Mandya: ಭ್ರೂಣ ಹತ್ಯೆ; ದೊಡ್ಡ ಜಾಲದ ಶಂಕೆ


Team Udayavani, Jun 1, 2024, 6:10 PM IST

Mandya: ಭ್ರೂಣ ಹತ್ಯೆ; ದೊಡ್ಡ ಜಾಲದ ಶಂಕೆ

ಮಂಡ್ಯ: ಪಾಂಡವಪುರದ ವಸತಿ ಗೃಹದಲ್ಲಿ ಹೆಣ್ಣು ಭ್ರೂಣಹತ್ಯೆ ಮಾಡಲಾಗುತ್ತಿದೆ ಎಂಬ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇದೀಗ ಮತ್ತೆ ಒಂದೊಂದಾಗಿ ಪ್ರಕರಣಗಳು ಬೆಳಕಿಗೆ ಬರಲಾರಂಭಿಸಿದ್ದು, ದೊಡ್ಡ ಜಾಲದ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿ ಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ. ಈ ನಡುವೆ ಪಾಂಡವಪುರ ತಾಲೂಕಿನ ಮಹಿಳೆಯೊಬ್ಬರು ತಿಂಗಳ ಹಿಂದೆ ಗರ್ಭಪಾತ ಮಾಡಿಸಿಕೊಂಡು ಇದೀಗ ರಕ್ತಸ್ರಾವವಾಗಿ ಆಸ್ಪತ್ರೆಗೆ ದಾಖಲಾಗಿರುವ ಮತ್ತೂಂದು ಘಟನೆ ನಡೆದಿದೆ.

ಈ ಮಹಿಳೆಗೂ ಈಗಾಗಲೇ ಬಂ ಧಿತರಾಗಿರುವ ಆರೋಪಿಗಳ ತಂಡವೇ ಗರ್ಭಪಾತ ಮಾಡಿಸಿದ್ದರು ಎಂದು ತಿಳಿದು ಬಂದಿದೆ.

ಮಹಿಳೆಯನ್ನು ಅಧಿಕಾರಿಗಳು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈಕೆಗೆ ಗರ್ಭಪಾತವನ್ನು ಹೊಸಕೋಟೆ ಗ್ರಾಮದ ಹೆಂಚಿನ ಮನೆಯಲ್ಲಿ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಮಧ್ಯವರ್ತಿಗಳು ಹೊಸಬರು: ರಕ್ತಸ್ರಾವವಾಗಿ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸಹಕರಿಸಿದ ಮಧ್ಯವರ್ತಿಗಳು ಈಗಾಗಲೇ ಬಂಧಿತರಾಗಿರುವ ಆರೋಪಿಗಳು ಅಲ್ಲ, ಹೊಸಬರು ಎಂದು ತಿಳಿದು ಬಂದಿದ್ದು, ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಈಕೆಗೆ ಗರ್ಭಪಾತ ಮಾಡಿಸಲು ಮಧ್ಯವರ್ತಿಗಳಾಗಿ ಕೆಲಸ ಮಾಡಿದವರು ಯಾರು? ಹಾಗೂ ಸ್ಕ್ಯಾನಿಂಗ್‌ ಎಲ್ಲಿ ಮಾಡಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಸುಳಿವು ಸಿಗದ ಸ್ಕ್ಯಾನಿಂಗ್‌ ಮಾಹಿತಿ: ಗರ್ಭಪಾತ ಮಾಡಿಸಲು ಆರೋಪಿಗಳು ಎಲ್ಲಿ ಸ್ಕ್ಯಾನಿಂಗ್‌ ಮಾಡಿಸುತ್ತಿದ್ದರು ಎಂಬುದರ ಸುಳಿವು ಇದುವರೆಗೂ ಸಿಕ್ಕಿಲ್ಲ. ಇದು ಆರೋಗ್ಯಾಧಿಕಾರಿಗಳು, ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಮಾರುತಿ 800 ಸೇರಿದಂತೆ ಇತರೆ ಕಾರುಗಳಲ್ಲಿ ಮಧ್ಯರಾತ್ರಿ ಗರ್ಭಿಣಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ಯುವ ಮಧ್ಯವರ್ತಿಗಳು ಎರಡೂ¾ರು ನಿಮಿಷಗಳಲ್ಲಿ ಭ್ರೂಣಪತ್ತೆ ಮಾಡಿ ಕಳುಹಿಸುತ್ತಾರೆ. ಹೆಣ್ಣಾಗಿದ್ದರೆ ಗರ್ಭಪಾತ ಮಾಡಿಸಲು ಕಳುಹಿಸುತ್ತಿದ್ದರು. ಆದರೆ, ಸ್ಕ್ಯಾನಿಂಗ್‌ ಮಾಡುವ ನಿರ್ದಿಷ್ಟ ಸ್ಥಳದ ಬಗ್ಗೆ ಆರೋಪಿಗಳು ಮಾಹಿತಿ ನೀಡುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ತಿಳಿಸಿದರು.

ಮಹಿಳೆಯರ ಪತಿ ವಿರುದ್ಧವೂ ಪ್ರಕರಣಕ್ಕೆ ಕ್ರಮ: ಹೆಣ್ಣು ಭ್ರೂಣಹತ್ಯೆ ಪ್ರಕರಣಗಳಲ್ಲಿ ಗರ್ಭಪಾತಕ್ಕೆ ಒಳಗಾಗುವ ಮಹಿಳೆಯರ ಪತಿಯರ ಮೇಲೂ ಪ್ರಕರಣ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ. ಮಹಿಳೆಯನ್ನು ಸಾಕ್ಷಿಯನ್ನಾಗಿ ಮಾಡಲಾಗುತ್ತಿದೆ. ಪತಿ ಹಾಗೂ ಕುಟುಂಬದವರ ಒತ್ತಡಕ್ಕೆ ಒಳಗಾ ಗಿಯೇ ಇಂಥ ಕೃತ್ಯ ಎಸಗಲು ಕಾರಣವಾಗುತ್ತಿದೆ. ಅದಕ್ಕಾಗಿ ಪತಿಯ ಮೇಲೂ ಪ್ರಕರಣ ದಾಖಲಿಸಲು ಆರೋಗ್ಯಾ ಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ. ಆದರೆ, ಪತಿಯನ್ನು ಬಿಟ್ಟುಕೊಡಲು ಮುಂದಾಗದ ಮಹಿಳೆಯರು ಸ್ವಇಚ್ಛೆಯಿಂದ ಮಾಡಿಸಿಕೊಂಡಿದ್ದೇನೆಂದು ಹೇಳುವ ಮೂಲಕ ಪ್ರಕರಣಗಳು ಗಟ್ಟಿಯಾಗಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಬಗೆದಷ್ಟು ಆಳ; ಮತ್ತಷ್ಟು ಕೇಸ್‌ಗಳು ಬೆಳಕಿಗೆ:

ಹೆಣ್ಣು ಭ್ರೂಣಹತ್ಯೆ ಪ್ರಕರಣಗಳಲ್ಲಿ ಬಗೆದಷ್ಟು ಆಳವಾಗುತ್ತಿದ್ದು, ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಸುಮಾರು ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿರುವ ಆರೋಪಿಗಳು ಸಮರ್ಪಕವಾಗಿ ಮಾಹಿತಿ ನೀಡುತ್ತಿಲ್ಲ. ಆದರೆ ಒಂದೊಂದಾಗಿ ಭ್ರೂಣಪತ್ತೆ ಹಾಗೂ ಹತ್ಯೆ ಮಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ಜಿಲ್ಲೆಯಲ್ಲಿ ನಡೆದಿರುವ ಎರಡು ಪ್ರಕರಣಗಳು ಇಡೀ ರಾಜ್ಯವನ್ನೇ ಆತಂಕಕ್ಕೆ ದೂಡುವಂತೆ ಮಾಡಿದೆ.

ಹೆಣ್ಣು ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣಗಳಲ್ಲಿ ಈಗಾಗಲೇ ಆರೋಪಿಗಳನ್ನು ಬಂ ಧಿಸಲಾಗಿದೆ. ಅದರಂತೆ ನಿನ್ನೆ ಗರ್ಭಪಾತದಿಂದ ರಕ್ತಸ್ರಾವವಾಗಿ ಚಿಕಿತ್ಸೆಗೆ ದಾಖಲಾಗಿರುವ ಮಹಿಳೆಯು ನೀಡಿರುವ ಮಾಹಿತಿಯಂತೆ ಮಧ್ಯವರ್ತಿಗಳು ಹೊಸಬರಾಗಿದ್ದು, ಹಳೇ ತಂಡವೇ ಗರ್ಭಪಾತ ಮಾಡಿಸಿರುವುದು ತಿಳಿದು ಬಂದಿದೆ. ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಹೊರ ಬೀಳಲಿದೆ. -ಡಾ.ಬೆಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ

ಎಚ್‌.ಶಿವರಾಜು

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.