ನಾಗಮಂಗಲ ಕೆರೆಗಳಿಗೆ ಹೇಮೆಯ ನೀರು
Team Udayavani, May 27, 2020, 6:16 AM IST
ನಾಗಮಂಗಲ: ಹೇಮಾವತಿ ಅಣೆಕಟ್ಟೆಯಿಂದ ತಾಲೂಕಿನ ಕೆರೆಗಳಿಗೆ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸುರೇಶ್ ಗೌಡ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ಹರಿದು ಬರುತ್ತಿರುವ ನೀರಿನ ಪ್ರಮಾಣ ಪರಿಶೀಲಿಸಿದರು.
ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಾಮಕಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಲ್ಲಿ ಮನವಿ ಮಾಡಲಾಗಿತ್ತು. ಇದೀಗ ನಾಲೆಗಳಿಗೆ ನೀರು ಬಿಟ್ಟಿದ್ದು, ಕೆರೆಕಟ್ಟೆಗಳಿಗೆ ಹರಿಯುತ್ತಿದೆ.
ಯಾವುದೇ ಕಾರಣಕ್ಕೂ ನೀರಿನ ಪ್ರಮಾಣ ಕಡಿಮೆ ಮಾಡದಂತೆ ಹಾಗೂ ನೀರು ಪೋಲಾಗದಂತೆ ಜಾಗೃತಿ ವಹಿಸುವಂತೆ ಮತ್ತು ಎಲ್ಲಾ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನನ್ನ ಮನವಿಗೆ ಸ್ಪಂದಿಸಿರುವ ಸಚಿವದ್ವಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ನೀರಿನ ಸಮಸ್ಯೆ ಬಗೆಹರಿಸಿ: ಕುಡಿಯುವ ನೀರು ಪೂರೈಕೆಗೆಂದು ಗ್ರಾಮದಲ್ಲಿ ಕೊಳವೆ ಬಾವಿ ತೆಗೆಸಿದ್ದೀರಿ. ಆದರೆ, ಇದುವರೆಗೂ ಪೈಪ್‌ಲೈನ್ ಕೆಲಸವಾಗಿಲ್ಲ. ವಾರ ಕ್ಕೊಮ್ಮೆ ಕುಡಿವ ನೀರು ಬಿಡುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಬಿಂಡಿಗನವಿಲೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು. ಇದಕ್ಕೆ ಶಾಸಕ ಸುರೇಶ್‌ಗೌಡ ಪ್ರತಿಕ್ರಿಯಿಸಿ ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಒಂದು ವಾರದೊಳಗೆ ಪೈಪ್‌ಲೈನ್ ಸರಿಪಡಿಸಿ ಸಾರ್ವಜನಿಕರಿಗೆ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.