ಬಡವರಿಗೆ ಆಹಾರ ಧಾನ್ಯ ಸಂಗ್ರಹ: ಅನ್ನ ದಾಸೋಹವೂ ಮುಂದುವರಿಯುತ್ತೆ: ಶಾಸಕ ತಮ್ಮಣ್ಣ
Team Udayavani, May 2, 2020, 2:56 PM IST
ಸಾಂದರ್ಭಿಕ ಚಿತ್ರ
ಭಾರತೀನಗರ: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.
ಭಾರತೀನಗರದ ತಮ್ಮ ನಿವಾಸದಲ್ಲಿ ಬಡವರಿಗೆ ನೀಡಲು ಅಕ್ಕಿ, ಎಣ್ಣೆ, ಬೇಳೆ, ತರಕಾರಿ ಸೇರಿದಂತೆ ಆಹಾರ ಧಾನ್ಯ ಸಂಗ್ರಹಿಸಿರುವ ಕೊಠಡಿಗಳನ್ನು ವೀಕ್ಷಿಸಿ
ಮಾತನಾಡಿ, ಕ್ಷೇತ್ರದ ರೈತರು ಯಾವ ಆತಂಕಕ್ಕೂ ಒಳಗಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೆಳೆಗಳ ಮಾರಾಟಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದು, ಮಾರಾಟವಾ ಗದೆ ಉಳಿದಿರುವಂತಹ ತರಕಾರಿಗಳನ್ನು ನಾವೇ ಖರೀದಿಸಿ ಬಡವರಿಗೆ ನೀಡಲು ಮುಂದಾಗಿರುವುದಾಗಿ ತಿಳಿಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಮತ್ತು ಸಮರ್ಪಕ ವಿದ್ಯುತ್ ಸರಬ ರಾಜಿಗೆ ತೊಂದರೆಯಾಗ ದಂತೆ ಕ್ರಮ ಕೈಗೊಳ್ಳಲಾಗಿದೆ. ಲಾಕ್‌ಡೌನ್ ಮುಂದುವರಿದರೆ ನಿರ್ಗತಿಕರಿಗೆ, ಅನ್ನ ದಾನ ವೂ ಮುಂದು ವರಿಸಲಾಗುವುದು ಎಂದು ಹೇಳಿದರು. ಮಳ ವಳ್ಳಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಸೋಂಕು ಮಂಡ್ಯ, ನಾಗ ಮಂಗಲ, ಪಾಂಡವಪುರ, ಕೆ.ಆರ್. ಪೇಟೆ ತಾಲೂಕುಗಳಿಗೆ ಹರಡಿರು ವುದು ಅಪಾಯಕಾರಿ ಸೂಚನೆ. ಸರ್ಕಾರ ಮತ್ತು ಜಿಲ್ಲಾಡಳಿತ ಮುಂ ಜಾಗೃತಾ ಕ್ರಮ ಕೈಗೊಂಡಿ ದ್ದರೂ ಜನರ ನಿರ್ಲಕ್ಷದಿಂದ ಈ ಸೋಂಕು ಹರಡುತ್ತಿದೆ. ಆರೆಂಜ್ ಜೋನಲ್ಲಿದ್ದ ಮಂಡ್ಯ ಜಿಲ್ಲೆ ರೆಡ್‌ಜೋನ್ ಸೇರಿದೆ. ಇನ್ನಾದರೂ ತಬ್ಲೀಘಿ, ಮುಂಬೈ ವಲಸಿಗರು ಸ್ವಯಂ ಪ್ರೇರಣೆಯಿಂದ ಚಿಕಿತ್ಸೆಗೆ ಮುಂದಾಗಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.