ಚುನಾವಣೆ ಮುಗಿದರೂ ಚರ್ಚೆಗಳ ಕಾವು ನಿಂತಿಲ್ಲ

ಅಂಗಡಿ, ಹೋಟೆಲ್ಗಳಲ್ಲಿಯೂ ಸೋಲು-ಗೆಲುವಿನದ್ದೇ ಲೆಕ್ಕಾಚಾರ

Team Udayavani, Apr 23, 2019, 4:03 PM IST

mandya 2

ಶ್ರೀರಂಗಪಟ್ಟಣ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆ ಮುಗಿದು ಇನ್ನು ಫ‌ಲಿತಾಂಶಕ್ಕೆ ತಿಂಗಳು ಬಾಕಿ ಇದ್ದರೂ ಚುನಾವಣೆ ಚರ್ಚೆಗಳ ಕಾವು ಮಾತ್ರ ನಿಂತಿಲ್ಲ. ಮಳೆ ಬಂದು ನಿಂತರೂ ಮರದ ಹನಿ ನಿಂತಿಲ್ಲ ಎಂಬ ಗಾದೆಯಂತೆ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆ ಸಾಕ್ಷಿಯಾಗಿದೆ.

ಇತ್ತೀಚೆಗೆ ಮುಗಿದ ಲೋಕಸಭಾ ಚುನಾವಣೆ ಮತಪೆಟ್ಟಿಗೆಗಳು ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಿ ಅಡಗಿ ಕುಳಿತಿವೆ. ಮಂಡ್ಯ ಕ್ಷೇತ್ರ ದೇಶದ ಗಮನ ಸೆಳೆದ ಕ್ಷೇತ್ರವಾಗಿದೆ. ಸಿನಿ ಸ್ಟಾರ್‌ ಹಾಗೂ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಚುನಾವಣಾ ಕಣವಾಗಿ ಮಾರ್ಪಟ್ಟಿತ್ತು. ಜೊತೆಗೆ ಗ್ರಾಮಗಳಲ್ಲಿ ಇದುವರೆಗೂ ಯಾವ ಚುನಾವಣೆಯಲ್ಲೂ ನಡೆಯದಷ್ಟು ಅಬ್ಬರದ ಪ್ರಚಾರ, ರೋಡ್‌ ಶೋಗಳು ಈ ಚುನಾವಣೆಯಲ್ಲಿ ನಡೆಯಿತೆಂದೇ ಹೇಳಬಹುದು.

ಬೆಂಗಲಿಗರ ಲೆಕ್ಕಾಚಾರ: ಇದೀಗ ಅಭ್ಯರ್ಥಿಗಳ ಬೆಂಬಲಿಗರು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆದ ಮತಗಳ ಕುರಿತು ಲೆಕ್ಕಾಚಾರ, ಅಭ್ಯರ್ಥಿಗಳು ಸೋಲು-ಗೆಲುವಿನ ಬಿಸಿ ಬಿಸಿ ಚರ್ಚೆಗಳು ಸಾರ್ವಜನಿಕ ವಲಯಗಳಾದ ಹೋಟೆಲ್, ಟೀ ಅಂಗಡಿಗಳ ಮುಂದೆ ನಡೆಯುತ್ತಿವೆ. ಮೈತ್ರಿಕೂಟ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಬೆಂಬಲಿಗರು ಒಂದು ಕಡೆ ಕುಳಿತು ಚರ್ಚೆ ಮಾಡಿ ನಿಖೀಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತ ಪಡೆದು ಸಂಸದರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿಕೊಳ್ಳುವುದು ಒಂದು ಕಡೆಯಾದರೆ, ಮತ್ತೂಂದೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಬೆಂಬಲಿಗರು ಕುಳಿತು ಸುಮಲತಾ ಅವರೇ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆಂದು ಹೇಳಿಕೊಳ್ಳುವುದು ಸಾಮಾನ್ಯವಾಗಿದೆ.

ಸ್ವಾಭಿಮಾನಿಗಳ ಮತ: ಹಣಬಲ, ಜನಬಲ, ಅನುಕಂಪ, ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ಈಗೆ ಚರ್ಚೆಗಳು ನಡೆದು ಮೈತ್ರಿಕೂಟದ ಅಭ್ಯರ್ಥಿ ಪರ ಮುಖ್ಯಮಂತ್ರಿಗಳು, ಜೆಡಿಎಸ್‌ ಶಾಸಕರು, ಕಾರ್ಯಕರ್ತರ ಒಲವು ಹಾಗೂ ಪಕ್ಷೇತರ ಅಭ್ಯರ್ಥಿ ಪರ ರೆಬಲ್ಸ್ಟಾರ್‌ ಅಂಬರೀಶ್‌ ಅಭಿಮಾನಿಗಳು, ನಟರಾದ ದರ್ಶನ್‌ ಹಾಗೂ ಯಶ್‌ ಹಾಗೂ ಅಂಬರೀಶ್‌ ಅಭಿಮಾನಿಗಳು ಒಂದೆಡೆ ಸೇರಿ ಸ್ವಾಭಿಮಾನಿಗಳ ಮತಗಳ ಲೆಕ್ಕಾಚಾರದಲ್ಲಿ ಸೋಲು ಗೆಲವುಗಳ ಲೆಕ್ಕಾಚಾದಲ್ಲಿ ತೊಡಗಿದ್ದಾರೆ.

ಬೆಟ್ಟಿಂಗ್‌ ಭರಾಟೆ: ಕೆಲ ಭಾಗಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಬೆಟ್ಟಿಂಗ್‌ ಕಟ್ಟುತ್ತಿರುವ ಪ್ರಕರಣಗಳು ಗುಟ್ಟಾಗಿ ನಡೆಯುತ್ತಿವೆ. ಚುನಾವಣಾ ನೀತಿ ಸಂಹಿತೆ ಅಡಿ ಬೆಟ್ಟಿಂಗ್‌ಗೆ ಅಧಿಕಾರಿಗಳು ಕಡಿವಾಣ ಹಾಕಿದ್ದು, ಬೆಟ್ಟಿಂಗ್‌ ಚರ್ಚೆಗಳು ಅಷ್ಟಾಗಿ ಹೊರ ಬರುತ್ತಿಲ್ಲ. ಚುನಾವಣಾಧಿಕಾರಿಗಳು ಈಗಾಗಲೇ ಬೆಟ್ಟಿಂಗ್‌ ಬಗ್ಗೆ ಶಿಸ್ತು ಕ್ರಮಕ್ಕೆ ಮುಂದಾಗಿರು ವುದರಿಂದ ನಿಗೂಢವಾಗಿವೆ. ಒಟ್ಟಾರೆ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ 2,11,641ಮತದಾರರಲ್ಲಿ, ಪುರುಷರು 1,04,723, ಮಳೆಯರು 1,06,882 ಇತರೆ 36 ಮತದಾರ ರಿದ್ದು, ಅದರಲ್ಲಿ 1,73,346 ಮತಗಳು ಚಲಾವಣೆಯಾಗಿವೆ. 86,857 ಪುರುಷರು, 86474 ಮಹಿಳೆಯರು ಸೇರಿ ಇತರ 15 ಮಂದಿ ಮತ ಚಲಾಯಿಸಿದ್ದಾರೆ. ಮತದಾರರ ಒಲವು ಯಾರಕಡೆ ಇದೆಯೋ ಮೇ 23ರ ಫ‌ಲಿತಾಂಶದವರೆಗೂ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

crime

Brahmavara: ಯಡ್ತಾಡಿ; ಬೈಕ್‌ ಅಪಘಾತ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

byndoor

Udupi: ಬೈಕಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ

dw

Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.