ಹಳ್ಳಿ ಪಂಚಾಯ್ತಿ ಫೈಟ್‌ ಅಖಾಡಕ್ಕಿಳಿಯಲು ಸಜ್ಜು

ಹಳ್ಳಿಕಟ್ಟೆಯಲ್ಲಿ ಆಕಾಂಕ್ಷಿಗಳ ಆಯ್ಕೆ ಕಸರತ್ತು „ಆಕಾಂಕ್ಷಿತರಿಂದಲೇ ಸಮಸ್ಯೆ ಪರಿಹರಿಸುವ ಯತ್ನ

Team Udayavani, Dec 6, 2020, 7:13 PM IST

ಹಳ್ಳಿ ಪಂಚಾಯ್ತಿ ಫೈಟ್‌ ಅಖಾಡಕ್ಕಿಳಿಯಲು ಸಜ್ಜು

ಮಂಡ್ಯ: ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಪಂಚಾಯ್ತಿ ಅಖಾಡಕ್ಕಿಳಿಯಲು ಆಕಾಂಕ್ಷಿತರು ಕಸರತ್ತು ನಡೆಸುತ್ತಿದ್ದಾರೆ. ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮೊದಲ ಹಂತದ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಡಿ.11ರಿಂದ ಪ್ರಾರಂಭವಾಗಲಿದೆ. ಅದಕ್ಕಾಗಿ ಅಭ್ಯರ್ಥಿಗಳ ಆಯ್ಕೆ ರಾಜಕೀಯ ಪಕ್ಷಗಳ ಮುಖಂಡರು ಇನ್ನಿಲ್ಲದಕಸರತ್ತು ನಡೆಸುತ್ತಿದ್ದಾರೆ.

ಹಳ್ಳಿಕಟ್ಟೆ, ಹೋಟೆಲ್‌ಗ‌ಳೇ ಆಯ್ಕೆ ತಾಣಗಳು: ಗ್ರಾಮದಲ್ಲಿರುವ ಹಳ್ಳಿಕಟ್ಟೆ ಹಾಗೂ ಹೋಟೆಲ್‌ಗ‌ಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ದಿನ ಹತ್ತಿರವಾಗುತ್ತಿದ್ದಂತೆ ಆಕಾಂಕ್ಷಿತರಲ್ಲಿ ತಳ ಮಳ ತರಿಸಿದೆ. ಮೂರು ಪಕ್ಷಗಳ ನಾಯಕರು ಬೂತ್‌ ಮಟ್ಟದ ಮುಖಂಡರಿಗೆ ಅಭ್ಯರ್ಥಿಗಳ ಆಯ್ಕೆಗೆ ಸೂಚಿಸಿರು ವುದರಿಂದ ಯಾರಿಗೆ ಟಿಕೆಟ್‌ ನೀಡು ವುದು ಎಂಬ ಗೊಂದಲವೂ ಮುಂದು ವರೆದಿದೆ.

ಟಿಕೆಟ್‌ಗಾಗಿ ಮುಖಂಡರಿಗೆಆಕಾಂಕ್ಷಿಗಳು ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್‌ ನೀಡುವುದು, ಬಂಡಾಯ ಶಮನಗೊಳಿಸುವ ಯತ್ನಗಳು ನಡೆಯುತ್ತಿವೆ. ಅಭ್ಯರ್ಥಿ ಆಯ್ಕೆಗೆ ಮುಂದಾದ ಮುಖಂಡರು: ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾ ವಣೆಯೇ ವಿಧಾನಸಭೆ ಚುನಾವಣೆಗಿಂತಲೂ ರಂಗು ಪಡೆಯುತ್ತದೆ. ಹಳ್ಳಿ ಪಂಚಾಯ್ತಿ ಅಖಾಡದಲ್ಲಿ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ರಾಜಕೀಯ ಪಕ್ಷಗಳ ಚಿಹ್ನೆಯಡಿ ನಡೆಯದಿದ್ದರೂ, ಬೆಂಬಲಿತಅಭ್ಯರ್ಥಿಗಳಾಗಿ ಕಣಕ್ಕಿಳಿಸಲಾಗುತ್ತಿದೆ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ಶುರುವಾಗಿದೆ. ಈಗಾಗಲೇ ಹಲವು ಗ್ರಾಪಂಗಳಲ್ಲಿ ಅಭ್ಯರ್ಥಿಗಳು ಬಹುತೇಕ ಅಂತಿಮವಾಗಿದ್ದರೂ, ಕೆಲವೊಂದು ಕಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಶಮನ ಪ್ರಯತ್ನಗಳು ನಡೆಯುತ್ತಿವೆ.

ರಾಜಿ ಸಂಧಾನ ಯತ್ನ: ಜಿಲ್ಲೆಯಲ್ಲಿ ಸಾಂಪ್ರದಾಯಿಕಎದುರಾಳಿಗಳಾಗಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಕ್ಕೆ ಆಕಾಂಕ್ಷಿತರು ಹೆಚ್ಚಾಗಿ ರುವುದರಿಂದ ಬಂಡಾಯದ ಕೂಗುಗಳು ಕೇಳಿ ಬರುತ್ತಿವೆ. ಅದಕ್ಕಾಗಿ ಗ್ರಾಮ ಮಟ್ಟದ ಎರಡು ಪಕ್ಷಗಳ ಮುಖಂಡರು ಟಿಕೆಟ್‌ ಆಕಾಂಕ್ಷಿತರ ನಡುವೆ ಸಮನ್ವಯ ಸಾಧಿಸಿ ರಾಜಿ ಸಂಧಾನ ಮಾಡುವ ಯತ್ನಗಳು ನಡೆಯುತ್ತಿವೆ.

ಅವಿರೋಧ ಆಯ್ಕೆಗೂ ಕಸರತ್ತು: ಕೆಲವು ಕಡೆ ಗ್ರಾಮಸ್ಥರೇ ಪಂಚಾಯ್ತಿ ನಡೆಸಿ ಅವಿರೋಧ ಆಯ್ಕೆ ಮಾಡಲು ಮುಂದಾಗಿದ್ದಾರೆ. ಆಕಾಂಕ್ಷಿತರು ಹೆಚ್ಚಿರುವ ಕಡೆ ಒಬ್ಬ ಒಮ್ಮತ ಅಭ್ಯರ್ಥಿ ಆಯ್ಕೆ ಮಾಡುವ ಮೂಲಕ ಆತನಿಂದ ಗ್ರಾಮದ ಅಭಿವೃದ್ಧಿ ಹಾಗೂ ದೇವಾಲಯಗಳ ಅಭಿವೃದ್ಧಿಗೆ ಇಂತಿಷ್ಟು ಹಣ ನೀಡುವ ಆಫರ್‌ ಕೊಡಲಾಗುತ್ತಿದೆ. ಚುನಾವಣೆಗೆ ಖರ್ಚು ಮಾಡಬೇಕಾದ ಹಣವನ್ನು ಗ್ರಾಮದ ಅಭಿವೃದ್ಧಿಗೆ ನೀಡಿದರೆ, ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಎಂಬ ಮಾತುಕತೆ, ಚರ್ಚೆಗಳು ಹೆಚ್ಚಾಗುತ್ತಿದೆ.

ಆಕಾಂಕ್ಷಿತರಿಂದಲೇ ಸಮಸ್ಯೆ ಪರಿಹರಿಸುವ ಯತ್ನ: ಹೆಚ್ಚಿನ ಸಂಖ್ಯೆಯಲ್ಲಿರುವಆಕಾಂಕ್ಷಿತರನ್ನು ಸಮಾಧಾನಗೊಳಿಸಲು ಬೂತ್‌ ಮಟ್ಟದ ರಾಜಕೀಯ ಮುಖಂಡರು ಆಕಾಂಕ್ಷಿತರನ್ನು ಒಂದೆಡೆ ಸೇರಿಸಿ, ಯಾರು ಚುನಾವಣೆಯಲ್ಲಿ ಗೆಲ್ಲಲು ಹಾಗೂ ಹಣ ಖರ್ಚು ಮಾಡುವ ಸಾಮರ್ಥ್ಯ ವಿರುವವರು ನೀವೇ ಚರ್ಚಿಸಿ, ನಿರ್ಧಾರ ಕೈಗೊಳ್ಳುವಂತೆ ಆಕಾಂಕ್ಷಿತರ ಹೆಗಲಿಗೆ ಜವಾಬ್ದಾರಿ ಹೊರಿಸುವ ಮೂಲಕ ಚುನಾವಣೆಯಲ್ಲಿ ಬಂಡಾಯ ಏಳದಂತೆ ಮಾಡುವ ಪ್ರಯತ್ನಗಳು ಸದ್ದಿಲ್ಲದೆ ನಡೆಯುತ್ತಿದೆ. ಇದಕ್ಕಾಗಿ ಒಂದೇ ಪಕ್ಷದ ಆಕಾಂಕ್ಷಿತರನ್ನು ಮತ್ತೂಬ್ಬ ಟಿಕೆಟ್‌ ಆಕಾಂಕ್ಷಿ ಚುನಾವಣೆಗೆ ಸ್ಪರ್ಧಿಸದಂತೆ ಸಮಾಧಾನಗೊಳಿಸಲು ರಾತ್ರಿಯ ಪಾನಗೋಷ್ಠಿಗಳು ಹೆಚ್ಚಾಗಿ ನಡೆಯುತ್ತಿವೆ.

ಜಿಲ್ಲೆಯ ಮೂರು ಪಕ್ಷ ಗಳಿಗೆ ಪ್ರತಿಷ್ಠೆಯ ಚುನಾವಣೆ :  ಜಿಲ್ಲೆಯಲ್ಲಿ ಯಾವುದೇ ಚುನಾವಣೆ ಬಂದರೂ ಅತಿ ಹೆಚ್ಚು ಪೈಪೋಟಿ ಎದುರಾಗುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ನಡುವೆ ಮಾತ್ರ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ 3797 ಸದಸ್ಯ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ಪೈಪೋಟಿ ನೀಡಲು ಮುಂದಾಗಿದೆ. ಇದರಿಂದ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಈಗಾಗಲೇ ಬಿಜೆಪಿ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಗ್ರಾಮ ಸ್ವರಾಜ್ಯ ಸಮಾವೇಶ ಮಾಡುತ್ತಿದೆ. ಇತ್ತ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿವೆ. ಕಳೆದ ಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಜೆಡಿಎಸ್‌ 2ನೇ ಸ್ಥಾನದಲ್ಲಿತ್ತು.

ನಾಮಪತ್ರ ಸಲ್ಲಿಕೆಗೆ ಸಿದ್ಧತೆ : ಡಿ.11ರಿಂದ ಮೊದಲ ಹಂತದ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕು ವ್ಯಾಪ್ತಿಯ ಗ್ರಾಪಂಗಳಿಗೆ ಹಾಗೂ 2ನೇ ಹಂತದಲ್ಲಿ ಪಾಂಡವಪುರ,ಕೆ.ಆರ್‌.ಪೇಟೆ, ನಾಗಮಂಗಲ ಹಾಗೂ ಶ್ರೀರಂಗಪಟ್ಟಣ ತಾಲೂಕುಗಳಲ್ಲಿ ಡಿ.16ರಿಂದ ಉಮೇದುವಾರಿಕೆ ಸಲ್ಲಿಕೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಆಕಾಂಕ್ಷಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳ ಸಂಗ್ರಹಕ್ಕೆ ತಾಲೂಕು, ನಾಡ ಕಚೇರಿಗಳಿಗೆ ಎಡತಾಕುತ್ತಿದ್ದಾರೆ.

ಚಿಹ್ನೆಗಳ ಆಯ್ಕೆಗೆ ಜ್ಯೋತಿಷಿಗಳ ಮೋರೆ :  ಗೆಲುವಿನ ನಿರ್ಧಾರವೂ ಸಹ ಚಿಹ್ನೆಗಳ ಮೇಲೆ ಅವಲಂಬಿತವಾಗುತ್ತದೆ ಎಂಬ ನಂಬಿಕೆ ಅಭ್ಯರ್ಥಿಗಳಲ್ಲಿರುವುದರಿಂದ ಯಾವ ಚಿಹ್ನೆ ಪಡೆದರೆ ಸೂಕ್ತಎಂಬ ನಿರ್ಧಾರಕ್ಕೆ ಜೋತಿಷಿ ಹಾಗೂ ಹಿರಿಯ ಮುಖಂಡರಸಲಹೆಗಳಿಗೆ ಮುಂದಾಗಿದ್ದಾರೆ.ಕಳೆದ ಬಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ್‌ ಪಡೆದಿದ್ದ ಕಹಳೆ ಊದುವ ಮನುಷ್ಯನ ಚಿಹ್ನೆ ಹೆಚ್ಚು ಪ್ರಚಲಿತಗೊಂಡಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿದೆ. ಆದರೆ, ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಈ ಚಿಹ್ನೆ ಪಡೆಯಲು ಹಿಂದೇಟು ಹಾಕುತ್ತಿದ್ದರೆ,ಯಾವುದೇ ಪಕ್ಷಗಳ ಬೆಂಬಲ ಇಲ್ಲದೆ ನಿಲ್ಲುವ ಪಕ್ಷೇತರ ಅಭ್ಯರ್ಥಿಗಳು ಈ ಚಿಹ್ನೆ ಪಡೆಯಲು ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿಕೇಳಿ ಬರುತ್ತಿದೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.