ಕೈಗಾರಿಕಾ ಕ್ರಾಂತಿಯಿಂದ ಪರಿಸರ ಮಾಲಿನ್ಯ
Team Udayavani, Jun 6, 2020, 4:59 AM IST
ಮಂಡ್ಯ: ಕೈಗಾರಿಕಾ ಕ್ರಾಂತಿ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳಿಂದ ಪರಿಸರದ ಮೇಲೆ ಮಾರಕ ಪರಿಣಾಮ ಉಂಟಾಗಿದೆ. ವಾಯುಮಾಲಿನ್ಯ, ಜಲಮಾಲಿನ್ಯ ಸೇರಿ ದಂತೆ ಹಲವಾರು ರೀತಿಯ ಮಾಲಿನ್ಯಗಳಿಂದ ವಿಶ್ವವೇ ತತ್ತರಿಸಿ ಹೋಗಿದೆ ಎಂದು ಡೀಸಿ ಡಾ.ಎಂ.ವಿ.ವೆಂಕಟೇಶ್ ವಿಷಾದಿಸಿದರು. ಡೀಸಿ ಕಚೇರಿ ಎದುರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕೈಗಾರಿಕೀ ಕರಣದಿಂದ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳಾಗುತ್ತಿವೆ.
ಇದನ್ನು ಮನಗಂಡ ವಿಶ್ವಸಂಸ್ಥೆ ಸುಸ್ಥಿರ ಅಭಿ ವೃದ್ಧಿಗೆ ಆದ್ಯತೆ ನೀಡಿ, ಪ್ರತಿ ವರ್ಷ ಜೂ.5ನ್ನು ವಿಶ್ವ ಪರಿಸರ ದಿನವಾಗಿ ಆಚರಿಸಲಾಗುತ್ತಿದೆ. ಮನುಷ್ಯ ಪ್ರಕೃತಿಯ ಸಂರಕ್ಷಣೆಗೆ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಎಲ್ಲರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಒಟ್ಟು 10 ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಸಾಕಾರಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪರಿಸರ ಉಳಿಸಿ: ಸಾಮಾಜಿಕ ಅರಣ್ಯ, ಕೃಷಿ, ತೋಟ ಗಾರಿಕೆ, ರೇಷ್ಮೆ ಇಲಾಖೆ ಮತ್ತು ಜಿಲ್ಲೆಯ ನಗರ ಸಭೆಯ ಸಹಯೋಗದೊಂದಿಗೆ 1 ಲಕ್ಷ ಸಸಿ ನೆಡಲು ಬಜೆಟ್ ಅನುಮೋದನೆ ಪಡೆಯಲಾಗಿದೆ. ಈ ಸಸಿ ನೆಡುವ ಕಾರ್ಯ ನಿರಂತರವಾಗಿರಬೇಕು. ಇದರೊಂದಿಗೆ ಅದನ್ನು ಪೋಷಣೆ ಮಾಡಿ, ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸಮಾಡ ಬೇಕು. ಈ ಕಾರ್ಯ ಒಬ್ಬರಿಗೆ ಮಾತ್ರವಲ್ಲ ಸಮಾಜಕ್ಕಾಗಿ, ವಿಶ್ವದ ಉಳಿವಿಗೆ ಪ್ರತಿಯೊಬ್ಬರೂ ಪರಿಸರ ರಕ್ಷಿಸಬೇಕು ಎಂದು ಸಲಹೆ ನೀಡಿದರು. ಜಿಪಂ ಸಿಇಒ ಕೆ.ಯಾಲಕ್ಕಿಗೌಡ, ಜಿಲ್ಲಾ ಆರೋಗ್ಯಾಧಿ ಕಾರಿ ಮಂಚೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.