ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ


Team Udayavani, Jun 27, 2020, 4:44 AM IST

ividha-ederike

ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡೀಸಿ ಕಚೇರಿ ಬಳಿ ಜಮಾಯಿಸಿ ದ ಪ್ರತಿಭಟನಾಕಾರರು, ಕೆಲ ಕಾಲ ಧರಣಿ ನಡೆಸಿ ಡೀಸಿಗೆ ಮನವಿ ಸಲ್ಲಿಸಿದರು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಬಾರದು.

ಎಪಿಎಂಸಿ ಕಾಯ್ದೆ ವಾಪಸ್‌ ಪಡೆಯಬೇಕು. ವಿದ್ಯುತ್‌ ಖಾಸ ಗೀಕರಣ ಮಾಡಬಾರದು. ರೈತ ವಿರೋಧಿ ಬಿತ್ತನೆ ಬೀಜ ಕಾಯ್ದೆಯನ್ನು  ಜಾರಿಗೆ ತರ ಬಾರದು ಎಂದು ಆಗ್ರಹಿಸಿದರು. ಸರ್ಕಾರ ಕೋವಿಡ್‌ 19 ಸಂಕಷ್ಟದಲ್ಲಿ ಜನವಿ ರೋಧಿ ಕಾಯ್ದೆಗಳನ್ನು ಜಾರಿಗೆ ತರು ತ್ತಿದ್ದು, ಇದರಿಂದ ರೈತರು, ದಲಿತರು, ಕಾರ್ಮಿಕರು ಸೇರಿದಂತೆ ಇನ್ನಿತರೆ ಶ್ರಮಿಕರ ಜೀವನದ ಹಕ್ಕು  ನಾಶವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಚಿತ ಚಿಕಿತ್ಸೆ ನೀಡಿ: ಕೋವಿಡ್‌ ಒಂದು ದೊಡ್ಡ ಆರೋಗ್ಯ ತುರ್ತು ಪರಿಸ್ಥಿತಿಯಾ ಗಿದ್ದು, ಈ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವುದು ಸರ್ಕಾರದ ಹೊಣೆಗಾರಿಕೆ ಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ, ಸಿಎಂ ಪರಿಹಾರ ನಿಧಿಗೆ  ಕೋಟ್ಯಂತರ ರೂ. ಹಣ ಸಂದಾಯವಾಗಿದೆ. ಸರ್ಕಾರ ರೋಗ ಸೋಂಕಿತರ ಚಿಕಿತ್ಸೆಗಾಗಿ ಹಣ ಭರಿಸಬೇಕು ಎಂದು ತಿಳಿಸಿರುವುದು ಜನವಿರೋಧಿಯಾಗಿದೆ.

ಇದನ್ನು ವಾಪಸ್‌ ಪಡೆದು ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾಸಕ  ಸಿ.ಎಸ್‌.ಪುಟ್ಟರಾಜು, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ಬೊಮ್ಮೇಗೌಡ, ಲಿಂಗಪ್ಪಾಜಿ, ಎ.ಎಲ್‌. ಕೆಂಪೂಗೌಡ, ಶೆಟ್ಟಹಳ್ಳಿ  ರವಿಕುಮಾರ್‌, ಕೆ.ಟಿ.ಗೋವಿಂದೇಗೌಡ, ಎಸ್‌.ಎನ್‌. ಸಿದ್ದೇಗೌಡ, ಇಂಡುವಾಳು ಸಿದ್ದೇಗೌಡ, ಕನ್ನಲಿ ಚಂದ್ರು, ಪಿ.ಕೆ.ನಾಗಣ್ಣ ಇದ್ದರು.

ಸದನದ ಒಳಗೆ ಹೋರಾಟ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿ ನೀತಿಯಾಗಿದ್ದು, ಕಾಯ್ದೆ ವಾಪಸ್ಸು ಪಡೆಯು ವರೆವಿಗೂ ಸದನದ ಹೊರಗೆ ಮತ್ತು ಒಳಗೆ ಹೋರಾಟ ರೂಪಿಸಲಾಗುವುದು ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಎಚ್ಚರಿಕೆ ನೀಡಿದರು. ಧರಣಿಯಲ್ಲಿ ಪಾಲ್ಗೊಂಡು ಮನವಿ ಸ್ವೀಕರಿಸಿ ಮಾತನಾಡಿ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಗೆ ಸರ್ಕಾರ ಮುಂದಾಗಿರುವುದು ಸರಿಯಲ್ಲ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ  ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕರಾದ ಎಚ್‌ .ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುವ ಮೂಲಕ ಇದನ್ನು ವಾಪಸ್ಸು ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.  ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ನಮ್ಮ ವರಿಷ್ಠರು ತಿಳಿಸಿದ್ದಾರೆ. ನಾವೂ ಸಹ ನಿಮ್ಮ ಜೊತೆಹೋರಾಟ ಮಾಡುತ್ತೇವೆ. ಇಂತಹ ಕೆಟ್ಟ ಸ್ಥಿತಿಗೆ ಆಳುವ ಸರ್ಕಾರಗಳು ದೂಡಿರಲಿಲ್ಲ.  ಕಾಯ್ದೆಯನ್ನು ವಾಪಸ್ಸು ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.