![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 17, 2021, 9:07 PM IST
ಮಂಡ್ಯ: ರೈತ ಹಿತರಕ್ಷಣೆ ವೇದಿಕೆ ಅಧ್ಯಕ್ಷ, ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು ಶನಿವಾರ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
1980ರ ದಶಕದಲ್ಲಿ ಆರ್ ಗುಂಡೂರಾವ್ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ 1989 ಮತ್ತು 1991ರಲ್ಲಿ ಎರಡು ಬಾರಿ ಆಯ್ಕೆಗೊಂಡಿದ್ದರು.
ಕಾವೇರಿ ಹೋರಾಟ ಸೇರಿದಂತೆ ಹಲವಾರು ರೈತ ಪರ ಹೋರಾಟಗಳಲ್ಲಿ ಮಾದೇಗೌಡರು ಸಕ್ರಿಯರಾಗಿದ್ದರು.
ಹಿರಿಯ ನಾಯಕ ಮಾದೇಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು, ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟು ಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ ಎಂದಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.