ಡಿಕೆಶಿ ಪದಗ್ರಹಣ ನೇರ ಪ್ರಸಾರ
Team Udayavani, Jun 1, 2020, 5:40 AM IST
ಮಂಡ್ಯ: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್‌ಗೌಡ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭ ಜೂ.7ರಂದು ನಡೆಯಲಿದ್ದು, ಈ ಕೊರೊನಾ ಸಂದರ್ಭದಲ್ಲಿ ಅದೂಟಛಿರಿ ಕಾರ್ಯಕ್ರಮ ಮಾಡುತ್ತಿಲ್ಲ.
ಕೆಪಿಸಿಸಿ ಕಚೇರಿಯಲ್ಲೇ ಅಧಿಕಾರ ಸ್ವೀಕರಿಸುವ ಸಮಾರಂಭ ನಡೆಯಲಿದ್ದು, ಸಮಾರಂಭದ ದೃಶ್ಯಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಮತ್ತು ರಾಷ್ಟ್ರಧ್ವಜ ಹಿಡಿದು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭ ವೀಕ್ಷಣೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮಾತನಾಡಿ, ಜಿಲ್ಲೆಯ 224 ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿ ನೇರ ಪ್ರಸಾರವಿದ್ದು, ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಬರಲಿದ್ದು, ತಾವು ಪಕ್ಷವನ್ನು ಸಂಘಟಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಉಸ್ತುವಾರಿ ಕುಮಾರ್‌ಸಿಂಗ್, ಜಿಲ್ಲಾ ಉಪಾಧ್ಯಕ್ಷ ಸೆಬಾಸ್ಟಿನ್ ಪ್ರಮೋದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಬೀವುಲ್ಲಾ ಖಾನ್, ನವೀನ್‌ಕುಮಾರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.