ಡಿಸ್ನಿಲ್ಯಾಂಡ್ ನನ್ನ ಕನಸಿನ ಯೋಜನೆ: ಕುಮಾರಸ್ವಾಮಿ
Team Udayavani, Feb 20, 2019, 7:29 AM IST
ಮಂಡ್ಯ: ಕೃಷ್ಣರಾಜಸಾಗರ ಸಮೀಪ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನವನ್ನು ಅಭಿವೃದ್ಧಿಪಡಿಸುವುದು ನನ್ನ ಕನಸಿನ ಯೋಜನೆ. ಅದನ್ನು ಮಾಡಿಯೇ ತೀರುವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಕಳೆದ ಬಜೆಟ್‌ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಅಭಿವೃದ್ಧಿಪಡಿಸಲು ಸೂಚಿಸಿದ್ದೆ. ಆ ಸ್ಥಳದಲ್ಲಿ ಕಾವೇರಿ ಪ್ರತಿಮೆ ನಿರ್ಮಿಸುವುದಾಗಿ ಸಚಿವರು ಹೇಳಿಕೆ ನೀಡಿ ಗೊಂದಲ ಸೃಷ್ಠಿಸಿದರು. ಇದೇ ಯೋಜನೆ ಅನುಷ್ಠಾನಕ್ಕೆ ಮುಳುವಾಗಿತ್ತು.
ಡಿಸ್ನಿಲ್ಯಾಂಡ್ ಬೇಡ ಎಂದು ಹೋರಾಟ ಮಾಡುವವರಲ್ಲಿ ನಾನು ಕೈಮುಗಿದು ಮನವಿ ಮಾಡುತ್ತೇನೆ. ಕೆಆರ್‌ಎಸ್ ನಮ್ಮ ಆಸ್ತಿ. ರೈತರ ಬದುಕಿನ ಜೊತೆ ಚೆಲ್ಲಾಟವಾಡುವುದಿಲ್ಲ. ಅಣೆಕಟ್ಟೆಗೆ ಧಕ್ಕೆಯಾಗದಂತೆ ನೈಪುಣ್ಯತೆ ಹೊಂದಿರುವವರನ್ನು ಕರೆತಂದು ಡಿಸ್ನಿಲ್ಯಾಂಡ್ ನಿರ್ಮಿಸುವೆ ಎಂದರು.
ಡಿಸ್ನಿಲ್ಯಾಂಡ್ ಕೇವಲ ಮನರಂಜನೆಗಲ್ಲ. ಇದರಿಂದ 40 ರಿಂದ 50 ಸಾವಿರ ಮಂದಿಗೆ ಉದ್ಯೋಗ ಲಭಿಸಲಿದೆ. ಇದರಿಂದ ನಮ್ಮ ಮಕ್ಕಳಿಗೆ ಅನುಕೂಲವಾಗುವುದು. ರೈತರಿಂದ ಯಾವುದೇ ಭೂಮಿ ವಶಪಡಿಸಿಕೊಳ್ಳುವುದಿಲ್ಲ. ವಿವಿಧ ಇಲಾಖೆಗಳಿಗೆ ಸೇರಿದ ಸಾಕಷ್ಟು ಜಮೀನಿದೆ. ಇಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಮಾಡುವೆ ಎಂದು ಸ್ಪಷ್ಟ ನಿಲುವು ವ್ಯಕ್ತಪಡಿಸಿದರು.
23 ಸಾವಿರ ಕೋಟಿ ರೈತರ ಸಾಲ ಮನ್ನಾ: ಹೆಚ್‌ಡಿಕೆ
ಮಂಡ್ಯ: ರಾಜ್ಯದಲ್ಲಿ 46 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಮಾ.31ರೊಳಗೆ 10 ಸಾವಿರ ಕೋಟಿ ರೂ. ಬ್ಯಾಂಕುಗಳಿಗೆ ಬಿಡುಗಡೆಯಾಗಲಿದೆ. ಮುಂದಿನ ಸಾಲಿನ ಮಾ.31ರೊಳಗೆ 13 ಸಾವಿರ ಕೋಟಿ ರೂ. ಬಿಡುಗಡೆಯಾಗುವುದರೊಂದಿಗೆ ಒಟ್ಟಾರೆ 23 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಆಗಲಿದೆ ಎಂದು ಅಂಕಿ-ಅಂಶಗಳ ಸಹಿತ ವಿವರಿಸಿದರು.
ಜಿಲ್ಲೆಯಲ್ಲಿರುವ ಸಹಕಾರಿ ಕ್ಷೇತ್ರದ ರೈತರಿಗೆ 578 ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 92 ಕೋಟಿ ರೂ. ಖಾಸಗಿ ಬ್ಯಾಂಕುಗಳಲ್ಲಿ ಶೇ.97ರಷ್ಟು ಸಾಲ ತೀರುವಳಿಗೆ ಹಣ ಬಿಡುಗಡೆ ಮಾಡಿದೆ. ನಿನ್ನೆ ಸಂಜೆಯವರೆಗೆ 44 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.