ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ
Team Udayavani, Feb 14, 2023, 1:13 PM IST
ಮಂಡ್ಯ: ಕನಿಷ್ಠ ಬೆಂಬಲ ಯೋಜನೆಯಡಿ 2023ನೇ ಸಾಲಿನ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ಸರ್ಕಾರ ಮುಂದಾಗಿದೆ. ಜಿಲೆಯಲ್ಲಿ ನೋಂ ದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿ, ಕೊಬ್ಬರಿ ಪ್ರತಿ ಕ್ವಿಂಟಾಲ್ ಗೆ ಸರ್ಕಾರ 11,750 ರೂ. ಕನಿಷ್ಟ ಬೆಂಬಲ ಬೆಲೆ ಘೋಷಿಸಿದೆ. ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದಿಂದ ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎಪಿಎಂಸಿ ಆವರಣದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಖರೀದಿ ಕೇಂದ್ರದಲ್ಲಿ ಸೌಲಭ್ಯ ನೀಡಿ: ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್‌ನಂತೆ ಖರೀದಿಸಬೇಕು. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿದ್ದು, ಜಿಲ್ಲೆಯಲ್ಲಿ ಒಟ್ಟು 68,466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿವೆ. ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಗಳಾಗಿವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಎಪಿಎಂಸಿ ಉಪನಿರ್ದೆಶಕ ಕೆ.ಶ್ರೀನಿವಾಸರೆಡ್ಡಿ, ಕೆ.ಆರ್.ಪೇಟೆ ಎಪಿಎಂಸಿ ಕಾರ್ಯದರ್ಶಿ ರಫೀಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.