State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ
ತಮಿಳುನಾಡು ಅಕ್ರಮ ನೀರಾವರಿ ಪ್ರದೇಶ ವಿಸ್ತರಣೆ
Team Udayavani, Oct 2, 2023, 9:14 PM IST
ಮಂಡ್ಯ: ತಮಿಳುನಾಡು ಅಕ್ರಮವಾಗಿ ನೀರಾವರಿ ಪ್ರದೇಶ ವಿಸ್ತರಣೆ ಮಾಡಿಕೊಂಡು ನೀರು ಬಳಕೆ ಮಾಡುತ್ತಿದೆ. ಯಾವ ರಾಜ್ಯ ಎಷ್ಟು ನೀರು ಬಳಕೆ ಮಾಡಿದೆ ಎಂಬ ಮಾಹಿತಿ ಪ್ರತಿನಿತ್ಯ ಸಿಗಲಿದ್ದು, ಇಂತಹ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಪ್ರಾ ಧಿಕಾರದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಎಲ್ಲರೊಂದಿಗೆ ಚರ್ಚಿಸಿ ಸರ್ವ ಸಮ್ಮತವಾದ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಬೇಕೆಂದು ಹೇಳಿದರು.
ಕಾವೇರಿ ವಿಚಾರವಾಗಿ ನ್ಯಾಯ ಪಡೆಯಲು ಕರ್ನಾಟಕ ಸಂಕಷ್ಟ ಸೂತ್ರ ಸಿದ್ಧಪಡಿಸಿ ರಾಜ್ಯದ ನಿಲುವು ಸ್ಪಷ್ಟಪಡಿಸಿದರೆ, ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾ ಧಿಕಾರ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಿ ನ್ಯಾಯ ಪಡೆಯಬೇಕಾಗಿದೆ. ಹಾಗೊಮ್ಮೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಮಾಡಿದರೆ ಕೇಂದ್ರದ ಮೇಲೆ ನಾವೆಲ್ಲರೂ ಸೇರಿ ಒತ್ತಡ ಹಾಕಿ ಸಂಕಷ್ಟ ಸೂತ್ರ ರೂಪಿಸಲು ಒತ್ತಡ ಹಾಕುತ್ತೇವೆ ಎಂದರು.
ಪ್ರಧಾನಿಯವರಿಗೆ ಈ ಹಿಂದೆ ಎಲ್ಲ ರೀತಿಯ ಅಧಿ ಕಾರ ಇತ್ತು. ಆದರೆ ಪ್ರಾಧಿಕಾರ ರಚನೆಯಾದ ನಂತರ ಅವರು ನೀರು ಬಿಡಿ, ಬಿಡಬೇಡಿ ಎಂದು ಆದೇಶ ಮಾಡುವ ಅಧಿ ಕಾರ ಇಲ್ಲ. ಹಾಗಾಗಿ ಪ್ರಾ ಧಿಕಾರ ಮತ್ತು ನ್ಯಾಯಾಲಯದಲ್ಲಿ ಕರ್ನಾಟಕದ ವಾಸ್ತವಾಂಶ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಇವತ್ತಿನ ಪ್ರಸ್ತಾವನೆ ಅಲ್ಲ. ಅದು ದಶಕಗಳಿಂದಲೂ ಒತ್ತಡ ಇದ್ದು, ತಮಿಳುನಾಡು ವಿರೋ ಧಿಸುತ್ತಾ ಬಂದಿದೆ. ಆದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಪಿಆರ್‌ಗೆ ಒಪ್ಪಿಗೆ ಸೂಚಿಸಿದೆ. ಯೋಜನೆ ಜಾರಿ ಸುಲಭವಲ್ಲ. ಆದರೂ ರಾಜ್ಯದ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಿ ಮೇಕೆದಾಟು ಯೋಜನೆಗೆ ಬೆಂಬಲ ನೀಡುತ್ತೇವೆ ಎಂದರು.
ಮಾಜಿ ಸಚಿವ ಆರ್.ಅಶೋಕ್, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಚೇತನ್‌ಗೌಡ, ಅಶೋಕ್‌ಜಯರಾಂ ಸೇರಿದಂತೆ ಮತ್ತಿತರರಿದ್ದರು.
ನೀರು ಬಿಟ್ಟು ಲೀಕೇಜ್ ನೀರು ಅಂತಾರೆ: ಅಶೋಕ್
ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ಲೀಕೇಜ್ ನೀರು ಹೋಗುತ್ತಿದೆ ಎಂದು ಹೇಳುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಿಡಿಕಾರಿದರು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ಉಳಿವಿಗಾಗಿ ರೈತರ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಕಾವೇರಿ ನೀರು ಬಳಸುವುದು ಬೆಂಗಳೂರಿಗರೇ ಹೆಚ್ಚು. ಒಂದು ದಿನ ನೀರು ಹೆಚ್ಚು ಕಮ್ಮಿ ಆದರೆ 50 ಕರೆಗಳು ಬರುತ್ತವೆ. ಮಂಡ್ಯ ಜನರು ವಿರೋಧ ಮಾಡದೇ ಇದ್ದಿದ್ದರೆ ಇನ್ನೂ ಅದೆಷ್ಟು ನೀರು ಹೋಗುತ್ತಿತ್ತೋ, ರೈತರ ಹೋರಾಟಕ್ಕೆ ಹೆದರಿ ಕದ್ದು ಮುಚ್ಚಿ ನೀರು ಬಿಡುತ್ತಿದ್ದಾರೆ ಎಂದು ದೂರಿದರು. ಬೆಂಗಳೂರಿನವರು ಕಾವೇರಿ ಹೋರಾಟಕ್ಕೆ ಬರಬೇಕು. ಕುಡಿಯುವ ನೀರು ಇಲ್ಲ ಎಂದರೆ ಸಾಫ್ಟ್‌ವೇರ್, ಹಾರ್ಡ್‌ವೇರ್ ಕೆಲಸಕ್ಕೆ ಬರಲ್ಲ. ಜನವರಿ ನಂತರ ಇದೆ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೂ ತೊಂದರೆಯಾಗಲಿದೆ. ಕೆಆರ್‌ಎಸ್ ಇಲ್ಲದಿದ್ದರೆ ಬೆಂಗಳೂರು ಜನ ಬದುಕಲು ಸಾಧ್ಯವಿಲ್ಲ. ಮಂಡ್ಯ ರೈತರ ಹೋರಾಟಕ್ಕೆ ಬೆಂಗಳೂರಿಗರೂ ಸಾಥ್ ಕೊಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.