ವಿವಿಧ ಗ್ರಾಪಂ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Team Udayavani, May 17, 2022, 3:17 PM IST
ಮಂಡ್ಯ: ಜಿಲ್ಲೆಯಲ್ಲಿ ಖಾಲಿ ಇರುವ ಮುದಗಂದೂರು, ಮಂಡ್ಯ ಗ್ರಾಮಾಂತರ, ಕೊಪ್ಪ, ಕದಲೂರು, ಅಣ್ಣೂರುಗ್ರಾಪಂಗಳಿಗೆ ಮೇ 20ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಮತಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ.
ಮತದಾನದ ಸಂದರ್ಭದಲ್ಲಿ ಅಹಿತಕರ ಕೃತ್ಯ ಕೈಗೊಳ್ಳಬಹುದಾದ ಸಾಧ್ಯತೆಗಳಿದ್ದು, ಇಂತಹ ಕೃತ್ಯಗಳನ್ನು ನಿಯಂತ್ರಿಸಲು ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮೇ 20ರ ಬೆಳಗ್ಗೆ 5ರಿಂದ ಸಂಜೆ 6ರವರೆಗೆ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಅಣಕು ಪ್ರದರ್ಶನ ನಿಷಿದ್ಧ: ಮತದಾನ ನಡೆಯುವ ಗ್ರಾಪಂ ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿ ಯಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆಯುವಂತಿಲ್ಲ. ನಿಷೇಧಾಜ್ಞೆ ಇರುವ ಯಾವುದೇ ಪ್ರದೇಶದಲ್ಲಿಯೂ ಜನ ಮಾರಕಾಸ್ತ್ರ ಹಿಡಿದು ತಿರುಗಾಡುವಂತಿಲ್ಲ. ಯಾವುದೇ ಮೆರವಣಿಗೆ ಸಭೆ-ಸಮಾರಂಭ ಮಾಡುವಂತಿಲ್ಲ. ಪಟಾಕಿ ಸಿಡಿಮದ್ದು ಹಾಗೂ ಇತರೆ ಸ್ಫೋಟಕಗಳನ್ನು ಉಪಯೋಗಿಸುವಂತಿಲ್ಲ. ಮನುಷ್ಯ ಶವಗಳ ಅಥವಾ ಪ್ರತಿಕೃತಿ ಅಣುಕುಗಳ ಪ್ರದರ್ಶನಮಾಡುವುದನ್ನು ನಿರ್ಬಂಧಿಸಲಾಗಿದೆ.
ಅನ್ವಯಿಸುವುದಿಲ್ಲ: ಬಹಿರಂಗವಾಗಿ ಘೋಷಣೆ ಮಾಡುವುದು, ಪ್ರಚೋಧನಾತ್ಮಕ ಮತ್ತು ಉದ್ರೇಕಕಾರಿ, ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿ ಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ನಿಷೇಧಾಜ್ಞೆಯೂ ಸದುದ್ದೇಶದ ಮದುವೆ, ಶವಸಂಸ್ಕಾರ ಕಾರ್ಯಗಳಿಗೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣೆ ಕಾರ್ಯಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ-ಸಿಬ್ಬಂದಿ ವರ್ಗದವರಿಗೆ ಮತ್ತು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಂತೆ ಜಾತ್ರೆ ನಿಷೇಧ: ಉಪಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಮೇ 20ರಂದು ಯಾವುದೇ ಜಾತ್ರೆ(ದನಗಳ ಜಾತ್ರೆ ಸೇರಿದಂತೆ), ಸಂತೆ ಹಾಗೂ ಇತ್ಯಾದಿ ಉತ್ಸವ ನಿಷೇ ಧಿಸಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.