ಪ್ರತಿದಿನ 100 ಕಾರ್ಡ್‌ಗೆ ಪಡಿತರ ವಿತರಣೆ
Team Udayavani, Apr 4, 2020, 1:07 PM IST
ಮಂಡ್ಯ: ಕೋವಿಡ್ 19 ಸೋಂಕಿನ ಹಿನ್ನಲೆಯಲ್ಲಿ ದೇಶ ಲಾಕ್‌ಡೌನ್ ಆಗಿರುವ ಕಾರಣ ಬಡವರು ಹಸಿವಿನಿಂದ ಪರದಾಡಬಾರದೆಂದು ಸರ್ಕಾರ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಿ, ಪ್ರತಿನಿತ್ಯ 100 ಟೋಕನ್ ವಿತರಿಸಲಾಗುತ್ತಿದೆ ಎಂದು ನ್ಯಾಯಬೆಲೆ ಮಾಲೀಕರ ಸಂಘದ ಅಧ್ಯಕ್ಷ ಎಚ್. ಪಿ. ಸಚ್ಚಿದಾನಂದ ತಿಳಿಸಿದರು.
ತಾಲೂಕಿನ ಹೊಳಲು ಸಹಕಾರ ಸಂಘದಲ್ಲಿ ಉಚಿತ ಪಡಿತರ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಹಾಲಿ ಸಹಕಾರ ಸಂಘದಲ್ಲಿ 1582 ಪಡಿತರ ಚೀಟಿಗಳಿದ್ದು, ಇದರಲ್ಲಿ ಪ್ರತಿನಿತ್ಯ 100 ಟೋಕನ್ ನೀಡಲಾಗುತ್ತಿದೆ. ಟೋಕನ್ ಪಡೆದವರು ಅನ್ನಭಾಗ್ಯದ ಉಚಿತ ಅಕ್ಕಿ ಮತ್ತು ಗೋಧಿ ಪಡೆಯಬಹುದು ಎಂದು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾಮಿಯಾನ ಹಾಕಿಸಿದ್ದೇವೆ. ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಟೋಕನ್ ಮುಗಿಯುವವರೆಗೂ ಪಡಿತರ ವಿತರಿಸುತ್ತೇವೆ. ಪ್ರತಿಯೊಬ್ಬರೂ ಅಂತರ ಕಾಯ್ದು ಕೊಂಡು ಪಡಿತರ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವೇಳೆ ಸಂಘದ ನಿರ್ದೇಶಕ ನಂದೀಶ್, ಶಿವಕುಮಾರ್, ಜೋಗಯ್ಯ, ಸುರೇಶ್ ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.