ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ
Team Udayavani, Sep 19, 2020, 5:04 PM IST
ಮದ್ದೂರು: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಒತ್ತಾಯಿಸಿ, ರೈತ ಸಂಘಟನೆ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಶಾಸಕರ ಆಪ್ತಕಾರ್ಯದರ್ಶಿ ಯೋಗಾನಂದ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಶಾಸಕರ ನಿವಾಸದ ಬಳಿ ಜಮಾಯಿಸಿದ ಎರಡು ಸಂಘಟನೆ ಕಾರ್ಯಕರ್ತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರೈತ ವಿರೋಧಿಮೂರು ಕಾಯ್ದೆಗಳನ್ನು ಸರಕಾರ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.
ದೇಶದ ಜನತೆ ಕೋವಿಡ್ ಸಂಕಷ್ಟದಲ್ಲಿ ನರಕಯಾತನೆ ಅನುಭವಿಸುತ್ತಿದ್ದರೂ, ರಾಜ್ಯ ಸರ್ಕಾರ ರೈತ ಸಂಕುಲವನ್ನೇ ನಾಶ ಮಾಡಲು ಮುಂದಾಗಿದೆ. ಸೆ.21ರಿಂದ ಆರಂಭವಾಗುವ ವಿಧಾನ ಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಮುಂದಾಗುತ್ತಿರುವುದಕ್ಕೆ ಸ್ಥಳೀಯ ಶಾಸಕ ಡಿ.ಸಿ. ತಮ್ಮಣ್ಣ ಸೇರಿದಂತೆ ಎಲ್ಲಾ ಕ್ಷೇತ್ರಗಳ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿಕರ್ನಾಟಕಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್, ರೈತ ಸಂಘಟನೆ ತಾಲೂಕು ಅಧ್ಯಕ್ಷ ಸೀತಾರಾಂ, ಪದಾಧಿಕಾರಿಗಳಾದ ವರದರಾಜು, ಕೀಳಘಟ್ಟ ನಂಜುಂಡಯ್ಯ, ನಿಂಗಪ್ಪಾಜಿ, ಪುಟ್ಟ ಸ್ವಾಮಿ, ಜಿ.ಎಚ್.ವೀರಪ್ಪ, ಗೊಲ್ಲರ ದೊಡ್ಡಿ ಅಶೋಕ್, ಶಂಕರಯ್ಯ, ನಾಗ ರಾಜು, ಹನುಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.