ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
Team Udayavani, Apr 16, 2021, 3:49 PM IST
ಮಳವಳ್ಳಿ: ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಗ್ರಾಮೀಣಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನೀರಿದ್ದರೂಕುಡಿಯುವ ನೀರಿಗೆ ಜನರು ಪರದಾಟ ನಡೆಸುತ್ತಿದ್ದಾರೆ. ಇದುಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿಡಾಯಿಸುವ ಸಾಧ್ಯತೆ ಇದೆ.ತಾಲೂಕಿನ ಹಲಗೂರು ಹೋಬಳಿಯ ಅಂಡಹಳ್ಳಿ,ಬ್ಯಾಡರಹಳ್ಳಿ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನಅಭಾವ ಉಂಟಾಗಿದ್ದು, ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣಕಡಿಮೆಯಾಗಿರುವುದರಿಂದ ಸಮಸ್ಯೆ ಕಾಣಿಸಿಕೊಂಡಿದೆ.
ಇದರನಡುವೆ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಹಲವೆಡೆ ನೀರುಸರಬರಾಜು ಮಾಡಲು ತೊಂದರೆಯಾಗುತ್ತಿದೆ.ಕೆಲವು ಕಡೆ ನೀರು ಪೂರೈಕೆಯ ಪೈಪ್‌ಗ್ಳು ಒಡೆದು ನೀರುವ್ಯರ್ಥವಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳನಿರ್ಲಕ್ಷ್ಯದಿಂದ ಗ್ರಾಮೀಣ ಜನರು ಸಮಸ್ಯೆಎದುರಿಸುವಂತಾಗಿದೆ.
ಘಟಕಗಳಿಲ್ಲದೇ ಸಂಕಷ್ಟದಲ್ಲಿ: ಕಿರುಗಾವಲು ಹೋಬಳಿಯಹೂವಿನಕೊಪ್ಪಲು, ಕಲ್ಕುಣಿ, ಸುಜ್ಜಲೂರು, ನೇಣುನೂರುಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರುಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನೂ ಕೆಲವು ಕಡೆ ಶುದ್ಧಕುಡಿಯುವ ನೀರಿನ ಘಟಕಗಳಿಲ್ಲದೆ ಜನರು ಸಂಕಷ್ಟದಲ್ಲಿಇದ್ದಾರೆ.ತಾಲೂಕಿನ ಹೂವಿನಕೊಪ್ಪಲು ಗ್ರಾಮದಲ್ಲಿ ಶುದ್ಧ ಕುಡಿಯುವನೀರಿನ ಘಟಕ ಕೆಟ್ಟು ತಿಂಗಳುಗಳೇ ಕಳೆದರೂ ಸರಿಪಡಿಸಲುಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮದ ನಿವಾಸಿ ಪ್ರಸನ್ನಕುಮಾರ್ ಆರೋಪಿಸಿದರು.
ಪರದಾಟ:ತಾಲೂಕಿನ ಬಂಡೂರು ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಉದ್ಘಾಟನೆಯಾಗಿ ಮೂರುವರ್ಷವಾದರೂ ಜನರಿಗೆ ನೀರು ಸಿಗುತ್ತಿಲ್ಲ. ಪಂಚಾಯಿತಿಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿಗೆಪರದಾಟ ನಡೆಸುವಂತಾಗಿದೆ.ತಾಲೂಕಿನ ಕುಡಿಯುವ ನೀರಿನ ಸಮಸ್ಯೆಯನ್ನುಬಗೆಹರಿಸಲು ಈಗಾಗಲೇ ತಹಶೀಲ್ದಾರ್ ನೇತೃತ್ವದ ಟಾಸ್Rಫೋರ್ಸ್ ಸಮಿತಿ ರಚನೆ ಮಾಡಲಾಗಿದೆ.
ಈ ಸಂಬಂಧ ಹಲವುಸಭೆಗಳನ್ನು ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆಗಳದೂರುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ.ಸಮಿತಿಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಲೆಕ್ಕಿಗರುಸಮಿತಿಯಲ್ಲಿ ಇದ್ದಾರೆ.ಸದ್ಯಕ್ಕೆ ಸಮಸ್ಯೆ ಇಲ್ಲ: ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಗೆಎದುರಾಗುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಈಗಾಗಲೇಪಂಚಾಯತ್ ರಾಜ್ ಇಲಾಖೆಗೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನೀರಿನ ಕೊರತೆ ಉಂಟಾದವೇಳೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆಮುಂದಾಗಲಾವುದು. ಟಾಸ್ಕ್ಫೋರ್ಸ್ ಸಮಿತಿ ಉತ್ತಮವಾಗಿನಿರ್ವಹಿಸುತ್ತಿದ್ದು, ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಹೇಳುತ್ತಾರೆತಹಶೀಲ್ದಾರ್ ಎಂ.ವಿಜಯಣ್ಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.