ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧರಾಗಿ: ಸಚಿವ


Team Udayavani, Jun 29, 2021, 1:40 PM IST

Untitled-1

ಮಂಡ್ಯ: ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ನಿಯಂತ್ರಿಸಲು ಅಗತ್ಯ ಸಿದ್ಧತೆ ಹಾಗೂಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ನಗರದ ಜಿಪಂನ ಕಾವೇರಿ ಸಭಾಂಗಣದಲ್ಲಿ ಕೋವಿಡ್‌-19 ಕುರಿತು ನಡೆದ ಪ್ರಗತಿ ಪರಿಶೀಲನಾಸಭೆ ಹಾಗೂ ಕೋವಿಡ್‌-19, 3ನೇ ಅಲೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ 4500ಕ್ಕೂ ಹೆಚ್ಚು ಟೆಸ್ಟಿಂಗ್‌ ಮಾಡಿಸಬೇಕು. ಆದ್ಯತಾವಲಯದವರಿಗೆ ಹಾಗೂ 18 ವರ್ಷ ಹಾಗೂ 45ಮೇಲ್ಪಟ್ಟವರಿಗೆ ಕೈಗೊಂಡಿರುವ ಲಸಿಕಾಕರಣವನ್ನುಹೆಚ್ಚು ಮಾಡಬೇಕು. ತಾಲೂಕುವಾರು ಪಿಎಚ್‌ಸಿ ಹಾಗೂ ಸಮುದಾಯ ಆರೋಗ್ಯ ಸಿಬ್ಬಂದಿಗಳಿಗೆ 3ನೇಅಲೆಯ ನಿರ್ವಹಣೆ ಬಗ್ಗೆ ತರಬೇತಿ ನೀಡಬೇಕು ಎಂದು ಸೂಚಿಸಿದರು.

ತರಕಾರಿ, ಎಳನೀರು ಮಾರುಕಟ್ಟೆ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚು ಜನರು ಬರುತ್ತಿದ್ದಾರೆ. ಅವರಿಗೆ ಕಡ್ಡಾಯ ಟೆಸ್ಟ್‌ ಮಾಡಿಸಬೇಕು. ಜಿಲ್ಲೆಯಲ್ಲಿ ಆಹಾರ ಕಿಟ್‌ ವಿತರಣೆಹಾಗೂಇನ್ನಿತರ ಸಭೆಗಳಲ್ಲಿ ರಾಜಕಾರಣಿ ಗಳು ಬಂದಾಗ ಹೆಚ್ಚು ಜನರು ಸೇರುತ್ತಿದ್ದು, ಇವುಗಳನ್ನ ನಿರ್ಬಂದಿಸಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚಿಸಿದರು. ಮಕ್ಕಳ ಹಾಲು ಪೌಡರ್‌ನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿ ರುವವರ ಮೇಲೆ ಕ್ರಮ ವಹಿಸಿ ಅಂಥಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಮಾತನಾಡಿ, ಕಲ್ಯಾಣ ಮಂಟಪಗಳಲ್ಲಿ ಮದುವೆ ಸಮಾರಂಭಕ್ಕೆ 50ಕ್ಕಿಂತ ಹೆಚ್ಚಿನ ಜನ ಹಾಗೂ ಶವ ಸಂಸ್ಕಾರ ಸಂದರ್ಭದಲ್ಲಿ ಹೆಚ್ಚಿನ ಜನ ಸೇರುವುದನ್ನು ನಿಬಂìದಿಸಿ ಅಂಥವರ ಮೇಲೆ ಕೇಸ್‌ ದಾಖಲಿಸಿ ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಶಾಸಕ ಎಂ.ಶ್ರೀನಿವಾಸ್‌, ಕೆ.ಅನ್ನದಾನಿ, ಕೆ.ಸುರೇಶ್‌ ಗೌಡ, ಅಶ್ವಿ‌ನ್‌ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧಿಕಾರಿ ಎಸ್‌.ಅಶ್ವಥಿ, ಜಿಪಂ ಸಿಇಒ ದಿವ್ಯಪ್ರಭು, ಅಪರ ಜಿಲ್ಲಾಧಿಕಾರಿ ಶೈಲಜಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್‌. ಧನಂಜಯ, ಉಪವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿ, ಐಶ್ವರ್ಯ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

 

3ನೇ ಅಲೆ ಅಪೌಷ್ಟಿಕತೆ ಮಕ್ಕಳಿಗೆ ಹೆಚ್ಚು ದುಷ್ಪರಿಣಾಮ :  ಜಿಲ್ಲೆಯಲ್ಲಿ ಹೆಚ್ಚು ಅಪೌಷ್ಟಿಕತೆಯಿಂದ ಇರುವ ಮಕ್ಕಳಿಗೆ ಹೆಚ್ಚು ಭಾದಿಸಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್‌.ಧನಂಜಯ ಹೇಳಿದರು. ಸಭೆಯಲ್ಲಿ ಮಾತನಾಡಿದ ಅವರು, 3ನೇ ಅಲೆ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಮಿಮ್ಸ್‌ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್‌, ಐಸಿಯು, ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಆದರೆ ಇದು ಹೆಚ್ಚು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ತೊಂದರೆಯಾಗಲಿದೆ ಎಂಬುದರ ಬಗ್ಗೆ ವರದಿ ತಯಾರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ4,175 ಮಂದಿ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಅವರಿಗೆ ಅಗತ್ಯ ನ್ಯೂಟ್ರಿಷಿಯನ್‌, ಪೌಷ್ಟಿಕಾಂಶ ಆಹಾರ ನೀಡಲುಕ್ರಮ ವಹಿಸುವಂತೆ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ ಮಾತನಾಡಿ,ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ಪ್ರೊಟೀನ್‌, ನ್ಯೂಟ್ರಿಷಿಯನ್‌ ಇರುವಕಿಟ್‌ ವಿತರಿಸಲಾಗುತ್ತಿದೆ. ಅಗತ್ಯ ಪೌಷ್ಟಿಕಾಂಶವಿರುವ ಆಹಾರ ವಿತರಣೆಗೆಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

 

ಅಧಿಕಾರಿಗಳ ಅಮಾನತಿಗೆ ಆಗ್ರಹ:

ಮಳವಳ್ಳಿ ಹಾಗೂ ನಾಗಮಂಗಲ ತಾಲೂಕಿನಲ್ಲಿ ಮಾಜಿ ಶಾಸಕರು ಅಧಿಕಾರಿಗಳ ಸಭೆ ನಡೆಸುವುದು ಹಾಗೂ ಕಾಮಗಾರಿಗಳ ವೀಕ್ಷಣೆ ಮಾಡುತ್ತಿದ್ದಾರೆ. ಹಾಗಾದರೆ ಶಾಸಕರಾಗಿ ನಾವು ಇರುವುದು ಏಕೆ?. ಅದಕ್ಕೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ಅಮಾನತು ಮಾಡಿ ಕ್ರಮ ವಹಿಸಬೇಕು ಎಂದು ಪಟ್ಟು ಹಿಡಿದರು. ಶಾಸಕ ಅನ್ನದಾನಿ ಮಾತನಾಡಿ, ಮಳವಳ್ಳಿ ಕ್ಷೇತ್ರದಲ್ಲಿ ಅಧಿಕಾರಿಗಳನ್ನು ಕರೆದುಕೊಂಡು ಮಾಜಿ ಶಾಸಕರುಕಾಮಗಾರಿ ವೀಕ್ಷಣೆ ಮಾಡುತ್ತಾರೆ. ಸರ್ಕಾರಿ ಶಿಷ್ಟಾಚಾರ ಪ್ರಕಾರ ಮಾಡುವಂತಿಲ್ಲ. ಕೆಲವು ಕಾಮಗಾರಿಗಳಿಗೆ ನನ್ನನ್ನೇ ಬರದಂತೆ ಅಧಿಕಾರಿಗಳು ತಡೆಯುತ್ತಾರೆ ಎಂದು ದೂರಿದರು. ಇದಕ್ಕೆ ದನಿಗೂ‌ಡಿಸಿದ ಶಾಸಕ ಕೆ.ಸುರೇಶ್‌ಗೌಡ, ನಾಗಮಂಗಲದಲ್ಲೂ ಮಾಜಿ ಶಾಸಕರು ಅಧಿಕಾರಿಗಳ ಸಭೆ ನಡೆಸುತ್ತಾರೆ.  ಸರ್ಕಾ‌ರಿ  ಅಧಿಕಾರಿಗಳು ಇರುವುದು ಏಕೆ?. ಹಗಲು-ರಾತ್ರಿಕೊರೊನಾ ವಾರಿಯರ್ಸ್ ಗಳಂತೆ ‌ ದುಡಿಯುತ್ತಿದ್ದೇವೆ. ಆದರೆ ಯಾವಾಗಲೋ ಬರುವ ಮಾಜಿ ಶಾಸಕರಿಗೆ ಅಧಿಕಾರಿಗಳು ಮನ್ನಣೆ ನೀಡುವುದಾದ್ದರೆ, ‌ ನಾವು ಯಾರು? ಎಂದು ಪ್ರಶ್ನಿಸಿದ ಅವರು,ಕೂಡಲೇ ಅಧಿಕಾರಿಗಳ ವಿರುದ್ಧಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆಪ್ರತಿಕ್ರಿಯಿಸಿದ ಸಚಿವ ನಾರಾಯಣಗೌಡ, ಇನ್ನೂ ಮುಂದೆ ಶಾಸಕರ ‌ ನ್ನು ಸರ್ಕಾರಿಶಿಷಾಚಾರದಂ‌ತೆಕಾರ್ಯಕ್ರಮಗಳ ಆಯೋಜನೆ ಮಾಡಬೇಕು. ರಾಜಕೀಯ ಮುಖಂಡ ರು, ನಾಯಕರು ನಡೆಸುವ ಆಹಾರ, ಆರೋಗ್ಯ ಕಿಟ್‌ಗಳ ವಿತರಣೆಗೆ ಅವಕಾಶ ನೀಡಬಾರದು. ಹೆಚ್ಚು ಜನ ಸೇರುವುದರಿಂದ ಸೋಂಕು ಹರಡು ‌ತ್ತೆ.ಕೊರೊನಾ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ವಹಿಸಬೇಕು ಎ‌ಂದು ಸೂಚಿಸಿದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.