ಪರಿಹಾರಕ್ಕಾಗಿ ರೈತ ಸಂಘದಿಂದ ಧರಣಿ
Team Udayavani, Aug 4, 2020, 8:26 AM IST
ಮದ್ದೂರು: ಚಿರತೆ ದಾಳಿ ತಪ್ಪಿಸಿ. ದಾಳಿಯಿಂದ ಹಾನಿಯಾದ ಜಾನುವಾರು ಮಾಲೀಕರಿಗೆ ಪರಿಹಾರ, ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳಿಗೆ ಪರಿಹಾರದ ಹಣವನ್ನು ಸಕಾಲದಲ್ಲಿ ವಿತರಿಸುವಂತೆ ಒತ್ತಾಯಿಸಿ, ರೈತ ಸಂಘ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ತಾಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಮಾವಣೆಗೊಂಡ ಸಂಘಟನೆ ಕಾರ್ಯ ಕರ್ತರು, ಮದ್ದೂರು ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ನಾಡ ಕಚೇರಿಗೆ ಮುತ್ತಿಗೆ ಹಾಕಿದರು. ಕೊಪ್ಪದಲ್ಲಿ ಚಿರತೆ ಹಾವಳಿ: ಕೊಪ್ಪ ಭಾಗದಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು, ಪ್ರತಿನಿತ್ಯ ಜಾನುವಾರು, ಮೇಕೆ, ಕುರಿ ಇನ್ನಿತರೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿರುವ ಘಟನೆಗಳು ನಡೆಯುತ್ತಿವೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದು, ಜಾನುವಾರುಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಗಳ ಬದುಕು ದುಸ್ಥರವಾಗಿದೆ ಎಂದು ದೂರಿದರು.
ಈಗಾಗಲೇ ಚಿರತೆ ಹಾವಳಿಗೆಅನೇಕ ಜಾನುವಾರು ಗಳು ಮೃತಪಟ್ಟಿದ್ದು, ಸಂಬಂಧಿಸಿದ ಅಧಿಕಾರಿ ಗಳು ಪರಿಹಾರ ನೀಡಲು ಮುಂದಾಗದಿದ್ದಲ್ಲಿ ತಾಲೂಕು ಕಚೇರಿ ಬಳಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಹುರಗಲವಾಡಿ ರಾಮಯ್ಯ, ಉಮೇಶ್, ಎಂ. ಶಿವಕುಮಾರ್, ಎಚ್.ಬಿ.ರವಿ, ರಾಮೇಗೌಡ, ಪುಟ್ಟಸ್ವಾಮೀಗೌಡ, ಕೆಂಚಯ್ಯ, ಮುಕುಂದ, ನಾಗರಾಜು, ಕೃಷ್ಣ, ಶಂಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.