ಆದಿಚುಂಚನಗಿರಿ ಮಠದಿಂದ ಜಾನಪದ ಕಲೆಗೆ ಪ್ರೋತ್ಸಾಹ
Team Udayavani, Sep 24, 2019, 5:30 PM IST
ನಾಗಮಂಗಲ: ಆದಿಚುಂಚನಗಿರಿ ಮಠ ರಾಜ್ಯದ ಸನಾತನ ಧರ್ಮಗಳಲ್ಲಿ ಪ್ರಮುಖವಾದ ಸ್ಥಾನ ಪಡೆದಿದ್ದು ಇಲ್ಲಿ ಅನ್ನ, ಅಕ್ಷರ ದಾಸೋಹದ ಜೊತೆಗೆ ಜಾನಪದ ಕಲೆ ಉಳಿಸಿ ಬೆಳೆಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಗೌಡ ತಿಳಿಸಿದರು.
ತಾಲೂಕಿನ ಆದಿಚುಂಚನಗಿರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ 41ನೇ ರಾಜ್ಯ ಮಟ್ಟದ ಕಾಲಭೈರವೇಶ್ವರ ಸ್ವಾಮಿ ಜಾನಪದ ಕಲಾಮೇಳ ಉದ್ಘಾಟಿಸಿ ಮಾತನಾಡಿದರು. ನಾಡೋಜ ಡಾ.ಎಚ್.ಎಲ್.ನಾಗೇಗೌಡರ ಒತ್ತಾಸೆಗೆ ಪೂರಕವಾಗಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಆರಂಭಿಸಿದ ಜಾನಪದ ಕಲಾಮೇಳ 40 ವರ್ಷ ಪೂರೈಸಿ 41ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಧಾರ್ಮಿಕ ಕ್ಷೇತ್ರವೊಂದು ಹೇಗೆ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಛಾಪು ಮೂಡಿಸಬಹುದು ಎಂಬುದಕ್ಕೆ ಈ ಕಲಾಮೇಳ ಒಂದು ಜೀವಂತ ಸಾಕ್ಷಿ ಎಂದು ತಿಳಿಸಿದರು. ಇಂದು ಜಾನಪದ ಕಲಾವಿದರೂ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇದರ ನಡುವೆಯೂ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯ. ಸಂಘ-ಸಂಸ್ಥೆಗಳು ಮತ್ತು ಸರ್ಕಾರ ಬಡ ಕಲಾವಿದರು ಮತ್ತು ಅಶಕ್ತ ಕಲಾವಿದರಿಗೆ ಆರ್ಥಿಕ ಸಹಕಾರ ನೀಡಲು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಯುವಕರಲ್ಲಿ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ, ಇಂದು ಎಲ್ಲಾ ಮೆರವಣಿಗೆಗಳಲ್ಲಿ ಜಾನಪದ ಕಲಾ ತಂಡಗಳು ಮುಂಚೂಣಿಯಲ್ಲಿರುವುದು ಸಂತಸ ಎಂದು ತಿಳಿಸಿದರು. ನಾಡೋಜ ಡಾ.ಎಚ್.ಎಲ್.ನಾಗೇಗೌಡ ಪ್ರಶಸ್ತಿಯನ್ನು ಕೂಡ್ಲಿಗಿ ಡೊಳ್ಳುಕುಣಿತ ಕಲಾವಿದೆ ಕೆ.ದುರ್ಗಮ್ಮ ಮತ್ತು ತಲಕಾಡಿನ ಮೂಡಲಪಾಯ ಯಕ್ಷಗಾನ ಕಲಾವಿದ ಟಿ.ಎಸ್.ರವೀಂದ್ರರಿಗೆ ನೀಡಿ ಗೌರವಿಸಲಾಯಿತು. ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಸಾಹಿತಿ ಪ್ರೊ.ಕೃಷ್ಣೇಗೌಡ, ತಾಪಂ ಅಧ್ಯಕ್ಷ ದಾಸೇಗೌಡ, ಜಿಪಂ ಸದಸ್ಯ ಮುತ್ತಣ್ಣ, ಜಾನಪದ ಪರಿಷತ್ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯಾನಂದ ರಾಜು ಉಪಸ್ಥಿತರಿದ್ದರು.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.