ಇ-ಸ್ಟ್ಯಾಂಪಿಂಗ್ ಕೇಂದ್ರ ಉದ್ಘಾಟನೆ
Team Udayavani, Dec 14, 2019, 4:18 PM IST
ಮಂಡ್ಯ: ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರವನ್ನು ಸಂಘದ ಅಧ್ಯಕ್ಷ ಎಂ.ಬಿ.ಬಸವರಾಜು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನ್ಯಾಯಾಲಯ ಸಂಕೀರ್ಣದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆ ಇಲ್ಲದ ಕಾರಣ ವಕೀಲರು ಮತ್ತು ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸಂಘದ ವತಿಯಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರ ಸ್ಥಾಪಿಸಿ ಎಲ್ಲರಿಗೂ ಅನುಕೂಲ ಕಲ್ಪಿಸಲಾಗಿದೆ ಎಂದರು.
ಇದು ವಕೀಲರಿಗೂ ಸಾರ್ವಜನಿಕರಿಗೂ ತುಂಬಾ ಅನುಕೂಲವಾಗುತ್ತದೆ. ಸಾರ್ವಜನಿಕರು ಮತ್ತು ವಕೀಲರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘ, ಹೊಂಬೇಗೌಡ ಮೆಮರಿಯಲ್ ರಿಕ್ರಿಯೇಷನ್ ಕ್ಲಬ್ ಸಹಕಾರದಿಂದ ಇ-ಸ್ಟಾಂಪಿಂಗ್ ಮಾರಾಟ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಸಂಘದ ಉಪಾ ಧ್ಯಕ್ಷ ಜೆ.ಎಸ್.ರಾಜೀವ, ಕಾರ್ಯನಿರ್ವಹಣಾಧಿಕಾರಿ ಮಂಗಳಗೌರಿ, ನಿರ್ದೇಶಕರಾದ ಬಿ.ವಿ.ತಿರುಮಲಸ್ವಾಮಿ, ಜಿ.ಗಿರೀಗೌಡ, ಕೆಂಪೇಗೌಡ, ಎಸ್. ಬೃಂದಾ, ಚಂದ್ರಕಲಾ, ಎಸ್.ಶಂಕರಪ್ಪ, ಜಿ.ಕೆ.ಶಿವಕುಮಾರ್, ಆರ್. ರೇಣುಕಾರಾಧ್ಯ, ಕೆ.ಬಿ.ಸೋಮಶೇಖರ್, ಕಾಂತರಾಜು, ಪಿ.ವಿ.ವಿನಯ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.