10ರಿಂದ ಧ್ವನಿ ಬೆಳಕು ಕಾರ್ಯಕ್ರಮ: ಡೀಸಿ
Team Udayavani, Oct 7, 2019, 3:28 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಇತಿಹಾಸ ಬಿಂಬಿಸುವ ಧ್ವನಿ-ಬೆಳಕು ಕಾರ್ಯಕ್ರಮ ಅ.10ರಿಂದ ಪ್ರತಿನಿತ್ಯ ಸಂಜೆ 7ರಿಂದ 7.40ರ ವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹೇಳಿದರು.
ಪಟ್ಟಣದಲ್ಲಿ ಧ್ವನಿ-ಬೆಳಕು ಕಾರ್ಯಕ್ರಮ ಪುನರ್ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅ.10ರಿಂದ ಪ್ರತಿನಿತ್ಯ 7 ರಿಂದ 7.40ರ ವರೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೇಶದ ಇತಿಹಾಸ ದಲ್ಲೇ ಮೊದಲ ಧ್ವನಿ-ಬೆಳಕು ಕಾರ್ಯ ಕ್ರಮ ಇದಾಗಿದೆ. ಸ್ಥಳೀಯ, ರಾಜ್ಯ, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಸೆಳೆ ಯುವ ಉದ್ದೇಶದಿಂದ ಪ್ರತಿನಿತ್ಯ ಕಾರ್ಯ ಕ್ರಮ ಆಯೋಜಿಸಲಾಗುವುದು ಎಂದರು.
ಶ್ರೀರಂಗಪಟ್ಟಣದ ಗತವೈಭವ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜೊತೆಗೆ ಶ್ರೀರಂಗಪಟ್ಟಣ ಇತಿಹಾಸ ವೈಭವ ಮರುಕಳಿಸುವ ನವರಾತ್ರಿ ವೈಭವವನ್ನೂ ನಿರಂತರವಾಗಿ ನಡೆಸಲು ನಿರ್ಧರಿಸಲಾಗಿದೆ. ಪ್ರಥಮವಾಗಿ ಕನ್ನಡದಲ್ಲಿ ಕಾರ್ಯಕ್ರಮ ಪ್ರದರ್ಶನ ನಡೆಯಲಿದೆ. ಬಳಿಕ
ಆಂಗ್ಲ ಭಾಷೆಯಲ್ಲೂ ಧ್ವನಿ-ಬೆಳಕು ಕಾರ್ಯಕ್ರಮ ಪ್ರದರ್ಶನ ನಡೆಸುವ ಚಿಂತನೆ ಹೊಂದಿದ್ದೇವೆಂದರು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ, ಕಾರ್ಯಕ್ರಮದ ಆಯೋಜಕ ಕೃಷ್ಣ ಕುಮಾರ್, ನಿರ್ದೇಶಕ ವಾಸು ದೀಕ್ಷಿತ್, ನಟ ಅರ್ಜುನ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಎಂ.ಕೆ. ರಾಮಕೃಷ್ಣ, ಜಿಪಂ ಸಿಇಒ ಯಾಲಕ್ಕಿಗೌಡ , ಉಪವಿಭಾಗಾಧಿಕಾರಿ ಶೈಲಜಾ, ಪ್ರವಾಸೊದ್ಯಮ ಇಲಾಖೆ ಹರೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.