21ರಿಂದ ಆದಿಚುಂಚನಗಿರಿಯಲ್ಲಿ ಜಾತ್ರೆ ವೈಭವ

ಸಾಮೂಹಿಕ ವಿವಾಹ, ಸಿದ್ದೇಶ್ವರಸ್ವಾಮಿ ಉತ್ಸವ ಮತ್ತಿತರ ಧಾರ್ಮಿಕ ಕಾರ್ಯ ಆಯೋಜನೆ

Team Udayavani, Mar 17, 2021, 2:14 PM IST

21ರಿಂದ ಆದಿಚುಂಚನಗಿರಿಯಲ್ಲಿ ಜಾತ್ರೆ ವೈಭವ

ನಾಗಮಂಗಲ: ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.21 ರಿಂದ29ರವರೆಗೆ ನಡೆಯುವ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಕ್ಷೇತ್ರದಲ್ಲಿ ವಿವಿಧಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಮಾ.21ರ ಬೆಳಗ್ಗೆ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ನಾಂದಿಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವಮೂಲಕ ಜಾತ್ರೆಗೆ ಚಾಲನೆ ನೀಡುವರು. ಮಾ.22ರರಾತ್ರಿ 7 ಕ್ಕೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ ನಡೆಯಲಿದ್ದು, ಮಾ.23ರ ರಾತ್ರಿ 7ಕ್ಕೆ ಮಲ್ಲೇಶ್ವರಸ್ವಾಮಿ ಉತ್ಸವ ನಡೆಯಲಿದೆ.  ಮಾ.24ರಬೆಳಗ್ಗೆ 9.30ಕ್ಕೆ ಸಾಮೂಹಿಕ ವಿವಾಹ, ಸಂಜೆ 7ಕ್ಕೆ ಸಿದ್ದೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಮಾ.25ರ ಸಂಜೆ 7ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಜ್ವಾಲಾಪೀಠಾರೋಹಣ: ಮಾ.26ರ ಬೆಳಗ್ಗೆ 7.30ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚಾಲಂಕಾರ,ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಭರಣಅಲಂಕಾರ, ಅದೇ ದಿನ ಬೆಳಗ್ಗೆ 9.30ಕ್ಕೆ ಆದಿಚುಂಚನಗಿರಿಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆನಡೆಯಲಿದೆ. ಸಂಜೆ 7ಕ್ಕೆ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರಿಂದ ಜ್ವಾಲಾಪೀಠಾರೋಹಣ,ಸಿದ್ಧಸಿಂಹಾಸನ ಪೂಜೆ ನಡೆಯುತ್ತದೆ. ರಾತ್ರಿ 9 ಗಂಟೆಗೆಚಂದ್ರ ಮಂಡಲೋತ್ಸವ ಪೂಜೆ ಜರುಗಲಿದೆ.

ನಾಟಕ ಪ್ರದರ್ಶನ: ಮಾ.27ರ ಬೆಳಗ್ಗೆ ಕ್ಷೇತ್ರಾಧಿದೇವತೆಗಳಿಗೆ ಅಭಿಷೇಕ ಸೇರಿ ವಿವಿಧ ಪೂಜಾಮಹೋತ್ಸವ ನಡೆಯಲಿದ್ದು, ರಾತ್ರಿ 7ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಯ ತಿರುಗಣಿ ಉತ್ಸವ,ಪುಷ್ಕರಣಿಯಲ್ಲಿ ತೆಪ್ಪೋತ್ಸವದ ನಂತರ ನಾಟಕಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ.

ಮಾ.29ರ ಬೆಳಗ್ಗೆ 9ಗಂಟೆಗೆ ಕ್ಷೇತ್ರದ ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕಮತ್ತು ಸಭಾ ಕಾರ್ಯಕ್ರಮದ ಬಳಿಕಧರ್ಮಧ್ವಜಾವರೋಹಣದೊಂದಿಗೆ 9 ದಿನಗಳಜಾತ್ರೆಗೆ ತೆರೆಬೀಳಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.

28ಕ್ಕೆ ನಿರ್ಮಲಾನಂದನಾಥ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ :

ಮಾ.28ರ ಮುಂಜಾನೆ ಬ್ರಾಹ್ಮಿ ಮೂಹೂರ್ತದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಬಹಳ ವಿಜೃಂಭಣೆಯಿಂದ ಜರುಗಲಿದೆ. ಇದೇದಿನ ಸಂಜೆ 6ಕ್ಕೆ ಅಕ್ಕಪಕ್ಕ ಗ್ರಾಮಗಳಿಂದ ಆಗಮಿಸುವ ನೂರಾರು ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ಗಿರಿ ಪ್ರದಕ್ಷಿಣಿ ನಡೆಯಲಿದೆ. ಬಳಿಕ ಶ್ರೀ ಸೋಮೇಶ್ವರ ಸ್ವಾಮಿಯ ಉತ್ಸವ ಜರುಗಲಿದೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.