ಸಮರ್ಪಕ ವಿದ್ಯುತ್‌ಗೆ ರೈತರ ಧರಣಿ
ವಿವಿಧ ಗ್ರಾಮಗಳಿಗೆ ವಿದ್ಯುತ್ ಕಡಿತ: ಸೆಸ್ಕ್ ಕಚೇರಿಗೆ ಮುತ್ತಿಗೆ
Team Udayavani, Jul 21, 2019, 2:50 PM IST
ಶ್ರೀರಂಗಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತ ಸಂಘದ ಮುಖಂಡರು, ಕಾರ್ಯಕರ್ತರು ಪಟ್ಟಣದ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣ: ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕ ವಿದ್ಯುತ್‌ಗೆ ಒತ್ತಾಯಿಸಿ ರೈತ ಸಂಘದ ಮುಖಂಡರು ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಹಾಗೂ ಸೆಸ್ಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿದಿನ ವಿದ್ಯುತ್ ಕಣ್ಣಾಮುಚ್ಚಾಲೆಯಾಡುತ್ತಿದ್ದು ತಾಲೂಕಿನ ವಿವಿಧ ವಿದ್ಯುತ್ ಘಟಕಗಳ ದುರಸ್ತಿ ಕಾರ್ಯ ಎಂದು ನೆಪ ಹೇಳಿ ವಿದ್ಯುತ್ ಕಡಿತ ಮಾಡುವುದು ಸಾಮಾನ್ಯವಾಗಿದೆ. ದುರಸ್ತಿ ಕಾರ್ಯ ಇಲ್ಲದಿದ್ದರೂ ಅರ್ಧ ಗಂಟೆಗೊಮ್ಮ ಪ್ರತಿದಿನ ವಿದ್ಯುತ್ ಕಡಿತ ಮಾಡುವುದರ ಕ್ರಮವೇನು ಎಂದು ಇಲಾಖೆಯ ಎಇಇ ನಂದೀಶ್ ಅವರಿಗೆ ತರಾಟೆ ತೆಗೆದುಕೊಂಡರು.
ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿ ರಾತ್ರಿಯಲ್ಲಿ 3 ಗಂಟೆ ಹಾಗೂ ಹಗಲುನಲ್ಲಿ 4 ಗಂಟೆ ವಿದ್ಯುತ್ ಸರಬರಾಜು ಮಾಡಿ, ಅದರಲ್ಲಿಯೂ ಕಡಿತಗೊಳಿಸಲಾಗುತ್ತಿದೆ. ಟೀಸಿಗಳು ಆಕಸ್ಮಿಕವಾಗಿ ವಿದ್ಯುತ್ ಅವಗಡದಿಂದ ಸುಟ್ಟು ಹೋದರೂ ಆನ್‌ಲೈನ್ ಮೂಲಕ ಮಾಹಿತಿ ನೀಡಿದರೆ ಎರಡು ದಿನದಲ್ಲಿ ಮತ್ತೆ ಅಳವಡಿಸಲಾಗುತ್ತದೆ ಎಂದು ಹೇಳುವ ಸರ್ಕಾರ ತಿಂಗಳಾದರೂ ಟೀಸಿ ಕೆಟ್ಟಿದ್ದರೆ ಅದರ ದುರಸ್ತಿ ಮಾಡಿಲ್ಲ. ಕೂಡಲೇ ವಿದ್ಯುತ್ ಕಡಿತ ಮಾಡುವುದನ್ನು ಸ್ಥಗಿತಗೊಳಿಸಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಕಾರ್ಯಾದ್ಯಕ್ಷ ಸ್ವಾಮೀಗೌಡ, ಪಿಎಸ್‌ಎಸ್‌ಕೆ ಮಾಜಿ ನಿರ್ದೇಶಕ ಪಾಂಡು, ಬಾಲಕೃಷ್ಣ, ಬಿ.ಎಸ್.ರಮೇಶ್, ಕೃಷ್ಣಪ್ಪ, ದೊಡ್ಡಪಾಳ್ಯ ಜಯರಾಂ, ಚಂದ್ರು ಜವರೇಗೌಡ, ಕೆಂಪೇಗೌಡ, ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.