ಉತ್ತರ ಪ್ರದೇಶದಲ್ಲಿ ರೈತರ ಸಾವು: ಘಟನೆ ಖಂಡಿಸಿ ಪಾಂಡವಪುರದಲ್ಲಿ ರೈತ ಸಂಘದಿಂದ ಪ್ರತಿಭಟನೆ
Team Udayavani, Oct 4, 2021, 2:51 PM IST
ಪಾಂಡವಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಉತ್ತರಪ್ರದೇಶದ ಲಖಿಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಬೆಂಗಾವಲು ಪಡೆಯ ಕಾರುಗಳು ಏಕಾಏಕಿ ನುಗ್ಗಿ ನಾಲ್ವರು ರೈತರ ಮೃತ್ಯುವಿಗೆ ಕಾರಣರಾಗಿರುವುದನ್ನು ಖಂಡಿಸಿ ರೈತಸಂಘ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಐದು ದೀಪದ ವೃತ್ತದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಸಾವಿಗೆ ಕಾರಣರಾದ ಅಜಯ್ ಮಿಶ್ರಾ ರವರ ಮೇಲೆ ಕೊಲೆ ಮೊಕದ್ದಮೆಯನ್ನು ದಾಖಲಿಸಿ ಅವರನ್ನು ಬಂಧಿಸಬೇಕು. ಜತೆಗೆ ಅಜಯ್ ಮಿಶ್ರಾ ಮತ್ತು ಉತ್ತರಪ್ರದೇಶದ ಗೃಹ ಮಂತ್ರಿಗಳ ರಾಜಿನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು.
ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಾಡೆ ಹರೀಶ್, ಪ್ರಧಾನ ಕಾರ್ಯದರ್ಶಿ ಕೆನ್ನಾಳು ವಿಜಯಕುಮಾರ್, ಜಿ.ಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಮುಖಂಡರಾದ ಡಿ.ಕೆ.ಸ್ಚಾಮಿಗೌಡ, ಕ್ಯಾತನಹಳ್ಳಿ ವಿಶ್ವನಾಥ್, ಕೆ.ಕೆ.ಗೌಡೇಗೌಡ, ಯುವ ಮುಖಂಡರಾದ ಎಣ್ಣೆಹೊಳೆಕೊಪ್ಪಲು ಮಂಜುನಾಥ್, ವೈ.ಜಿ.ರಘು, ದಸಂಸ ಮುಖಂಡ ಡಿ.ಕೆ.ಅಂಕಯ್ಯ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.