ಪ್ರೀತಿ ತೋರಿಸುವ ನೀವು ಚುನಾವಣೆಯಲ್ಲಿ ಕೈಬಿಟ್ರಿ: ಮಂಡ್ಯದಲ್ಲಿ ಕುಮಾರಸ್ವಾಮಿ ಭಾವುಕ ಭಾಷಣ
Team Udayavani, Nov 22, 2020, 12:52 PM IST
ಮದ್ದೂರು: ಜಿಲ್ಲೆಗೆ ಬಂದಾಗ ನೀವು ಪ್ರೀತಿ, ವಿಶ್ವಾಸ ತೋರಿಸುತ್ತೀರಿ. ಆದರೆ ಚುನಾವಣೆ ಬಂದಾಗ ನನ್ನನ್ನು ಕೈಬಿಟ್ಟಿದ್ದೀರಾ. ನನ್ನ ಮಗನನ್ನು ಸೋಲಿಸಿದಿರಿ. ಇದರಲ್ಲಿ ನಮ್ಮದು ತಪ್ಪಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾವುಕರಾದರು.
ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಮಾರುತಿ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದೆ. ಅದನ್ನೇ ಬಿಜೆಪಿಯವರು ಮಂಡ್ಯ ಬಜೆಟ್ ಎಂದು ಬಿಂಬಿಸಿದರು. ಆದರೂ ನಾನೂ ಜಿಲ್ಲೆಗೆ 9 ಸಾವಿರ ಕೋಟಿ ರೂ. ನೀಡಿ ಅಭಿವೃದ್ಧಿಗೆ ಚಾಲನೆ ನೀಡಿದೆ. ಆದರೆ ಚುನಾವಣೆಯಲ್ಲಿ ಸೋಲಿಸಿದಿರಿ. ಬೇಡ ಎಂದರೂ ಎಲ್ಲರೂ ನಿಖಿಲ್ ನಿಲ್ಲಿಸುವಂತೆ ಒತ್ತಾಯಿಸಿದಿರಿ. ನಿಲ್ಲಿಸಿದಾಗ ಸೋಲಿಸಿದಿರಿ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿಯಿಂದ ದೇಶಕ್ಕೆ ಆತಂಕ
ದೇಶದಲ್ಲಿ ಬಿಜೆಪಿ ಪಕ್ಷ ಬೆಳೆದಂತೆ ದೇಶಕ್ಕೆ ಅನಾಹುತ ತಂದೊಡ್ಡಲಿದೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಉತ್ತರ ಕರ್ನಾಟಕದ ಜನರು ನೆರೆ ಹಾವಳಿಗೆ ತುತ್ತಾದಾಗ 10 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಆದರೂ ಜನರ ಜೆಡಿಎಸ್‌ಗೆ ಮತ ನೀಡದೆ ಬಿಜೆಪಿಗೆ ಮತ ನೀಡಿದರು ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಚತುರ್ಮುಖೀ ಸಂಪುಟ! ನಾಲ್ವರ ಸುತ್ತ ಗಿರಕಿ ಹೊಡೆಯುತ್ತಿರುವ ಪುನಾರಚನೆ ಸಂಕಟ
25 ಸಾವಿರ ಕೋಟಿ ರೂ. ಸಾಲಮನ್ನ
ರಾಜ್ಯದ ರೈತರ ಹಿತದೃಷ್ಟಿಯಿಂದ 25 ಸಾವಿರ ಕೋಟಿ ರೂ. ಸಾಲಮನ್ನ ಘೋಷಣೆ ಮಾಡಿದೆ. ಯಾವ ಮುಖ್ಯಮಂತ್ರಿಯೂ ಮಾಡದ ಕೆಲಸವನ್ನು ಮಾಡಿದ್ದೆ. ಜಿಲ್ಲೆಯ ರೈತರ 550 ಕೋಟಿ ರೂ. ಸಾಲಮನ್ನಾ ಮಾಡಿದೆ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಜಿಲ್ಲೆಗೆ ಆಗಮಿಸಿ ಮೃತ ರೈತ ಕುಟುಂಬಗಳಿಗೆ ಸಾಂತ್ವಾನ ಹೇಳುವ ಮೂಲಕ 200 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಆತ್ಮಸ್ಥೆರ್ಯ ತುಂಬಿದ್ದೇನೆ. ಇದಕ್ಕೆ ನೀವು ಜಿಲ್ಲೆಯಲ್ಲಿ 7 ಶಾಸಕರನ್ನು ನೀಡುವ ಮೂಲಕ ನಾನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು ಎಂದು ಹೇಳಿದರು.
ಕೈ ನಾಯಕರ ಬಲವಂತಕ್ಕೆ ಸಿಎಂ ಆದೆ
ನಾನು ಅಧಿಕಾರಕ್ಕಾಗಿ ಎಂದೂ ಮುಖ್ಯಮಂತ್ರಿಯಾದವನಲ್ಲ. ದೆಹಲಿಯ ಕಾಂಗ್ರೆಸ್ ನಾಯಕರು ಬಲವಂತ ಮಾಡಿದ್ದರಿಂದ ಅನಿವಾರ್ಯವಾಗಿ ಮುಖ್ಯಮಂತ್ರಿಯಾಗಬೇಕಾಯಿತು. ಆದರೆ ಇಲ್ಲಿನ ರಾಜ್ಯ ನಾಯಕರು ನನಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಬಿಡಲಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ತೊಡಕು ಮಾಡುತ್ತಾ, ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕುತಂತ್ರ ಮಾಡಿದರು. ಆದರೂ 14 ತಿಂಗಳು ಸಂಕಷ್ಟದಲ್ಲಿಯೇ ನಿಮ್ಮ ಸೇವೆ ಮಾಡಿದ್ದೇನೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ರಾಜ್ಯಾದ್ಯಂತ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆದಿದ್ದೇನೆ. ಆದರೆ ಅದನ್ನು ಈಗಿನ ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮೈಷುಗರ್ ಖಾಸಗೀಕರಣಕ್ಕೆ ವಿರೋಧ
ಮೈಷುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ಸರ್ಕಾರ ವಹಿಸುತ್ತಿರುವುದು ಸರಿಯಲ್ಲ. ಅದನ್ನು ವಿರೋಧ ಮಾಡುತ್ತೇನೆ. ಸರ್ಕಾರವೇ ನಡೆಸಬೇಕು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಹೊಸ ಮಿಲ್ ಅಳವಡಿಸಲು ಎಲ್ಲ ರೀತಿಯ ಯೋಜನೆ ರೂಪಿಸಿದ್ದೆ ಎಂದು ಹೇಳಿದರು.
ರಾಜಕೀಯ ನಿವೃತ್ತಿ ಪಡೆಯಲ್ಲ
ಚುನಾವಣೆಗಳಿಂದ ಬೇಸತ್ತು ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ್ದೆ. ಆದರೆ ನಿಮ್ಮ ಪ್ರೀತಿ, ವಿಶ್ವಾಸ ಕಂಡು ಆ ನಿರ್ಧಾರದಿಂದ ಹಿಂದೆ ಸರಿದಿದ್ದು, ಮುಂದುವರೆಯಲು ತೀರ್ಮಾನಿಸಿದ್ದೇನೆ. ಮುಂದಿನ ದಿನಗಳಲ್ಲಿ ನನಗೆ ರಾಜಕೀಯ ಶಕ್ತಿ ತುಂಬಲು ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ದೇವೇಗೌಡರ ಕುಟುಂಬ ಸದಾ ಜಿಲ್ಲೆಯ ಜನತೆಯ ಪರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಶಾಸಕರಾದ ಡಿ.ಸಿ.ತಮ್ಮಣ್ಣ, ಎನ್.ಅಪ್ಪಾಜಿಗೌಡ, ಮಾಜಿ ಶಾಸಕಿ ಕಲ್ಪನಾಸಿದ್ದರಾಜು, ರಾಜಣ್ಣ, ಕುಮಾರ್, ಯೋಗೇಶ್, ರಾಮಕೃಷ್ಣ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.