ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ
Team Udayavani, Jan 26, 2019, 9:22 AM IST
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲಾಗುವುದು ಎಂದು ಕೃಷ್ಣರಾಜ ಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಹೆಚ್.ಸಿ.ರಮೇಂದ್ರ ತಿಳಿಸಿದ್ದಾರೆ.
ನಾಲೆಗಳಿಗೆ ಮೊದಲನೇ ಕಟ್ಟು ಪದ್ಧತಿಯಲ್ಲಿ ಜ.11ರಿಂದ ಜ.25ರವರೆಗೆ (15 ದಿನಗಳು), ಎರಡನೇ ಕಟ್ಟು ಪದ್ಧತಿಯಲ್ಲಿ ಫೆ.9ರಿಂದ ಫೆ.23ರವರೆಗೆ ( 15 ದಿನಗಳು) ಹಾಗೂ ಮೂರನೇ ಕಟ್ಟು ಪದ್ಧತಿಯಲ್ಲಿ ಮಾ.11ರಿಂದ ಮಾ.25ರವರೆಗೆ (15 ದಿನಗಳು) ನೀರನ್ನು ನಾಲೆಗಳಿಗೆ ಹರಿಸಲಾಗುವುದು ಎಂದು ಹೇಳಿದ್ದಾರೆ.
ಹಿಂಗಾರು ಹಂಗಾಮಿಗೆ ನ್ಯಾಯಾಧೀಕರಣ ತೀರ್ಪಿನಲ್ಲಿರುವ ಅಚ್ಚುಕಟ್ಟು ಪ್ರದೇಶದಲ್ಲಿ ಮಾತ್ರ ನಿಗದಿಪಡಿಸಿದ ವಿಸ್ತೀರ್ಣಕ್ಕೆ ಅನುಗುಣವಾಗಿ ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನಿಸಲಾಗಿದೆ. ಅದರಂತೆ ಕೃಷ್ಣರಾಜಸಾಗರ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಆಧರಿಸಿ ಹಾಲಿ ನಿಂತಿರುವ ಕಬ್ಬಿನ ಬೆಳೆಗಳಿಗೆ ಮತ್ತು ಮಳೆ ಆಧಾರಿತ ಬೆಳೆಗಳಿಗೆ ಅಚ್ಚುಕಟ್ಟಿನ ನಾಲೆಗಳಾದ ವಿಶ್ವೇಶ್ವರಯ್ಯ ಮುಖ್ಯ ನಾಲೆ ಮತ್ತು ಅದರ ಉಪ ನಾಲೆಗಳು (ಸಂಪರ್ಕ ನಾಲೆ ಹೊರತುಪಡಿಸಿ), ಎಡದಂಡೆ ಕೆಳಮಟ್ಟದ ನಾಲೆ, ಕಾವೇರಿ ಶಾಖಾ ನಾಲೆ ಹಳೆ ಮದ್ದೂರು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ, ಕೌಡ್ಲೆ ಉಪ ನಾಲೆ (9ನೇ ವಿತರಣಾ ನಾಲೆವರೆಗೆ), ಹೊಸ ಮದ್ದೂರು ಶಾಖೆ ನಾಲೆ (31ನೇ ವಿತರಣಾ ನಾಲೆವರೆಗೆ), ಲೋಕಸರ ಶಾಖಾ ನಾಲೆ, ಹೆಬ್ಬಕವಾಡಿ ಹಾಗೂ ತುರುಗನೂರು ಶಾಖಾ (5ನೇ ವಿತರಣಾ ನಾಲೆವರೆಗೆ) ನಾಲೆಗಳಲ್ಲಿ ಕಟ್ಟು ನೀರಿನ ಪದ್ಧತಿ ಅಳವಡಿಸಿ ನೀರನ್ನು ಹರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರೈತರು ನಾಲೆಗಳ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಿಗದಿಪಡಿಸಲಾಗಿರುವ ಬೆಳೆಗಳಿಗೆ ಹಾಗೂ ವಿಸ್ತೀರ್ಣಕ್ಕೆ ಅನುಗುಣವಾಗಿ ನಿಂತಿರುವ ಕಬ್ಬಿನ ಬೆಳೆಗಳಿಗೆ ಹಾಗೂ ಅರೆ ನೀರಾವರಿ ಖುಷ್ಕಿ ಬೆಳೆಗಳಿಗೆ ಮಾತ್ರ ನೀರನ್ನು ಸಮರ್ಪಕವಾಗಿ ಹಾಗೂ ಮಿತಬಳಕೆಯಲ್ಲಿ ಉಪಯೋಗಿಸಲು ಮನವಿ ಮಾಡಿದೆ.
ಮದ್ದೂರು: ವೀಸಿ ನಾಲೆಯ ಕೊನೆ ಭಾಗಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ರೈತರು ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದ ಬಳಿ ಇರುವ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಸರ್ಕಾರ, ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಕೊನೆ ಭಾಗದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ಈಗಾಗಲೇ ಲಕ್ಷಾಂತರ ರೂ. ಮೌಲ್ಯದ ಬೆಳೆಗೆ ನಷ್ಟ ಉಂಟಾಗಿದ್ದು, ಬೆಳೆಗಳಿಗೆ ನೀರು ಹರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸುವಂತೆ ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ, ಆರು ತಿಂಗಳಿಂದಲೂ ರೈತರಿಗೆ ದ್ರೋಹವೆಸಗುತ್ತಿದ್ದಾರೆ. ರೇಷ್ಮೆ, ರಾಗಿ, ತೆಂಗು, ಬಾಳೆ ಹಾಗೂ ತರಕಾರಿ ಬೆಳೆಗಳಿಗೆ ನೀರು ಹರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ ಏಕಾಏಕಿ ಕೆಆರ್‌ಎಸ್ ಅಣೆಕಟ್ಟೆಯಿಂದ ನೀರನ್ನು ಸ್ಥಗಿತಗೊಳಿಸಿ ತಾಲೂಕು ರೈತರನ್ನು ನಿರ್ಲಕ್ಷಿಸಿದ್ದಾರೆ ಎಂದು ದೂರಿದರು.
ಎರಡು ದಿನದೊಳಗಾಗಿ ವೀಸಿ ನಾಲೆ ಕೊನೆ ಭಾಗಗಳಿಗೆ ನೀರು ಹರಿಸದಿದ್ದರೆ ವಿವಿಧ ಸಂಘಟನೆಗಳು, ಜನಜಾನು ವಾರುಗಳೊಂದಿಗೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರವೀಂದ್ರ, ನಾಗೇಶ್, ಸಾವಿತ್ರಮ್ಮ, ಉಮೇಶ್, ಸ್ವಾಮಿ, ಶಿವಲಿಂಗಯ್ಯ, ಕುಮಾರ, ಸಿದ್ದೇಗೌಡ, ರವಿ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.