ಕೋವಿಡ್ ಚಿಕಿತ್ಸೆಗೆ ಜಿಲ್ಲಾಡಳಿತ ಸಜ್ಜು
Team Udayavani, Dec 27, 2022, 2:29 PM IST
ಮಂಡ್ಯ: “ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ನ ಪ್ರಕರಣವಿಲ್ಲ. ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣ ಕಂಡು ಬಂದಲ್ಲಿ ಪೂರಕವಾಗಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ನಿರ್ದೇಶನ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಂಡು ಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಮತ್ತು ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಐಎಲ್‌ಐ, ಎಸ್‌ಎಆರ್‌ಐ ಲಕ್ಷಣಗಳುಳ್ಳವರಿಗೆ ಆರ್‌ಎಟಿ, ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲು ಅ ಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು. ಮಂಡ್ಯ ಮೆಡಿಕಲ್ ಕಾಲೇಜು, ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಬಗ್ಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಮತ್ತು ತಾಲೂಕು ಆರೋಗ್ಯಾ ಧಿಕಾರಿಗಳಿಗೆ ಸೂಚಿಸಿದರು.
ಜಾಗೃತಿ ಮೂಡಿಸಿ: ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಹಾಗೂ ಇನ್ನಿತರ ಮೂಲ ಸೌಕರ್ಯ ಪರಿಶೀಲನೆ ಮಾಡಿ. ಪ್ರತಿ ತಾಲೂ ಕಿನಲ್ಲಿ ಆಯಾ ಶಾಸಕರ ಅಧ್ಯಕ್ಷತೆ ಯಲ್ಲಿ ತಾಲೂಕು ಹಂತದಲ್ಲಿ ಸಭೆ ನಡೆಸಿ. ಇನ್ನು ಸಾರ್ವಜನಿಕರೂ ಕೋವಿಡ್ ನಿಯಮ ಪಾಲಿಸಿ, ಮಾಸ್ಕ್ ಧರಿಸಿ ಜಿಲ್ಲಾಡ ಳಿ ತದೊಂದಿಗೆ ಸಹಕರಿಸುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್. ಧನಂಜಯ ಮಾತನಾಡಿ, ಕನಿಷ್ಠ 4 ಸಾವಿರ ಮಾದರಿಗಳನ್ನು ಪ್ರಯೋಗಶಾಲೆಯ ಪರೀಕ್ಷೆಗೆ ಒಳಪಡಿಸಬಹುದು. 4 ಸಾವಿರಕ್ಕಿಂತ ಹೆಚ್ಚುವರಿ ಮಾದರಿ ಸಂಗ್ರಹವಾದಲ್ಲಿ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನೀಡಿ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್‌ಕುಮಾರ್, ಕುಷ್ಟ ರೋಗ ನಿಯಂತ್ರಣಾ ಧಿಕಾರಿ ಡಾ.ಆಶಾ ಲತಾ, ಆರೋಗ್ಯ ಇಲಾಖೆ ಡಾ.ರವೀಂದ್ರ, ಡಾ.ಮರಿಗೌಡ, ಡಾ.ಜವರೇಗೌಡ, ಡಾ.ಶಶಿಧರ್, ಡಾ.ಭವಾನಿಶಂಕರ್, ಡಾ.ಕೆ.ಪಿ.ಅಶ್ವಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ವಾರ್ತಾ ಧಿಕಾರಿ ಎಸ್. ಎಚ್.ನಿರ್ಮಲಾ ಮತ್ತಿತರರಿದ್ದರು.
ದಡಾರ –ರುಬೆಲ್ಲಾ ನಿರ್ಮೂಲನೆಗೆ ಶ್ರಮಿಸಲು ಮುಂದಾಗಿ : ದಡಾರ ಮತ್ತು ರುಬೆಲ್ಲಾ ರೋಗವನ್ನು 2023ರ ಅಂತ್ಯದೊಳಗೆ ನಿರ್ಮೂಲನೆ ಮಾಡಲು ಜಿಲ್ಲೆಯಲ್ಲಿ ಎಲ್ಲಾ ಇಲಾಖೆ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಡಾರ-ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮ ಕುರಿತಾದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಸಿಕೆ ಕಾರ್ಯಕ್ರಮ: ಜಿಲ್ಲೆಯಲ್ಲಿ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮವನ್ನು ಡಿಸೆಂಬರ್ 2023ರ ಒಳಗಾಗಿ ಸಂಪೂರ್ಣವಾಗಿ ನಿರ್ಮೂಲನಾ ಮಾಡಲು ಯೋಜನೆ ರೂಪಿಸಬೇಕು. ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳಲ್ಲಿ ದಡಾರ ಮತ್ತು ರುಬೆಲ್ಲಾ ಪ್ರಕರಣ ವರದಿಯಾಗಿದ್ದು ಸರ್ಕಾರದ ನಿರ್ದೇಶನದಂತೆ ವಿಶೇಷ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ವಲಸೆ ಕಾರ್ಮಿಕರ, ಸ್ಲಂಗಳ ಹಾಗೂ ಇನ್ನಿತರ ಸ್ಥಳಗಳಲ್ಲಿ ವಾಸಿಸುವ ಮಕ್ಕಳು ಲಸಿಕೆ ಪಡೆಯದೇ ಇದ್ದಲ್ಲಿ ಲಸಿಕೆ ಕೊಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಟಿ.ಎನ್.ಧನಂಜಯ ಮಾತನಾಡಿ, ಪ್ರತಿ ಮಗುವಿಗೆ 9-12 ತಿಂಗಳು, 16-24 ತಿಂಗಳಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ತಪ್ಪದೇ ಕೊಡಿಸಬೇಕು. ಏಪ್ರಿಲ್‌ಯಿಂದ ನವೆಂಬರ್‌ವರೆಗೆ ಜಿಲ್ಲೆಯಲ್ಲಿ ಸುಮಾರು 15,187 ಮಕ್ಕಳಲ್ಲಿ ಈಗಾಗಲೇ 15,042 ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ನೀಡಲಾಗಿದ್ದು, ರಾಜ್ಯದಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ ಎಂದರು.
ಲಸಿಕೆಯನ್ನು ಪಡೆಯದೆ ಇರುವ ಮಕ್ಕಳಿಗಾಗಿ ಈಗಾಗಲೇ ಸರ್ವೆ ಕೈಗೊಂಡು ಲಸಿಕೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.