ನಿರಾಶ್ರಿತರಿಗೆ ಆಹಾರ ವಿತರಣೆ
Team Udayavani, Apr 1, 2020, 3:17 PM IST
ಮದ್ದೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕೆಭಾರತವನ್ನು ಲಾಕ್‌ಡೌನ್ ಮಾಡಲಾಗಿದ್ದು, ಅದು ಮುಗಿಯುವವರೆಗೆ ನಿರಾಶ್ರಿತರು ಹಾಗೂ ದಿನಗೂಲಿ ನೌಕರರಿಗೆ ಪ್ರತಿನಿತ್ಯ ಆಹಾರ ವಿತರಣೆ ಜವಾಬ್ದಾರಿಯನ್ನು ಶಾಸಕ ಡಿ.ಸಿ.ತಮ್ಮಣ್ಣ ವಹಿಸಿಕೊಂಡಿದ್ದಾರೆ.
ನಗರದ ಶಾದಿ ಮಹಲ್‌ನಲ್ಲಿ ಆಹಾರ ತಯಾರಿ ಮಾಡಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, ತಯಾರಿಕಾ ಸಮಯದಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣ ಪುರಸಭೆಯ 23 ವಾರ್ಡ್, 32 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರಿಗೆ ಪ್ರತಿನಿತ್ಯ ಆಹಾರ ವಿತರಣೆಗೆ ಕ್ರಮ ವಹಿಸಲಾಗಿದೆ.
ಇನ್ನು 14 ದಿನ ಪ್ರತಿನಿತ್ಯ ಎರಡು ಬಾರಿ ಆಹಾರ ವಿತರಣೆ ಮಾಡಲಾಗುವುದು. ಗ್ರಾಪಂಗಳಲ್ಲಿ ಅಗತ್ಯ ದಿನಬಳಕೆ ವಸ್ತುಗಳನ್ನು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ವಿತರಣೆ ಮಾಡುವುದಾಗಿ ತಹಶೀಲ್ದಾರ್ ವಿಜಯ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಮುನಿರಾಜು, ತಾಲೂಕು ವೈದ್ಯಾಧಿಕಾರಿ ಡಾ.ಆಶಾಲತಾ, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮಯ್ಯ, ಪುರಸಭಾ ಸದಸ್ಯರಾದ ಪ್ರವೀಣ್, ಪ್ರಸನ್ನ, ಆದಿಲ್ ಖಾಲಿ ಖಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.