ಎಕರೆಗೆ 50 ಸಾವಿರ ಪರಿಹಾರ ನೀಡಿ

ಕಾರ್ಖಾನೆ ಆರಂಭಿಸದಿದ್ದರೆ ಜು.8ರಿಂದ ಆಮರಣಾಂತ ಉಪವಾಸ

Team Udayavani, Jul 5, 2019, 11:29 AM IST

mandya-tdy-2..

ನೀರಿಲ್ಲದೆ ಒಣಗಿರುವ ಕಬ್ಬಿಗೆ ಪ್ರತಿ ಎಕರೆಗೆ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮಂಡ್ಯ: ನೀರಿಲ್ಲದೆ ಒಣಗಿಹೋದ ಕಬ್ಬಿಗೆ ಕನಿಷ್ಠ ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲೆಯಲ್ಲಿ ಬೆಳೆದ ನಿಂತ ಬೆಳೆಗೆ ಕಾವೇರಿ ಜಲಾಶಯಗಳಿಂದ ನೀರು ಹರಿಸಲು ಸಾಧ್ಯವಾಗದೆ ಒಣಗಿಹೋಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರ ಸಂಕಷ್ಟ ದೂರ ಮಾಡಲು ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸುಮಾರು 70 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತ ಕಬ್ಬನ್ನು ಅರೆಯಲು ತಕ್ಷಣವೇ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು. ಜೊತೆಗೆ ಮಂಡ್ಯದ ಭಾವನಾತ್ಮಕ ಆಸ್ತಿಯಾದ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ಕಾರ್ಖಾನೆಗಳನ್ನು ಉಳಿಸಿಕೊಂಡು ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು. ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಈ ವ್ಯಾಪ್ತಿಯಲ್ಲಿ ಬೆಳೆದು ನಿಂತ ಕಬ್ಬನ್ನು ಬೇರೆಡೆಗೆ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕು.

ಇಲ್ಲದಿದ್ದರೆ ರೈತರು ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಾಕಿ ಪಾವತಿಗೆ ಕ್ರಮ-ಸ್ವಾಗತ: ರೈತರು, ವಿವಿಧ ಸಂಘಟನೆಗಳ ಮುಖಂಡರ ಒತ್ತಾಯದ ಮೇರೆಗೆ ಜಿಲ್ಲಾಡಳಿತ ರೈತರ ಬಾಕಿ ಪಾವತಿಸಲು ಸಂಬಂ—ಸಿದ ಕಾರ್ಖಾನೆ ಆಡಳಿತ ಮಂಡಳಿ ಸಭೆ ಕರೆದು ಚರ್ಚಿಸಿ ಶೀಘ್ರ ಬಾಕಿ ಪಾವತಿಗೆ ಸೂಚನೆ ನೀಡಿರುವುದನ್ನು ಸ್ವಾಗತಿಸಿದರು. ಮಳೆ ಬಾರದೆ, ನಾಲೆಗಳಲ್ಲೂ ನೀರು ಹರಿಸದೆ ಜಿಲ್ಲೆಯಲ್ಲಿ ಬೆಳೆದು ನಿಂತ ಬೆಳೆ ಒಣಗುತ್ತಿದೆ. ಈಗಾಗಲೇ ಸಾಲಬಾಧೆಯಿಂದಾಗಿ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಕಬ್ಬಿನ ಬಾಕಿ ಹಣವನ್ನು ಶೀಘ್ರವೇ ರೈತರಿಗೆ ಕೊಡಿಸಿಕೊಟ್ಟಲ್ಲಿ ರೈತರಿಗೆ ಅನುಕೂಲವಾಗುತ್ತದೆ.

ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಹಣ ಕೊಡಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್‌ ಮುಖಂಡ ಡಾ. ರವೀಂದ್ರ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ವಿವಿಧ ಸಂಘಟನೆಗಳ ಮುಖಂಡರಾದ ಎಂ.ಬಿ. ನಾಗಣ್ಣ, ಸಿದ್ದರಾಜುಗೌಡ, ನಿತ್ಯಾನಂದ, ಲತಾಶಂಕರ್‌, ಸಿ.ಟಿ. ಮಂಜುನಾಥ್‌, ಎಂ. ಚಂದ್ರಶೇಖರ್‌ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.