ಕಾಲುವೆಯಂತಾದ ಮೈಸೂರು – ಬೆಂಗಳೂರು ಹೆದ್ದಾರಿ
ಕುಡಿವ ನೀರಿನ ಪೈಪ್ ಒಡೆದು ಪೋಲು ; ಮುಗಿಲೆತ್ತರಕ್ಕೆ ಚಿಮ್ಮಿದ ನೀರು
Team Udayavani, Aug 21, 2021, 4:53 PM IST
ಶ್ರೀರಂಗಪಟ್ಟಣ : ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಕಾಲುವೆಯಂತಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮ ಬಳಿ ನಡೆದಿದೆ.
ಬಾಬುರಾಯನಕೊಪ್ಪಲು ಗ್ರಾಮದ ಲೋಕ ಪಾವನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಬಳಿಯಲ್ಲಿನ ಮಂಡ್ಯಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಒಡೆದು ಸಾವಿರಾರು ಲೀಟರ್ ಕುಡಿಯುವ ಕಾವೇರಿ ನೀರು ಮೈಸೂರು- ಬೆಂಗಳೂರು ಹೆದ್ದಾರಿ ರಸ್ತೆಗೆ ಹರಿದಿದ್ದು, ಹೆದ್ದಾರಿ ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತು ಹೆದ್ದಾರಿ ರಸ್ತೆ ಕಾಲಯವೆಯಂತಾಗಿತ್ತು. ಇದೇ ನೀರಿನ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಬೈಕ್ ಮತ್ತು ಸಣ್ಣಪುಟ್ಟ ವಾಹನಗಳ ಸವಾರರು ಪರದಾಟ ನಡೆಸುತ್ತಿರುವ ದೃಶ್ಯ ಕಂಡು ಬಂತು.
ಇದನ್ನೂ ಓದಿ:ಕಾಂಗ್ರೆಸ್ ಮುತ್ತಿಗೆ ಕರೆ: ಸಿ.ಟಿ.ರವಿ ಮನೆಗೆ ಬಿಜೆಪಿ ಕಾರ್ಯಕರ್ತರು, ಪೊಲೀಸರ ಸರ್ಪಗಾವಲು!
ರಸ್ತೆಗೆ ಪೈಪ್ ಲೈನ್ ನೀರು ಹರಿಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಶೀಘ್ರ ಕ್ರಮಕೈಗೊಳ್ಳಲಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಪೈಪ್‌ಲೈನ್ ದುರಸ್ತಿ ಮಾಡಿ ಸೇತುವೆ ಮೇಲಿನ ನೀರನ್ನು ಹೊರ ಹಾಕಿ ವಾಹನ ಸಂಚಾರನ್ನು ಸುಗಮಗೊಳಿಸಬೇಕು ಎಂದು ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನಿಲ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.