ಮಕ್ಕಳ ಹರಿದ ಬಟ್ಟೆ ಹೊಲಿದು ಕೊಡುತ್ತಿದ್ದ ಶಿಕ್ಷಕನಿಗೆ ಪ್ರಶಸ್ತಿ
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನ ; ಶಾಲೆಯಲ್ಲಿ ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಾಣ
Team Udayavani, Sep 4, 2021, 9:17 PM IST
ಮಂಡ್ಯ: ಶಾಲಾ ಮಕ್ಕಳ ಹರಿದ ಬಟ್ಟೆ ಹೊಲಿದು ಕೊಡುತ್ತಿದ್ದ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸ್ವಾಮಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
1967ನೇ ಜೂ.20ರಂದು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಜವರಯ್ಯ-ಚನ್ನಮ್ಮ ದಂಪತಿಯ ಪುತ್ರರಾಗಿ ಜನಿಸಿದ ಸ್ವಾಮಿ ಅವರು, ಪ್ರಾಥಮಿಕ ಶಿಕ್ಷಣವನ್ನು ಬಳ್ಳೂರಿನಲ್ಲೇ ಮುಗಿಸಿದರು. ಪ್ರೌಢ ಶಿಕ್ಷಣವನ್ನು ಸಾಲಿಗ್ರಾಮದಲ್ಲಿ ಪಡೆದರೆ, ಪದವಿ ಪೂರ್ವ ಶಿಕ್ಷಣವನ್ನು ಕೆ.ಆರ್.ನಗರದಲ್ಲಿ ಮುಗಿಸಿದರು.
ಆಲಕೆರೆಯ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ:
ಕೊಡಗು ಜಿಲ್ಲೆಯ ಕೂಡಿಗೆಯಲ್ಲಿ ಟಿಸಿಎಚ್ ಮುಗಿಸಿದ ಸ್ವಾಮಿ ಅವರು 1989ರ ನವೆಂಬರ್‌ನಲ್ಲಿ ಮಂಡ್ಯ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿದರು. ಪ್ರಸ್ತುತ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
60 ಮಕ್ಕಳಿಗೆ ಶಿಕ್ಷಣ:
ಇವರು ಈ ಶಾಲೆಗೆ ಮುಖ್ಯ ಶಿಕ್ಷಕರಾಗಿ ನೇಮಕವಾಗಿ ಬಂದ ನಂತರ ಶಾಲೆಯನ್ನು ಭೌತಿಕವಾಗಿ ಹಾಗೂ ಶೈಕ್ಷಣಿಕವಾಗಿ ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ಮಕ್ಕಳ ಮನೆ ಮಾಡುವ ಮೂಲಕ 60 ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.
ಕೊಠಡಿಗಳಿಗೆ ಸ್ಪೀಕರ್ ಅಳವಡಿಕೆ
ದಾನಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರಿಂದ ಸುಮಾರು 25 ಲಕ್ಷ ರೂ. ಸಂಗ್ರಹಿಸಿ ಶಾಲೆಯಲ್ಲಿ ರಂಗಮಂದಿರ, ಶುದ್ಧ ಕುಡಿಯುವ ನೀರು, ಸೌರ ವಿದ್ಯುತ್, ಕ್ರೀಡಾ ಸಾಮಗ್ರಿಗಳು, ಅಲ್ಮೇರಾ, ಎಜುಸ್ಯಾಟ್ ಹಾಗೂ ರೇಡಿಯೋ ಕಾರ್ಯಕ್ರಮಕ್ಕೆ ಅಗತ್ಯವಾಗಿ ಬೇಕಾಗಿರುವ ಎಲ್ಲ ಕೊಠಡಿಗಳಿಗೆ ಸ್ಪೀಕರ್‌ಗಳನ್ನು ಅಳವಡಿಸಿದ್ದಾರೆ.
ವಿಶೇಷವೆಂದರೆ ಶಾಲೆಗೆ ಬರುತ್ತಿದ್ದ ಮಕ್ಕಳು ಹರಿದ ಬಟ್ಟೆಯಲ್ಲಿ ಬಂದಿದ್ದರೆ, ಕೂಡಲೇ ತಾವೇ ಹರಿದ ಬಟ್ಟೆಗಳನ್ನು ಹೊಲಿದು ಕೊಡುವ ಮೂಲಕ ಮಕ್ಕಳಿಗೆ ಶಿಸ್ತು, ಸ್ವಚ್ಛತೆ, ಪರಿಸರ ಜ್ಞಾನ ಬೆಳೆಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಖುಷಿ ತಂದಿದೆ. ಪ್ರಶಸ್ತಿಯಿಂದ ನನ್ನ ಕರ್ತವ್ಯ ಪ್ರಜ್ಞೆ ಹಾಗೂ ಜವಾಬ್ದಾರಿ ಹೆಚ್ಚಿಸಿದೆ. ಶಾಲೆಯ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಶ್ರಮ ವಹಿಸಬೇಕು ಎಂಬುದನ್ನು ಪ್ರಶಸ್ತಿ ಸಾಬೀತುಪಡಿಸಿದೆ.
– ಸ್ವಾಮಿ, ಮುಖ್ಯ ಶಿಕ್ಷಕ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.