ಗ್ರಾಮ ಪಂಚಾಯ್ತಿ ಆವರಣ, ಬಸ್ ನಿಲ್ದಾಣವೇ ಬಾಣಂತಿಗೆ ಆಸರೆ!
Team Udayavani, Nov 14, 2022, 3:29 PM IST
ಮದ್ದೂರು: ಬಿಟ್ಟು ಹೋದ ಗಂಡ. ತನ್ನಿಬ್ಬರು ಮಕ್ಕಳು, 11 ದಿನದ ಹಸುಗೂಸುವಿನೊಂದಿಗೆ ಬಾಣಂತಿಯ ಸಂಕಷ್ಟದ ಜೀವನ. ಮಗಳ ಕರುಣಾಜನಕ ಸ್ಥಿತಿ ಸರಿದೂಗಿಸಲು ಬಟ್ಟೆ ವ್ಯಾಪಾರ ಬಿಟ್ಟು ಆಸರೆಯಾಗಿ ನಿಂತ ಅಪ್ಪ. ಇತ್ತ ಮನೆಯೂ ಇಲ್ಲ, ಪಡಿತರವೂ ಇಲ್ಲ. ಬೆಳಗ್ಗೆ ಬಸ್ ನಿಲ್ದಾಣ, ರಾತ್ರಿ ಗ್ರಾಪಂ ಆವರಣವೇ ಮನೆ!.
ಜತೆಯಲ್ಲೇ ಶಿಶು: ಹೌದು, ತಾಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾಪಂ ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ 5 ವರ್ಷದ ಹೆಣ್ಣು, 3 ವರ್ಷದ ಗಂಡು ಮಗು, ಹಾಗೂ 11 ದಿನಗಳ ಹಿಂದೆ ಜನಿಸಿದ ಶಿಶುವಿನೊಂದಿಗೆ ನೆಲೆಸಿದ್ದಾರೆ.
ಪರದಾಟ: ಮಹಿಳೆ ಅನ್ನಪೂರ್ಣ 2 ತಿಂಗಳ ಗರ್ಭಿಣಿ ಆಗಿದ್ದ ವೇಳೆ ಕಾರು ಚಾಲಕನಾಗಿದ್ದ ಪತಿ ಬಿಟ್ಟು ಹೋಗಿದ್ದನು. ಇನ್ನು ಬಟ್ಟೆ ವ್ಯಾಪಾರಕ್ಕೆಂದು ಬಂದಿದ್ದ ತಂದೆ ಸುರೇಶ್‌ಗೆ ನಷ್ಟ ಉಂಟಾದ್ದರಿಂದ ಮಗಳು, ಮೊಮ್ಮಕ್ಕಳ ಪಾಲನೆಯಲ್ಲಿ ತೊಡಗಿದ್ದಾರೆ. ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದು ಅವರಿವರನ್ನು ಬೇಡುವ ಸ್ಥಿತಿಯಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕ್ರಮ ಕೈಗೊಳ್ಳಿ: ಈ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗುತ್ತಿಲ್ಲ. ಹೆಮ್ಮನಹಳ್ಳಿ ಗ್ರಾಮಸ್ಥರೇ ಆಹಾರ ನೀಡುತ್ತಿದ್ದಾರೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆ ಜಾರಿಗೊಳಿಸಿದ್ದರೂ ಸೌಲಭ್ಯ ವಂಚಿತರಾಗಿದ್ದಾರೆ. ಈ ಕೂಡಲೇ ಸ್ಥಳೀಯ ಗ್ರಾಪಂ, ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕಾಗಿದೆ.
ಸಂಘ-ಸಂಸ್ಥೆಗಳು ನೆರವಿಗೆ ಬರಬೇಕಿದೆ: ಕಳೆದ 11 ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾಪಂ ಆವರಣ ಸೇರಿರುವ ಹಸಿ ಬಾಣಂತಿ, ಮಳೆ-ಚಳಿ, ಗಾಳಿ ಎನ್ನದೆ ಜೀವನ ನಡೆಸುತ್ತಿರುವುದು ನೋಡುಗರ ಮನ ಕಲಕುತ್ತಿದೆ. ಗ್ರಾಪಂ ಆವರಣದಲ್ಲಿ ಸೊಳ್ಳೆ ಕಾಟ, ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ 3 ಮಕ್ಕಳೊಂದಿಗೆ ಹಸಿ ಬಾಣಂತಿ ದಿನದೂಡುತ್ತಿದ್ದಾರೆ. ಕೂಡಲೇ ಸ್ಥಳೀಯ ಸಂಘ, ಸಂಸ್ಥೆಗಳು ಈಕೆಯ ನೆರವಿಗೆ ಬರಬೇಕಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
ಜಿಲ್ಲಾ ಹಾಗೂ ತಾಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಕಲ್ಪಿಸುವ ಮೂಲಕ ನಮ್ಮ ನೆರವಿಗೆ ಬರಬೇಕು. ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊಟ್ಟಿಗೆ ಜೀವನ ಸಾಗಿಸಲು ವಸತಿ ಸೌಕರ್ಯ ಕಲ್ಪಿಸಿದರೆ ಅನುಕೂಲವಾಗುತ್ತದೆ. -ಅನ್ನಪೂರ್ಣ, ನೊಂದ ಮಹಿಳೆ
ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮ ವಹಿಸಲಾಗುತ್ತದೆ. ಅಲ್ಲದೇ, ಸರ್ಕಾರದ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು. -ಜಿ.ಪ್ರದೀಪ್, ಸಿಡಿಪಿಒ, ಮದ್ದೂರು
-ಪುಟ್ಟಸ್ವಾಮಿ ಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.