ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ಮೇಲುಗೈ
ಡೀಸಿಯಾಗಿ ಅಶ್ವಥಿ, ಎಸ್‌ಪಿಯಾಗಿ ಅಶ್ವಿನಿ ನೇಮಕ, ರಾಜಕೀಯದಲ್ಲೂ ಮಹಿಳೆಯರದ್ದೇ ದರ್ಬಾರ್
Team Udayavani, Feb 28, 2021, 12:43 PM IST
ಮಂಡ್ಯ: ಜಿಲ್ಲೆಯಲ್ಲಿ ಪುರುಷ ಅಧಿಕಾರಿಗಳಿಗಿಂತ ಮಹಿಳಾ ಅಧಿಕಾರಿಗಳೇ ಹೆಚ್ಚಾಗಿದ್ದಾರೆ. ಜಿಲ್ಲಾಡಳಿತ ಪ್ರಮುಖ ಹುದ್ದೆಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದಾರೆ.
ಕಳೆದ 15 ದಿನಗಳ ಹಿಂದೆ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡಾ.ಎಂ. ಅಶ್ವಿನಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಹೊರಡಿಸಿದೆ.
ಶೇ.50ರಷ್ಟು ಮಹಿಳಾ ಪ್ರತಿನಿಧಿಗಳು: ಇದರಿಂದ ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ಜತೆಗೆ ಜನಪ್ರತಿನಿಧಿಗಳಲ್ಲೂ ಮಹಿಳೆಯರು ಶೇ.50ರಷ್ಟು ಅಧಿಕಾರದಲ್ಲಿದ್ದು, ಆಡಳಿತ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ರೀತಿಮಹಿಳಾ ಅಧಿಕಾರಿಗಳು ಜಿಲ್ಲೆಯಲ್ಲಿ ಕರ್ತವ್ಯ ನಿರ್ವ ಹಿಸಿದ್ದರು. ಜಿಲ್ಲಾಡಳಿತದ ಪ್ರಮುಖ ಹುದ್ದೆಗಳಲ್ಲಿಮಹಿಳಾ ಅಧಿಕಾರಿಗಳಿದ್ದರು. ಆ ನಂತರ ವರ್ಗಾವಣೆ ಪ್ರಕ್ರಿಯೆಯಿಂದ ಪ್ರಮುಖ ಹುದ್ದೆಗಳಲ್ಲಿ ಪುರುಷ ಹಾಗೂ ಮಹಿಳಾ ಅಧಿಕಾರಿಗಳು ಆಡಳಿತ ಯಂತ್ರ ಮುನ್ನೆಡೆಸುತ್ತಿದ್ದರು. ಈಗ ಮತ್ತೆ ಅದೇ ರೀತಿಯ ವಾತಾವರಣ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ.
ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು: ಜಿಲ್ಲಾಧಿಕಾರಿ ಎಸ್.ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ, ಮಂಡ್ಯ ಉಪವಿಭಾಗಾಧಿಕಾರಿ ನೇಹಾಜೈನ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಭಾ, ಜಿಲ್ಲಾ ಕಾರ್ಮಿಕಾಧಿಕಾರಿ ಎಸ್.ಎಂ.ಮಂಜುಳಾ ದೇವಿ, ಆಹಾರ ಇಲಾಖೆಯ ಉಪನಿರ್ದೇಶಕಿ ಕುಮುದಾಶರತ್, ಗಣಿ ಮತ್ತು ಭೂವಿಜಾnನ ಇಲಾಖೆಯ ಹಿರಿಯ ಭೂವಿಜಾnನಿ ಪುಷ್ಪಾ, ಯುವ ಸಬಲೀ ಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕನಿರ್ದೇಶಕಿ ಅನಿತಾ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಪುಷ್ಪಾ, ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ, ಶಿಕ್ಷಣ ಇಲಾಖೆಯ ಮಂಡ್ಯ ಉತ್ತರ ವಲಯ ಚಂದ್ರಕಾಂತ, ಪಾಂಡವಪುರ, ಶ್ರೀರಂಗ ಪಟ್ಟಣದ ಬಿಇಒಗಳು, ಮದ್ದೂರು, ನಾಗಮಂಗಲತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಯರು, ಮಳವಳ್ಳಿಯ ಅಬಕಾರಿ ನಿರೀಕ್ಷಕಿಯೂ ಸೇರಿದಂತೆ ವಿವಿಧ ಇಲಾಖೆ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಹಿಳಾ ಜನಪ್ರತಿನಿಧಿಗಳು :
ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳ ಜತೆಗೆ ಮಹಿಳಾ ಜನಪ್ರತಿನಿಧಿಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಸಂಸದೆ ಸುಮಲತಾ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ ರೇವಣ್ಣ, ಮಂಡ್ಯ ತಾಪಂ ಅಧ್ಯಕ್ಷೆ ಶಿವಕುಮಾರಿ, ನಗರಸಭೆ ಉಪಾಧ್ಯಕ್ಷ ಇಶ್ರತ್ ಫಾತೀಮಾ, ಮದ್ದೂರು ಪುರಸಭೆ ಉಪಾಧ್ಯಕ್ಷೆ ಸುಮಿತ್ರ, ಮಳವಳ್ಳಿ ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಮದ್ದೂರು ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಶ್ರೀರಂಗಪಟ್ಟಣ ತಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನಂದಾಮಣಿ, ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷೆ ನಿರ್ಮಲಾ, ನಾಗಮಂಗಲ ಪುರಸಭೆ ಅಧ್ಯಕ್ಷೆ ಆಶಾ ಸೇರಿದಂತೆ ವಿವಿಧ ಆಡಳಿತ ಮಂಡಳಿಗಳಲ್ಲೂ ಮಹಿಳಾ ಸದಸ್ಯರೇ ಹೆಚ್ಚಾಗಿದ್ದಾರೆ.
ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಮೇಲುಗೈ :
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಗ್ರಾಪಂ ಚುನಾವಣೆಯಲ್ಲಿ ಮಹಿಳಾ ಸದಸ್ಯರಿದ್ದರು. ಅಲ್ಲದೆ, ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲೂ ಮಹಿಳೆಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗ್ರಾಪಂ ಆಡಳಿತ ನಡೆಸಲು ಸಜಾjಗಿದ್ದಾರೆ.
ಎಸ್‌ಪಿ ಪರಶುರಾಮ ವರ್ಗಾವಣೆ :
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಪರಶುರಾಮ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಎಸ್‌ಪಿಯಾಗಿ ಡಾ.ಎಂ.ಅಶ್ವಿನಿ ಅವರನ್ನು ನೇಮಕ ಮಾಡಿದೆ. ಬೆಂಗಳೂರಿನ ಗುಪ್ತಚರ ಇಲಾಖೆಯ ಉಪ ಆಯುಕ್ತರಾಗಿದ್ದ ಡಾ.ಎಂ.ಅಶ್ವಿನಿ ಅವರನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ. ಇನ್ನು ಕೆ.ಪರಶುರಾಮ ಅವರನ್ನು ಬೆಂಗಳೂರಿನ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷರನ್ನಾಗಿ ನಿಯೋಜಿಸಿದೆ.
-ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.