ್ ಹೆಸರಿನಲ್ಲಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.