ಸಿಎಂ, ನೀರಾವರಿ ಸಚಿವರ ಅಣಕು ತಿಥಿ ಕಾರ್ಡ್ ವಿತರಣೆ
Team Udayavani, Aug 1, 2017, 8:00 AM IST
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ.ಪಾಟೀಲ್‌ರ ಅಣಕು ತಿಥಿ ಕಾರ್ಡ್ ಮುದ್ರಿಸುವ ಮೂಲಕ ಮದ್ದೂರು ಕೆರೆಯಂಗಳದ ಅಹೋರಾತ್ರಿ ಧರಣಿ ನಿರತರು ವಿನೂತನ ಪ್ರತಿಭಟನೆ ನಡೆಸಿದರು. ವಿಸಿ ನಾಲೆಗೆ ನೀರು ಹರಿಸಿ ಜಿಲ್ಲೆಯ ಕೆರೆಕಟ್ಟೆ ತುಂಬಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಳೆದ 24 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಸರ್ಕಾರ ಸೊಪ್ಪು ಹಾಕದ ಹಿನ್ನೆಲೆಯಲ್ಲಿ ವಿಭಿನ್ನ ಪ್ರತಿಭಟನೆಯಿಂದ ಗಮನ ಸೆಳೆಯುವ ತಂತ್ರಕ್ಕೆ ಮುಂದಾಗಿದೆ.
ಅಣಕು ಉತ್ತರ ಕ್ರಿಯಾದಿ ಭೂ ಶಾಂತಿ ಆಹ್ವಾನ ಪತ್ರಿಕೆ ಕಾರ್ಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರ ಭಾವಚಿತ್ರ ಸಹಿತ ಪ್ರಕಟಿಸಿರುವ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಮಂಗಳವಾರ ಬೆಳಗ್ಗೆ 11 ಗಂಟೆಗೆ ಕೆರೆಯಂಗಳದಲ್ಲಿ ನಡೆಯುವ ತಿಥಿ ಕಾರ್ಯಕ್ರಮದ ಬಳಿಕ ಭೋಜನ ವ್ಯವಸ್ಥೆ, ರಾತ್ರಿ 6 ಗಂಟೆಗೆ ಗುರುಪುತ್ರ ವಳಗೆರೆಹಳ್ಳಿ ರಮೇಶ್ ಮತ್ತು ತಂಡದವರಿಂದ ಅಖಂಡ ಭಜನೆ ಕಾರ್ಯಕ್ರಮ ಆಯೋಜಿಸಿರುವುದಾಗಿ ಮುದ್ರಿಸಿ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.