ಮಂಡ್ಯ ತಾಲೂಕಿನಲ್ಲೂ ಕುಡಿವ ನೀರಿಗೆ ಸಮಸ್ಯೆ
ಹಲವಾರು ಗ್ರಾಮಗಳಲ್ಲಿ ನೀರಿನ ಬವಣೆ • ನಿರ್ವಹಣೆ ಇಲ್ಲದ ಶುದ್ಧ ಕುಡಿಯುವ ನೀರಿನ ಘಟಕಗಳು
Team Udayavani, Jul 7, 2019, 12:36 PM IST
ಮಂಡ್ಯದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಶೈಲಜಾ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಮಂಡ್ಯ: ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನಿರ್ವಹಣೆ ಕೊರತೆ, ಹಣವಿದ್ದರೂ ಅಂಗನವಾಡಿ ಕಟ್ಟಡಗಳ ನಿರ್ಮಾಣವಾಗಿಲ್ಲ. ಉತ್ತರ ವಲಯದಲ್ಲಿ ಶಿಕ್ಷಕರ ಕೊರತೆ. ಬೆಳೆ ಬೆಳೆಯುವಲ್ಲಿ ರೇಷ್ಮೆ ಬೆಳೆಗಾರರಲ್ಲಿ ಅರಿವಿನ ಕೊರತೆ.
ಶನಿವಾರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶೈಲಜಾ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖವಾಗಿ ಚರ್ಚೆಗೆ ಬಂದ ವಿಷಯಗಳು.
ಮಂಡ್ಯ ತಾಲೂಕಿನ ತೂಬಿನಕೆರೆ, ನೊದೆಕೊಪ್ಪಲು, ಬಿದರಕಟ್ಟೆ, ಊರಮಾರಕಸಲಗೆರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಕೊಳವೆ ಬಾವಿ ಕೊರೆಸಲು ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಅಭಿಯಂತರ ಸತೀಶ್ ಹೇಳಿದರು.
2018-19ನೇ ಸಾಲಿನಲ್ಲಿ ಮಂಜೂರಾಗಿರುವ 38 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 8 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 1 ಘಟಕ ಆರಂಭವಾಗಬೇಕಿದೆ. ಹಲವು ಘಟಕಗಳು ಪ್ರಗತಿಯಲ್ಲಿದ್ದು, ಕೆಲ ಘಟಕಗಳ ಸ್ಥಾಪನೆಗೆ ಜಾಗದ ಸಮಸ್ಯೆ ಎದುರಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ, ಹುಚ್ಚೇಗೌಡನ ಕೊಪ್ಪಲು ಗ್ರಾಮದಲ್ಲಿ ಎರಡು ತಿಂಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಾಗಿಲ್ಲ. ಹೀಗಾದರೆ ಹೇಗೆ. ಕೂಡಲೇ ಅದನ್ನು ದುರಸ್ತಿಪಡಿಸಿ ನೀರಿಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ತಾಪಂ ಇಒ ನಾಗರಾಜು ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಾಪಿಸಿದ ಬಳಿಕ ಗಾಜಿನ ಮೇಲೆ ಅದನ್ನು ನಿರ್ವಹಣೆ ಮಾಡುವವರ ಹೆಸರು, ಫೋನ್ ನಂಬರ್ ಹಾಗೂ ನಿರ್ವಹಣೆಯ ದಿನಾಂ ಎಲ್ಲಿಂದ ಎಲ್ಲಿಯವರೆಗೆ ಎಂಬುದನ್ನು ಕಡ್ಡಾಯವಾಗಿ ನಮೂದಿಸಬೇಕು. ಘಟಕದ ಆಸುಪಾಸಿನಲ್ಲಿ ಎರಡೆರಡು ಗಿಡ ನೆಟ್ಟು ಬೆಳೆಸುವುದು, ಸೋರಿಕೆ ನೀರು ಪೋಲಾಗದಂತೆ ನೀರು ಕೊಯ್ಲು ತೊಟ್ಟಿಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಣವಿದ್ದರೂ ಕಟ್ಟಡ ನಿರ್ಮಿಸಿಲ್ಲ: ತಾಲೂಕಿನಲ್ಲಿ ಹತ್ತು ಅಂಗನವಾಡಿಗಳ ನಿರ್ಮಾಣಕ್ಕೆ 9 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಆದರೆ, ಕಟ್ಟಡ ನಿರ್ಮಾಣ ಮಾತ್ರ ಆರಂಭವಾಗಿಲ್ಲ. ಹೆಗ್ಗಡಹಳ್ಳಿ, ಚಂದಗಾಲು, ಹುಲಿವಾನ, ಚಿಕ್ಕಬಳ್ಳಿ, ಆನಸೋಸಲು, ಮಾಡ್ಲಾ, ಕಾರಸವಾಡಿ, ಯಲಿಯೂರು, ಯತ್ತಂಬಾಡಿ ಹಾಗೂ ಹಲಗೂರಿನಲ್ಲಿ ನಿರ್ಮಾಣವಾಗಬೇಕಿರುವ ಅಂಗನ ವಾಡಿ ಕಟ್ಟಡಗಳನ್ನು ಡಿಸೆಂಬರ್ ಒಳಗೆ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರೇಷ್ಮೆ ಬೆಳೆಗಾರರಲ್ಲಿ ಅರಿವಿನ ಕೊರತೆ: ತಾಲೂಕಿನಲ್ಲಿ ರೇಷ್ಮೆ ಬೆಳೆಗಾರರಿಗೆ ಅರಿವಿನ ಕೊರತೆ ಹೆಚ್ಚಿದೆ. ಅವರನ್ನು ಕೋಲಾರ ಜಿಲ್ಲೆಗೆ ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋಗಿ ಬಂದರೂ ಬೆಳೆ ಬೆಳೆಯುವ ಪದ್ಧತಿಯಲ್ಲಿ ಬದಲಾವಣೆ ತಂದುಕೊಂಡಿಲ್ಲ. ಹನಿ ಮತ್ತು ತುಂತುರು ನೀರಾವರಿಯಲ್ಲಿ ಸಾವಯವ ಗೊಬ್ಬರ ಬಳಸಿಕೊಂಡು ಬೆಳೆ ಬೆಳೆಯುವಂತೆ ತಿಳಿವಳಿಕೆ ಹೇಳಿದರೂ ಅದನ್ನು ಅನುಸರಿಸುತ್ತಿಲ್ಲ ಎಂದು ರೇಷ್ಮೆ ಅಧಿಕಾರಿ ಸಿದ್ದರಾಜು ಹೇಳಿದರು.
ತಾಪಂ ಇಒ ನಾಗರಾಜು ಮಾತನಾಡಿ, ಹೊಸದಾಗಿ ರೇಷ್ಮೆ ಕೃಷಿಯಲ್ಲಿ ತೊಡಗುವ ಯುವಕರಿಗೆ ನೀವು ಆಧುನಿಕ ವಿಧಾನವನ್ನು ಪರಿಚಯಿಸಿ ಪ್ರೋತ್ಸಾಹ ನೀಡಬೇಕು. ಹೊಸ ವಿಧಾನವನ್ನು ರೈತರು ಅಳವಡಿಸಿಕೊಳ್ಳುವುದಕ್ಕೆ ಸ್ವಲ್ಪ ನಿಧಾನವಾಗಬಹುದು. ಅಷ್ಟಕ್ಕೇ ನಾವು ನಿರಾಶರಾಗದೆ ಅವರನ್ನು ಸದಾಕಾಲ ಹುರಿದುಂಬಿಸುತ್ತಿರುವಂತೆ ತಿಳಿಸಿದರು.
ಕೊಟ್ಟಿಗೆ ಗೊಬ್ಬರ, ಹಸುಗಳ ಗಂಜಲ ಸಂಗ್ರಹಿಸಿ ರೇಷ್ಮೆ ಬೆಳೆಗಳಿಗೆ ಒದಗಿಸಿದಲ್ಲಿ ಬೆಳೆಯೂ ಉತ್ತಮವಾಗಿ ಬರುತ್ತದೆ. ರೋಗ-ಕೀಟಗಳ ಬಾಧೆಯೂ ಇರುವುದಿಲ್ಲ. ನೀರನ್ನು ಮಿತವಾಗಿ ಬಳಸಿ ಬೆಳೆ ಬೆಳೆಯುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಕೋಲಾರದ ರೈತರು ಕೊಟ್ಟಿಗೆಯಿಂದ ಗಂಜಲ ಸಂಗ್ರಹಿಸಿಕೊಂಡು ಹೋಗಿ ಬೆಳೆಗಳಿಗೆ ಹಾಕುತ್ತಿದ್ದಾರೆ. ಸಾವಯವ ಗೊಬ್ಬರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದರೂ ನಮ್ಮವರು ಅನುಸರಿಸುತ್ತಿಲ್ಲ. ಈಗ ರೇಷ್ಮೆ ಬೆಲೆ ಕೂಡ ಕಡಿಮೆ ಇರುವುದರಿಂದ ರೇಷ್ಮೆ ಬೆಳೆಯತ್ತ ಹೆಚ್ಚು ಜನರು ಒಲವು ತೋರುತ್ತಿಲ್ಲ. ಆದರೂ ನಾವು ರೈತರಿಗೆ ಪೂರಕವಾದ ತರಬೇತಿ ನೀಡುತ್ತಾ ಅವರನ್ನು ಪ್ರೋತ್ಸಾಹಿಸುತ್ತಿರುವುದಾಗಿ ಹೇಳಿದರು.
ಕೊಟ್ಟಿಗೆ ನಿರ್ಮಾಣಕ್ಕೆ ಪಟ್ಟಿ ರವಾನೆ: ಮಂಡ್ಯ ತಾಲೂಕಿನಲ್ಲಿ ನಾಲ್ಕು ತಿಂಗಳಿಗಾಗುವಷ್ಟು ಮೇವು ಸಂಗ್ರಹವಾಗಿದೆ. ಮೇವು ಬೀಜದ 1750 ಪೊಟ್ಟಣಗಳನ್ನು ರೈತರಿಗೆ ಬಿಡುಗಡೆ ಮಾಡಲಾಗಿದೆ. ಭತ್ತ ಕಟಾವಿಗೆ ಬಂದಿರುವುದರಿಂದ ಮೇವಿಗೆ ಅಭಾವ ಕಂಡು ಬರುತ್ತಿಲ್ಲ ಎಂದು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ತಿಳಿಸಿದರು.
ಜಾನುವಾರುಗಳ ಕೊಟ್ಟಿಗೆ ನಿರ್ಮಾಣಕ್ಕೆ ಗ್ರಾಪಂವಾರು ಫಲಾನುಭವಿಗಳ ಪಟ್ಟಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಜಿಪಂ ಸಿಇಒ ಸೂಚಿಸಿದ್ದರ ಮೇರೆಗೆ 8 ಪಂಚಾಯಿತಿಗಳಿಂದ 321 ಫಲಾನುಭವಿಗಳ ಪಟ್ಟಿ ಕಳುಹಿಸಲಾಗಿದೆ. ಬೇಲೂರು-27, ಕೊತ್ತತ್ತಿ-33, ತಗ್ಗಹಳ್ಳಿ-18, ತೂಬಿನಕೆರೆ-33, ಕೆರಗೋಡು-82, ಬಿ.ಹೊಸೂರು-56, ಸಾತನೂರು-58, ಹೆಚ್‌ಮಲ್ಲೀಗೆರೆ 12 ಮಂದಿಯನ್ನು ಗುರುತಿಸಿ ಪಟ್ಟಿ ರವಾನಿಸಲಾಗಿದೆ ಎಂದರು.
ಸಭೆಯಲ್ಲಿ ತಾಪಂ ಇಒ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಕೇಶವಮೂರ್ತಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.